ಕೊನೆಗೂ ಗೀತಾ ಶಿವರಾಜ್‌ಕುಮಾರ್ ಕಾಂಗ್ರೆಸ್ ಸೇರುವ ಬಗ್ಗೆ ಮಾಹಿತಿ ನೀಡಿದ ಶಿವರಾಜ್‌ಕುಮಾರ್

ಸ್ಯಾಂಡಲ್‌ವುಡ್‌ ಸೆಂಚುರಿ ಸ್ಟಾರ್ ನಟ ಶಿವರಾಜ್‌ಕುಮಾರ್‌ ಪತ್ನಿ ಗೀತಾ ಶಿವರಾಜ್‌ಕುಮಾರ್ (Geetha Shiva Rajkumar join Congress party) ಅವರು ರಾಜ್ಯದಲ್ಲಿ ವಿಧಾನಸಭಾ ಚುನಾವಣೆಗೆ ಮುನ್ನ ಶುಕ್ರವಾರ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರ ಸಮ್ಮುಖದಲ್ಲಿ ಅವರು ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ. ಹೀಗಾಗಿ ಕರ್ನಾಟಕ ಚುನಾವಣೆ 2023 ಮುನ್ನ ಗೀತಾ ಶಿವರಾಜ್‌ಕುಮಾರ್ ಕಾಂಗ್ರೆಸ್ ಸೇರುವ ಬಗ್ಗೆ ಕೊನೆಗೂ ಶಿವರಾಜ್‌ಕುಮಾರ್ ಮಾತನಾಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಶಿವರಾಜ್‌ಕುಮಾರ್, ಗೀತಾ ಅವರು ಕಾಂಗ್ರೆಸ್‌ಗೆ ಸೇರ್ಪಡೆಯಾಗುತ್ತಿರುವುದು ಸಂತಸದ ವಿಷಯವಾಗಿದ್ದು, ನಾಳೆಯಿಂದ ಸೊರಬದಲ್ಲಿ ಪ್ರಚಾರಕ್ಕೆ ತೆರಳಲಿದ್ದಾರೆ. ಅವರ ಜೊತೆ ನಾನೂ ಕೂಡ ಪ್ರಚಾರ ಕಾರ್ಯದಲ್ಲಿ ಇರುತ್ತೇನೆ. ಸೊರಬದಲ್ಲಿ ಮಾಡಾದು ಮತ್ತು ಅವರ ಮಾವ ಭೀಮಾ ನಾಯಕ್ ಶಿರಸಿಯಲ್ಲಿ ಚುನಾವಣೆಗೆ ಸ್ಪರ್ಧಿಸಿದ್ದರು. ಇಬ್ಬರೂ ಗೆಲ್ಲಲಿ ಎಂದು ಹಾರೈಸುತ್ತೇನೆ ಎಂದು ಹೇಳಿದ್ದಾರೆ. ಮಾಜಿ ಮುಖ್ಯಮಂತ್ರಿ ದಿ. ಬಂಗಾರಪ್ಪ ಅವರ ಪುತ್ರಿ ಗೀತಾ 2014ರ ಲೋಕಸಭೆ ಚುನಾವಣೆಯಲ್ಲಿ ಜೆಡಿಎಸ್‌ನಿಂದ ಸ್ಪರ್ಧಿಸಿದ್ದರು.

ಇದೇ ವೇಳೆ ಜೆಡಿಎಸ್‌ನಲ್ಲಿರುವ ಸಹೋದರ ಮಧುಬಂಗಾರಪ್ಪ ಇತ್ತೀಚೆಗೆ ಕಾಂಗ್ರೆಸ್‌ಗೆ ಸೇರ್ಪಡೆಯಾಗಿದ್ದು, ಸೊರಬದಿಂದ ಕಾಂಗ್ರೆಸ್‌ನ ಅಧಿಕೃತ ಅಭ್ಯರ್ಥಿಯಾಗಿದ್ದಾರೆ. ಹೀಗಾಗಿ ಇಂದು ಗೀತಾ ಶಿವ ರಾಜ್ ಕುಮಾರ್ ಕಾಂಗ್ರೆಸ್ ಪಕ್ಷ ಸೇರಲಿದ್ದಾರೆ. ಇಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವರಾಜ್‌ಕುಮಾರ್ ಸೇರಿದಂತೆ ಹಿರಿಯ ನಾಯಕರ ಸಮ್ಮುಖದಲ್ಲಿ ಗೀತಾ ಶಿವರಾಜ್‌ಕುಮಾರ್‌ ಕಾಂಗ್ರೆಸ್‌ ಸೇರ್ಪಡೆಯಾಗುತ್ತಿದ್ದಾರೆ. ಶಿವರಾಜ್ ಕುಮಾರ್ ಕರ್ನಾಟಕದ ಮಾಜಿ ಮುಖ್ಯಮಂತ್ರಿ ದಿವಂಗತ ಎಸ್ ಬಂಗಾರಪ್ಪ ಅವರ ಪುತ್ರಿ ದೊಡ್ಮನೆ ಸೊಸೆ ಆಗಿದ್ದಾರೆ. ಅವರು 2014 ರಲ್ಲಿ ಶಿವಮೊಗ್ಗದಿಂದ ಜನತಾ ದಳ (ಜಾತ್ಯತೀತ) ಟಿಕೆಟ್‌ನಲ್ಲಿ ಲೋಕಸಭೆ ಚುನಾವಣೆಗೆ ಸ್ಪರ್ಧಿಸಿ ವಿಫಲರಾಗಿದ್ದರು.

ಇದನ್ನೂ ಓದಿ : ಪ್ರೇಮ್‌ ನಿರ್ದೆಶನದ “ಕೆಡಿ” ಸಿನಿಮಾದ ನಾಯಕಿ ಲುಕ್‌ ರಿಲೀಸ್‌ : ಆ ನಟಿ ಯಾರು ಗೊತ್ತೇ ?

ಇದನ್ನೂ ಓದಿ : ಕರ್ನಾಟಕ ವಿಧಾನಸಭೆ ಚುನಾವಣೆ 2023 : ನಾಳೆ ಏಪ್ರಿಲ್ 29 ರಿಂದ ಮತದಾನ ಆರಂಭ

ಕಳೆದ ಕೆಲವು ವಾರಗಳಿಂದ, ಅವರು ತಮ್ಮ ಸಹೋದರ ಮಧು ಬಂಗಾರಪ್ಪ ಪರ ಪ್ರಚಾರ ನಡೆಸುತ್ತಿದ್ದಾರೆ, ಅವರು ಮೇ 10 ರಂದು ಸೊರಬ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಟಿಕೆಟ್‌ನಲ್ಲಿ ಸ್ಪರ್ಧಿಸುತ್ತಿದ್ದಾರೆ. ಅವರ ಸಹೋದರ ಕುಮಾರ್ ಬಂಗಾರಪ್ಪ ಅವರು ಬಿಜೆಪಿಯ ಹಾಲಿ ಶಾಸಕರಾಗಿದ್ದಾರೆ. ಕರ್ನಾಟಕದ 224 ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಚುನಾವಣೆಯ ಫಲಿತಾಂಶ ಮೇ 13 ರಂದು ಪ್ರಕಟವಾಗಲಿದೆ.

ಇದನ್ನೂ ಓದಿ : ‘ಪಿಎಂ ಮೋದಿ ವಿಷಕಾರಿ ಹಾವಿನಂತೆ’ ವಿವಾದತ್ಮಾಕ ಹೇಳಿಕೆಗೆ ಮಲ್ಲಿಕಾರ್ಜುನ ಖರ್ಗೆ ಯುಟರ್ನ್

Geetha Shiva Rajkumar join Congress party : Finally, Shivrajkumar gave information about Geetha Shiva Rajkumar joining Congress.

Comments are closed.