ಬೆಳಗಾವಿ : ರಾಸಲೀಲೆ ಸಿಡಿ ಪ್ರಕರಣದ ಆರೋಪಿ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಕೊರೊನಾ ವೈರಸ್ ಸೋಂಕಿನ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದರು, ಇದೀಗ ಜಾರಕಿಹೊಳಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಕೊರೊನಾ ವೈರಸ್ ಸೋಂಕು ದೃಢಪಟ್ಟ ಬೆನ್ನಲ್ಲೇ ರಮೇಶ್ ಜಾರಕಿಹೊಳಿ ಅವರಿಗೆ ತೀವ್ರ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿತ್ತು. ಈ ಹಿನ್ನೆಲೆಯಲ್ಲಿ ಏ. 4ರಂದು ಗೋಕಾಕ್ ತಾಲೂಕು ಆಸ್ಪತ್ರೆಗೆ ದಾಖಲಾಗಿದ್ದರು. ಬಿಪಿ, ಶುಗರ್ ಹೆಚ್ಚಾಗಿದ್ದರಿಂದಾಗಿ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು.
ಆದರೆ ರಮೇಶ್ ಜಾರಕಿಹೊಳಿ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದ ಹಿನ್ನೆಲೆಯಲ್ಲೀಗ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ. ಹೀಗಾಗಿ ಅವರು ಆಸ್ಪತ್ರೆಯಿಂದ ಮನೆಗೆ ತೆರಳಿದ್ದು, ಮನೆಯಲ್ಲಿಯೇ ಕ್ವಾರಂಟೈನ್ ಗೆ ಒಳಪಡಲಿದ್ದಾರೆ ಎಂದು ಮುಖ್ಯ ವೈದ್ಯಾಧಿಕಾರಿ ಡಾ.ರವೀಂದ್ರ ಹೇಳಿದ್ದಾರೆ.