ಅಕ್ಟೋಬರ್ – ನವೆಂಬರ್ ನಲ್ಲಿ ಗ್ರಾಮ ಪಂಚಾಯತ್ ಚುನಾವಣೆ

0

ಬೆಂಗಳೂರು : ರಾಜ್ಯದಲ್ಲಿ ಗ್ರಾಮ ಪಂಚಾಯತ್ ಚುನಾವಣೆಗೆ ರಾಜ್ಯ ಚುನಾವಣಾ ಆಯೋಗ ಕೊನೆಗೂ ಮುಹೂರ್ತ ಫಿಕ್ಸ್ ಮಾಡಲು ಮುಂದಾಗಿದೆ. ಈ ವರ್ಷದ ಅಕ್ಟೋಬರ್ ಅಥವಾ ನವೆಂಬರ್ ತಿಂಗಳಲ್ಲಿ ಗ್ರಾಮ ಪಂಚಾಯತ್ ಚುನಾವಣೆ ನಡೆಸುವ ಸಾಧ್ಯತೆಯಿದೆ.

5,800 ಗ್ರಾಮ ಪಂಚಾಯತ್ ಗಳಿಗೆ ಈ ವರ್ಷ ಚುನಾವಣೆ ನಡೆಯಲಿದ್ದು, ಅಗತ್ಯವಿರುವ ಪೂರ್ವ ಸಿದ್ಧತೆ ಕೈಗೊಳ್ಳಲು ಚುನಾವಣಾ ಆಯೋಗ ರಾಜ್ಯ ಪೊಲೀಸ್ ಡಿಜಿ ಮತ್ತು ಐಜಿಪಿ ಅವರಿಗೆ ಪತ್ರ ಬರೆದಿದೆ.

ಚುನಾವಣಾ ಸಮದಲ್ಲಿ ಸೂಕ್ತ ಭದ್ರತೆ ಕೈಗೊಂಡು ಕಾನೂನು ಸುವ್ಯವಸ್ಥೆ ಪಾಲಿಸುವಂತೆ ಸೂಚಿಸಿದೆ. ಚುನಾವಣಾ ಖರ್ಚು ವೆಚ್ಚಕ್ಕಾಗಿ ಹೆಚ್ಚುವರಿ ಅನುದಾನ ಬಿಡುಗಡೆ ಮಾಡುವಂತೆ ಸರ್ಕಾರಕ್ಕೆ ಮನವಿ ಮಾಡಲಾಗಿದೆ. ಪ್ರಚಾರ ಮತ್ತು ಮತದಾನದ ಕಾರ್ಯವಿಧಾನಗಳ ವಿವರಗಳೊಂದಿಗೆ ಪಂಚಾಯತ್ ಚುನಾವಣೆಗಳನ್ನು ನಡೆಸಲು ರಾಜ್ಯ ಚುನಾವಣಾ ಆಯೋಗವು ಎಸ್‌ಒಪಿಗಳನ್ನು ನೀಡಿತ್ತು.

ಈ ವರ್ಷ ಮೇ ಮತ್ತು ಜೂನ್‌ನಲ್ಲಿ ಗ್ರಾಮ ಪಂಚಾಯಿತಿಗಳ ಅಧಿಕಾರ ಅವಧಿ ಕೊನೆಗೊಂಡರೂ ಕೊರೋನಾ ಸಾಂಕ್ರಾಮಿಕ ರೋಗದಿಂದಾಗಿ ಚುನಾವಣೆ ನಡೆಸಲು ಸಾಧ್ಯವಾಗಿಲ್ಲ.

Leave A Reply

Your email address will not be published.