Former CM Basavaraja Bommai : ವಿರೋಧ ಪಕ್ಷದ ನಾಯಕರಾಗ್ತಾರಾ ಬಸವರಾಜ ಬೊಮ್ಮಾಯಿ ?

ಬೆಂಗಳೂರು : ರಾಜ್ಯದಲ್ಲಿ ಕಾಂಗ್ರೆಸ್‌ ಸರಕಾರ ಅಧಿಕಾರಕ್ಕೆ ಅಧಿಕಾರಕ್ಕೆ ಬಂದು ಐವತ್ತು ದಿನಗಳೇ ಕಳೆದಿದೆ. ಆದರೆ ಬಿಜೆಪಿ ವಿರೋಧ ಪಕ್ಷದ ನಾಯಕನ (Former CM Basavaraja Bommai) ಆಯ್ಕೆಯನ್ನೇ ಮಾಡಿಲ್ಲ. ವಿರೋಧ ಪಕ್ಷದ ನಾಯಕನ ಹುದ್ದೆಯ ಮೇಲೆ ಸಾಕಷ್ಟು ಮಂದಿ ಕಣ್ಣಿಟ್ಟಿದ್ದಾರೆ. ಇನ್ನು ಕೆಲವರು ಬಿಜೆಪಿ ರಾಜ್ಯಾಧ್ಯಕ್ಷರಾಗುವ ಕನಸು ಕಾಣುತ್ತಿದ್ದಾರೆ. ಈ ನಡುವಲ್ಲೇ ನಾಳೆ ರಾಜ್ಯದಲ್ಲಿ ವಿರೋಧ ಪಕ್ಷದ ನಾಯಕನ ಆಯ್ಕೆ ನಡೆಯಲಿದ್ದು, ಮಾಜಿ ಸಿಎಂ ಬಸವರಾಜ್‌ ಬೊಮ್ಮಾಯಿ ಅವರ ಹೆಸರು ಇದೀಗ ಮುಂಚೂಣಿಯಲ್ಲಿ ಕೇಳಿಬರುತ್ತಿದೆ.

ಬಿಜೆಪಿ ರಾಜ್ಯಾಧ್ಯಕ್ಷ, ವಿಪಕ್ಷ ನಾಯಕರ ಆಯ್ಕೆಯ ಬಗ್ಗೆಯೂ ಸದನದಲ್ಲಿ ಚರ್ಚೆ ನಡೆದಿದೆ. ಈ ಕುರಿತು ಚರ್ಚಿಸಲು ನಾಳೆ ಬಿಜೆಪಿ ಶಾಸಕಾಂಗ ಪಕ್ಷದ ಮಹತ್ವದ ಸಭೆ ಕರೆಯಲಾಗಿದೆ. ಈ ಹಿಂದೆ ದೆಹಲಿಯಲ್ಲಿ ಕೇಂದ್ರ ನಾಯಕರ ಜತೆಗಿನ ಚರ್ಚೆಯಲ್ಲಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರ ಹೆಸರನ್ನು ಪ್ರತಿಪಕ್ಷ ನಾಯಕರನ್ನಾಗಿ ಪ್ರಸ್ತಾಪಿಸಲಾಗಿದೆ ಎಂದು ಬಿಜೆಪಿ ಉನ್ನತ ಮೂಲಗಳಿಂದ ತಿಳಿದು ಬಂದಿದೆ.

ಉಭಯ ಸದನಗಳ ವಿಪಕ್ಷ ನಾಯಕ ಹಾಗೂ ರಾಜ್ಯಾಧ್ಯಕ್ಷರ ಆಯ್ಕೆ ಕುರಿತು ಕೇಂದ್ರ ನಾಯಕರೊಂದಿಗೆ ಚರ್ಚಿಸಲು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ದೆಹಲಿಗೆ ತೆರಳಿದ್ದರು. ಬೆಂಗಳೂರಿಗೆ ಮರಳುವ ಮುನ್ನ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೊಂದಿಗೆ ಮಾತುಕತೆ ನಡೆಸಿದ್ದು, ನಾಳೆ ವಿಪಕ್ಷ ನಾಯಕರ ಹೆಸರನ್ನು ಸಲ್ಲಿಸಲಾಗುವುದು ಎಂದು ಹೇಳಿದರು.

ಇದನ್ನೂ ಓದಿ : Karnataka Budget Session : ನಾಳೆಯಿಂದ ಕರ್ನಾಟಕ ಬಜೆಟ್ ಅಧಿವೇಶನ ಆರಂಭ : ನಿಷೇಧಾಜ್ಞೆ ಜಾರಿ

ಇದನ್ನೂ ಓದಿ : DK Suresh : ಲೋಕಸಭೆ ಚುನಾವಣೆಯಿಂದ ದೂರ, ರಾಜಕೀಯ ವೈರಾಗ್ಯದ ಮಾತನ್ನಾಡಿದ ಡಿಕೆ ಸುರೇಶ್‌

ನಾಳೆ ಬಿಜೆಪಿ ಶಾಸಕಾಂಗ ಪಕ್ಷದ ಮಹತ್ವದ ಸಭೆ ನಿಗದಿಯಾಗಿದೆ. ಈ ಸಭೆಯಲ್ಲಿ ವಿಧಾನಸಭೆ, ಪರಿಷತ್ ಪ್ರತಿಪಕ್ಷ ನಾಯಕ ಸೇರಿದಂತೆ ವಿರೋಧ ಪಕ್ಷದ ನಾಯಕ ಸ್ಥಾನಕ್ಕೆ ಯಾರನ್ನು ಆಯ್ಕೆ ಮಾಡಬೇಕು ಎಂಬ ಬಗ್ಗೆ ಚರ್ಚೆ ನಡೆಯಲಿದೆ. ಮುಖ್ಯಮಂತ್ರಿಯಾಗಿ ಅನುಭವ ಹೊಂದಿರುವ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರನ್ನು ಪ್ರತಿಪಕ್ಷ ನಾಯಕರನ್ನಾಗಿ ಆಯ್ಕೆ ಮಾಡುವುದು ಬಹುತೇಕ ಖಚಿತವಾಗಿದೆ. ರಾಜ್ಯ ಕಾಂಗ್ರೆಸ್ ಸರಕಾರಕ್ಕೆ ಸವಾಲೆಸೆಯಲು ಬಿಜೆಪಿ ಬೊಮ್ಮಾಯಿ ಅವರನ್ನು ವಿರೋಧ ಪಕ್ಷದ ನಾಯಕರನ್ನಾಗಿ ಆಯ್ಕೆ ಮಾಡುವ ಸಾಧ್ಯತೆ ಇದೆ.

Former CM Basavaraja Bommai: Is Basavaraja Bommai the Leader of the Opposition?

Comments are closed.