MadeGowda : ಕಾವೇರಿ ಹೋರಾಟಗಾರ, ಮಾಜಿ ಸಂಸದ ಮಾದೇಗೌಡ ವಿಧಿವಶ

ಮಂಡ್ಯ : ಅನಾರೋಗ್ಯದ ಹಿನ್ನೆಲೆಯಲ್ಲಿ ಆಸ್ಪತ್ರೆಯಲ್ಲಿ ಹಲವು ದಿನಗಳಿಂದಲೂ ಚಿಕಿತ್ಸೆಯನ್ನು ಪಡೆಯುತ್ತಿದ್ದ ಕಾವೇರಿ ಹೋರಾಟಗಾರ, ಮಾಜಿ ಸಂಸದ ಜಿ.ಮಾದೇಗೌಡ ಅವರು ವಿಧಿವಶರಾಗಿದ್ದಾರೆ. ಅವರಿಗೆ 92 ವರ್ಷ ವಯಸ್ಸಾಗಿತ್ತು. ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನಲ್ಲಿರುವ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಕಳೆದ ಹಲವು ದಿನಗಳಿಂದಲೂ ಅವರು ಅನಾರೋಗ್ಯಕ್ಕೆ ತುತ್ತಾಗಿದ್ದರು. ಈ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆಯನ್ನು ನೀಡಲಾಗುತ್ತಿತ್ತು. ರಾಜಕೀಯ ಗಣ್ಯರು ಆಸ್ಪತ್ರೆಗೆ ಆಗಮಿಸಿ ಆರೋಗ್ಯವನ್ನು ವಿಚಾರಿಸಿದ್ದರು. ಆದ್ರೆ ಇಂದು ಜಿ. ಮಾದೇಗೌಡ ಅವರು ಚಿಕಿತ್ಸೆ ಫಲಕಾರಿಯಾಗದೆ ಇಂದು ಇಹಲೋಕ ತ್ಯೆಜಿಸಿದ್ದಾರೆ.

ಇದನ್ನೂ ಓದಿ : ಧರ್ಮಸ್ಥಳದಲ್ಲಿ ಆಣೆ ಪ್ರಮಾಣ ಮಾಡೋಣಾ : ನೀವು ತಂದೆಗೆ ಹುಟ್ಟಿದ್ದರೆ ಅಲ್ಲಿಗೆ ಬನ್ನಿ : ದರ್ಶನ್‌ ಗೆ ಇಂದ್ರಜಿತ್‌ ಸವಾಲು

ಮಂಡ್ಯ ಜಿಲ್ಲೆಯ ರೈತ ಹಿತರಕ್ಷಣಾ ಸಮಿತಿಯ ಅಧ್ಯಕ್ಷರಾಗಿ, ಕಾವೇರಿ ಹೋರಾಟಗಾರರಾಗಿ, ಲೋಕಸಭಾ ಸದಸ್ಯರಾಗಿ ಜಿ. ಮಾದೇಗೌಡ ಅವರು ಪ್ರಖ್ಯಾತಿಯನ್ನು ಗಳಿಸಿಕೊಂಡಿದ್ದರು. ಮಂಡ್ಯ ಜಿಲ್ಲೆಯ ಅಭಿವೃದ್ದಿಗಾಗಿ ಸಾಕಷ್ಟು ಶ್ರಮಿಸಿದ್ದಾರೆ. ಮಂಡ್ಯದಲ್ಲಿ ಗಾಂಧಿ ಭವನ ನಿರ್ಮಿಸಿದ ಖ್ಯಾತಿಯೂ ಇವರಿಗೆ ಸಲ್ಲುತ್ತದೆ. ಜಿ. ಮಾದೇಗೌಡ ಅವರ ನಿಧನಕ್ಕೆ ರಾಜಕೀಯ ಗಣ್ಯರು ಕಂಬನಿ ಮಿಡಿದಿದ್ದಾರೆ.

Comments are closed.