ಉದ್ಯೋಗ ಖಾತ್ರಿ ಯೋಜನೆಯಿಂದ ಮಹಾತ್ಮ ಗಾಂಧಿ ಹೆಸರು ಕೈಬಿಟ್ಟ ಕೇಂದ್ರ ಸರ್ಕಾರ..! ಕಾಂಗ್ರೆಸ್​ ಆಕ್ರೋಶ

ಲೋಕಸಭೆಯಲ್ಲಿ ಭಾರೀ ಗದ್ದಲಗಳ ನಡುವೆಯೇ ಜಿ ರಾಮ್​ ಜಿ ಮಸೂದೆ ಮಂಡನೆಯಾಗಿದೆ. ಮಹಾತ್ಮ ಗಾಂಧೀಜಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಎಂ- ನರೇಗಾ ಹೆಸರು ಬದಲಾವಣೆ ಮಾಡುವ ವಿಧೇಯಕವನ್ನು ಲೋಕಸಭೆಯಲ್ಲಿ ಮಂಡಿಸಲಾಯಿತು. ಈ ಯೋಜನೆಗೆ ರೋಜಗಾರ್​ ಮತ್ತು ಅಜೀವಿಕಾ ಮಿಷನ್​ – ವಿಬಿ ಜಿ ರಾಮ್​ ಜಿ ಎಂದು ಮರುನಾಮಕರಣ ಮಾಡುವ ವಿಧೇಯಕವನ್ನು ಕೇಂದ್ರ ಸಚಿವ ಶಿವರಾಜ್​ ಚೌಹಾಣ್​ ಮಂಡಿಸಿದ್ರು. ಆದರೆ ಇದಕ್ಕೆ ವಿರೋಧ ವ್ಯಕ್ತಪಡಿಸಿದ ಕಾಂಗ್ರೆಸ್​ ನೇತೃತ್ವದ ಇಂಡಿಯಾ ಸದಸ್ಯರು ಸದನದ ಒಳಗೂ ಹೊರಗೂ ಪ್ರತಿಭಟಿಸಿ ಆಕ್ರೋಶ ಹೊರ ಹಾಕಿದ್ರು.

ಗಾಂಧೀಜಿಯವರ ಹೆಸರನ್ನು ಈ ಯೋಜನೆಯಿಂದ ತೆಗೆದು ಹಾಕುವ ಮೂಲಕ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರನ್ನು ಅವಮಾನಿಸಲಾಗಿದೆ ಎಂಬುದು ವಿಪಕ್ಷಗಳ ಆರೋಪವಾಗಿದೆ. ಸಂಸತ್​ನಲ್ಲಿ ಈ ವಿಧೇಯಕದ ಬಗ್ಗೆ ಚರ್ಚೆ ಮುಂದುವರಿಯಲಿರುವ ಕಾರಣ ಮುಂದಿನ 3 ದಿನಗಳ ಕಾಲ ಯಾವುದೇ ಸಂಸದರು ಸಂಸತ್ತಿಗೆ ಗೈರಾಗಬಾರದು ಎಂದು ಕಾಂಗ್ರೆಸ್​ ವಿಪ್​ ಹೊರಡಿಸಿದೆ.

ಇದನ್ನೂ ಓದಿ: ರಾಜಭವನಕ್ಕೆ ಲೋಕಭವನವೆಂದು ಮರುನಾಮಕರಣ : ಕೇಂದ್ರದ ನಡೆಗೆ ರಾಜ್ಯ ಸರ್ಕಾರದಿಂದ ಆಕ್ಷೇಪ

ಇನ್ನು ಕೇಂದ್ರ ಸರ್ಕಾರದ ಈ ನಿರ್ಧಾರದ ವಿರುದ್ಧ ಇಂದು ಕಾಂಗ್ರೆಸ್​ ಪಕ್ಷವು ದೇಶವ್ಯಾಪಿ ಪ್ರತಿಭಟನೆಗೆ ನಿರ್ಧರಿಸಿದೆ. ರಾಮನ ಹೆಸರು ಎಳೆದು ತರುವ ಉದ್ದೇಶದಿಂದ ಮಹಾತ್ಮ ಗಾಂಧಿ ಹೆಸರಿಗೆ ಅವಮಾನ ಮಾಡುತ್ತಿರುವ ಬಿಜೆಪಿ ವಿರುದ್ಧ ಪ್ರತಿಯೊಂದು ಜಿಲ್ಲೆಗಳಲ್ಲಿಯೂ ಪ್ರತಿಭಟನೆ ನಡೆಯಬೇಕು ಎಂದು ಸೂಚನೆ ನೀಡಲಾಗಿದೆ. ಈ ಸಂಬಂಧ ದೇಶದ ಎಲ್ಲಾ ಕಾಂಗ್ರೆಸ್​ ಪಕ್ಷದ ರಾಜ್ಯಾಧ್ಯಕ್ಷರಿಗೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್​ ಪತ್ರದ ಮೂಲಕ ಸೂಚನೆ ನೀಡಿದ್ದಾರೆ.

ರಶ್ಮಿ ಎಸ್. | Rashmi S.

ರಶ್ಮಿ ಎಸ್. ನ್ಯೂಸ್‌ ನೆಕ್ಸ್ಟ್‌ ಕನ್ನಡ ( News Next Kannada) ದಲ್ಲಿ ಕಂಟೆಂಟ್‌ ರೈಟರ್‌ ಆಗಿ ಕೆಲಸ ಮಾಡುತ್ತಿದ್ದಾರೆ. ಪತ್ರಿಕೋದ್ಯಮ ವಿಭಾಗದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದು, ಹತ್ತು ವರ್ಷಗಳ ಕಾಲ ಕನ್ನಡ ಸುದ್ದಿ ಮಾಧ್ಯಮಗಳಲ್ಲಿ ಕೆಲಸ ಮಾಡಿದ್ದಾರೆ. ರಾಜಕೀಯ, ಕ್ರೀಡೆ, ವಾಣಿಜ್ಯ, ಸಿನಿಮಾ, ಸ್ಥಳೀಯ ಸುದ್ದಿಗಳನ್ನು ಪ್ರಕಟಿಸುತ್ತಿದ್ದಾರೆ. More »

Related Stories