Former PM HD Deve Gowda : ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಆಸ್ಪತ್ರೆಗೆ ದಾಖಲು

ಬೆಂಗಳೂರು : ಮಾಜಿ ಪ್ರಧಾನಿ ಎಚ್.‌ ಡಿ.ದೇವೇಗೌಡ ( Former PM HD Deve Gowda ) ‌ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರಿಗೆ ಕೊರೊನಾ ವೈರಸ್‌ ಸೋಂಕು ದೃಢಪಟ್ಟಿದೆ. ಈ ಹಿಂದೆಯೂ ಅವರಿಗೆ ಕೊರೊನಾ ಸೋಂಕು ಕಾಡಿತ್ತು. ಈ ಹಿನ್ನೆಲೆಯಲ್ಲೀಗ ದೇವೇಗೌಡರಿಗೆ ಖಾಸಗಿ ಆಸ್ಪತ್ರೆಗೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಎಚ್.ಡಿ.ದೇವೇಗೌಡರಿಗೆ ಕೆಮ್ಮು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಕೊರೊನಾ ಟೆಸ್ಟ್‌ ಮಾಡಿಸಿಕೊಂಡಿದ್ದರು. ಈ ವೇಳೆಯಲ್ಲಿ ಕೊರೊನಾ ವೈರಸ್‌ ಸೋಂಕು ಇರುವುದು ದೃಢಪಟ್ಟಿತ್ತು. ಆದ್ರೀಗ ದೊಡ್ಡ ಗೌಡರ ಆರೋಗ್ಯ ಸ್ಥಿರವಾಗಿದೆ ಎಂದು ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ. ಈ ಹಿಂದೆ ಜನವರಿ 15ರಂದು ದೇವೇಗೌಡರ ಸೊಸೆ ಶಾಸಕಿ ಅನಿತಾ ಕುಮಾರಸ್ವಾಮಿಗೆ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿತ್ತು. ಇದೀಗ ದೇವೇಗೌಡರಿಗೂ ಕೊರೊನಾ ಸೋಂಕು ಕಾಣಿಸಿಕೊಂಡಿದೆ.

ಮುಖ್ಯಮಂತ್ರಿ ಬಸವರಾಜ್‌ ಬೊಮ್ಮಾಯಿ ಅವರು ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ್ದು, ದೇವೇಗೌಡರು ಶೀಘ್ರದಲ್ಲಿಯೇ ಚೇತರಿಸಿಕೊಳ್ಳಲಿ, ಅವರ ಕುಟುಂಬಸ್ಥರು ಹಾಗೂ ಆಸ್ಪತ್ರೆಯ ವೈದ್ಯರ ಬಳಿಯಲ್ಲಿಯೂ ಮಾತನಾಡುತ್ತೇನೆ ಎಂದಿದ್ದಾರೆ. ಬಸವರಾಜ್‌ ಬೊಮ್ಮಾಯಿ ಅವರು ಕೂಡ ಇತ್ತೀಚಿಗಷ್ಟೇ ಕೊರೊನಾ ವೈರಸ್‌ ಸೋಂಕಿನಿಂದ ಗುಣಮುಖರಾಗಿದ್ದರು.

ಅಲ್ಲದೇ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಕೂಡ ಪ್ರತಿಕ್ರೀಯಿಸಿದ್ದು, ಮಾಜಿ ಮುಖ್ಯಮಂತ್ರಿ ಎಚ್.ಡಿ.ದೇವೇಗೌಡ ಅವರು ಶೀಘ್ರದಲ್ಲಿಯೇ ಚೇತರಿಸಿಕೊಳ್ಳಲಿ ಎಂದು ಟ್ವೀಟ್‌ ಮಾಡಿದ್ದಾರೆ.

ದೇಶದಲ್ಲಿ ಒಂದೇ ದಿನದಲ್ಲಿ 3.37 ಲಕ್ಷ ಹೊಸ ಕೊರೊನಾ ಪ್ರಕರಣ ವರದಿ

ದೇಶದಲ್ಲಿ ಕೊರೊನಾ ರೌದ್ರಾವತಾರ ಇಂದೂ ಕೂಡ ಮುಂದುವರಿದಿದೆ. ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 3,37,704 ಹೊಸ ಕೋವಿಡ್​ ಪ್ರಕರಣಗಳು ವರದಿಯಾಗಿದೆ. ಅಲ್ಲದೇ ಒಂದು ದಿನದಲ್ಲಿ 488 ಮಂದಿ ಕೊರೊನಾದಿಂದ ಮೃತಪಟ್ಟಿದ್ದಾರೆ. ಕೇಂದ್ರ ಆರೋಗ್ಯ ಸಚಿವಾಲಯವು ನೀಡಿರುವ ಅಧಿಕೃತ ಮಾಹಿತಿಯ ಪ್ರಕಾರ ಕಳೆದ 24 ಗಂಟೆಗಳಲ್ಲಿ ಒಟ್ಟು 2,42,676 ಮಂದಿ ಕೊರೊನಾದಿಂದ ಗುಣಮುಖರಾಗಿ ಡಿಸ್ಚಾರ್ಜ್​ ಆಗಿದ್ದಾರೆ. ಈ ಮೂಲಕ ದೇಶದಲ್ಲಿ ರಿಕವರಿ ದರ 93.50 ಪ್ರತಿಶತವಾಗಿದೆ. ದೇಶದಲ್ಲಿ ಕೋವಿಡ್​ 19ನ ಒಟ್ಟು ಸಕ್ರಿಯ ಪ್ರಕರಣಗಳು 21,13,365ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.ದೇಶದಲ್ಲಿ ಒಟ್ಟು ಸಾವಿನ ಸಂಖ್ಯೆ 4,88,884 ಆಗಿದೆ . 2020ರ ಮಾರ್ಚ್ ತಿಂಗಳಿನಲ್ಲಿ ಕೋವಿಡ್​ ಸಾಂಕ್ರಾಮಿಕದಿಂದ ದೇಶದಲ್ಲಿ ಸಾವನ್ನಪ್ಪಿದ್ದರು.

ಈ ನಡುವೆ ದೇಶದಲ್ಲಿ ಓಮಿಕ್ರಾನ್​​ ಪ್ರಕರಣವು 10,050ಕ್ಕೆ ತಲುಪಿದೆ. ನಿನ್ನೆಗಿಂತ ಇಂದಿಗೆ ದೇಶದಲ್ಲಿ 3.69 ಪ್ರತಿಶತ ಹೆಚ್ಚಿಗೆ ಕೋವಿಡ್​ ಪ್ರಕರಣ ವರದಿಯಾಗಿದೆ. ದೈನಂದಿನ ಕೋವಿಡ್ ಪಾಸಿಟಿವ್​​ ದರವು 17.22 ಪ್ರತಿಶತವಾಗಿದೆ. ಇಂಡಿಯನ್​ ಕೌನ್ಸಿಲ್​ ಆಫ್​ ಮೆಡಿಕಲ್​ ರಿಸರ್ಚ್ ನೀಡಿರುವ ಮಾಹಿತಿಯ ಪ್ರಕಾರ ದೇಶದಲ್ಲಿ ಈವರೆಗೆ 71,34,99,892 ಸ್ಯಾಂಪಲ್​ಗಳನ್ನು ಪರೀಕ್ಷೆ ಮಾಡಲಾಗಿದೆ. ಇದರಲ್ಲಿ 19,60,954 ಸ್ಯಾಂಪಲ್​ಗಳನ್ನು ಶುಕ್ರವಾರದಂದು ಪರೀಕ್ಷಿಸಲಾಗಿದೆ.

ಇದನ್ನೂ ಓದಿ : ಬಿ.ಕೆ.ಹರಿಪ್ರಸಾದ್‌ vs ರಮಾನಾಥ ರೈ : ಬೆಂಬಲಿಗರ ಗಲಾಟೆಗೆ ಹೈಕಮಾಂಡ್‌ ಗರಂ

ಇದನ್ನೂ ಓದಿ : ಮಾಜಿ ಸಿಎಂ ಪುತ್ರನಿಗೆ ಬಿಜೆಪಿ ಟಿಕೇಟ್ ಇಲ್ಲ: ಸ್ವತಂತ್ರವಾಗಿ ಕಣಕ್ಕಿಳಿಯಲು ನಿರ್ಧರಿಸಿದ ಉತ್ಪಲ್ ಪರಿಕ್ಕರ್

(former pm HD Deve Gowda suffers from corona virus infection, admitted private hospital)

Comments are closed.