ಭಾನುವಾರ, ಏಪ್ರಿಲ್ 27, 2025
HomekarnatakaGruhalakshmi Scheme : ಗೃಹಲಕ್ಷೀ ಯೋಜನೆಗೆ ಅರ್ಜಿ ಸಲ್ಲಿಸಲು ಜುಲೈ 15 ಕೊನೆಯ ದಿನ :...

Gruhalakshmi Scheme : ಗೃಹಲಕ್ಷೀ ಯೋಜನೆಗೆ ಅರ್ಜಿ ಸಲ್ಲಿಸಲು ಜುಲೈ 15 ಕೊನೆಯ ದಿನ : ಅರ್ಜಿ ಸಲ್ಲಿಸುವುದು ಹೇಗೆ ? ಇಲ್ಲಿದೆ ಮಾಹಿತಿ

- Advertisement -

ಬೆಂಗಳೂರು : ರಾಜ್ಯದ ಮಹಿಳೆಯರಿಗಾಗಿ ಕಾಂಗ್ರೆಸ್‌ ಸರಕಾರ ಗೃಹಲಕ್ಷ್ಮೀ ಯೋಜನೆಯನ್ನು (Gruhalakshmi Scheme) ಜಾರಿಗೆ ತಂದಿದೆ. ಈ ಯೋಜನೆಯ ಮೂಲಕ ಮನೆಯ ಯಜಮಾನಿಯ ಖಾತೆಗೆ ಪ್ರತೀ ತಿಂಗಳು 2000 ರೂಪಾಯಿ ಜಮೆ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ಈ ಯೋಜನೆ ಲಾಭವನ್ನು ಪಡೆಯಲು ಜುಲೈ ೧೫ ಕೊನೆಯ ದಿನವಾಗಿದೆ. ಹಾಗಾದ್ರೆ ಅರ್ಜಿ ಸಲ್ಲಿಸಲು ಯಾವೆಲ್ಲಾ ದಾಖಲೆಗಳು ಬೇಕು ಅನ್ನೋ ಮಾಹಿತಿ ಇಲ್ಲಿದೆ.

ಗೃಹಲಕ್ಷ್ಮೀ ಯೋಜನೆಯ ಮೂಲಕ ಮನೆಯ ಒಡತಿಗೆ ಪ್ರತೀ ತಿಂಗಳು 2 ಸಾವಿರ ರೂಪಾಯ ನೀಡಲಾಗುತ್ತದೆ. ಮನೆಯಲ್ಲಿ ಎಷ್ಟೇ ಜನ ಮಹಿಳೆಯರಿದ್ದರೂ ಕೂಡ ಮನೆಯ ಓರ್ವ ಮಹಿಳೆಗೆ ಈ ಯೋಜನೆಯ ಲಾಭದೊರೆಯಲಿದೆ. ಈ ಪೈಕಿ ಒಂದು ಮನೆಯಿಂದ ಒಬ್ಬರು ಮಾತ್ರವೇ ಈ ಯೋಜನೆಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಬಿಪಿಎಲ್‌ ಹಾಗೂ ಎಪಿಎಲ್‌ ಕಾರ್ಡುದಾರರು ಕೂಡ ಈ ಯೋಜನೆಯ ಅಡಿಯಲ್ಲಿ ಲಾಭವನ್ನು ಪಡೆಯಲು ಅರ್ಹರಾಗಿದ್ದಾರೆ.

ಜೂನ್‌ 15 ರಿಂದ ಜುಲೈ 15 ರ ವರೆಗೆ ಅರ್ಜಿಯನ್ನು ಸಲ್ಲಿಸಲು ಅವಕಾಶವನ್ನು ಕಲ್ಪಿಸಲಾಗಿದೆ. ಅಗಸ್ಟ್‌ 15 ರಂದು ಸ್ವಾತಂತ್ರ್ಯ ದಿನಾಚರಣೆಯ ದಿನದಂದು ಈ ಯೋಜನೆಗೆ ಚಾಲನೆ ನೀಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಣೆಯನ್ನು ಮಾಡಿದ್ದಾರೆ. ಸ್ವಾತಂತ್ರ್ಯ ದಿನಾಚರಣೆಯ ದಿಣದಂದು ಮಹಿಳೆಯರು ಈ ಯೋಜನೆ ಲಾಭವನ್ನು ಪಡೆಯಲಿದ್ದಾರೆ. ಪಿಂಚಣಿ ಯೋಜನೆಯ ಲಾಭ ಪಡೆಯುತ್ತಿರುವ ಫಲಾನುಭವಿಗಳು ಕೂಡ ಈ ಯೋಜನೆಯ ಲಾಭ ಪಡೆಯಲಿದ್ದಾರೆ. ಆದರೆ ಮನೆಯಲ್ಲಿ ಅತ್ತೆಗೋ ಇಲ್ಲಾ ಸೊಸೆಗೂ ಅನ್ನೋ ಗೊಂದಲಕ್ಕೆ ಸಿದ್ದರಾಮಯ್ಯ ತೆರೆ ಎಳೆದಿದ್ದು, ಮನೆಯ ಯಜಮಾನಿ ಯಾರು ಅನ್ನೋದನ್ನು ಮನೆಯವರೇ ತೀರ್ಮಾನ ಮಾಡಬೇಕು. ಮನೆಯಿಂದ ಒಬ್ಬರೇ ಈ ಯೋಜನೆಯ ಲಾಭ ಪಡೆಯಬಹುದಾಗಿದೆ.

ಇದನ್ನೂ ಓದಿ : Declaration of Congress guarantee : ಜೂನ್‌ 11 ರಿಂದ ಮಹಿಳೆಯರಿಗೆ ಸರಕಾರಿ ಬಸ್ಸುಗಳಲ್ಲಿ ಉಚಿತ ಪ್ರಯಣ : ಸರಕಾರಿ ಉದ್ಯೋಗಸ್ಥ ಮಹಿಳೆಯರಿಗೂ ಅನ್ವಯ

ಇನ್ನು ಗೃಹಲಕ್ಷ್ಮೀ ಯೋಜನೆಯ ಅಡಿಯಲ್ಲಿ ಲಾಭವನ್ನು ಪಡೆಯಬೇಕಾದ್ರೆ ಆನ್‌ಲೈನ್‌ ಮೂಲಕ ಅರ್ಜಿಯನ್ನು ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಜೂನ್‌ 15 ರಿಂದ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಅವಕಾಶವಿದೆ. ಈ ಯೋಜನೆಯಡಿಯಲ್ಲಿ ಅರ್ಜಿ ಸಲ್ಲಿಸಲು ಮನೆಯ ಯಜಮಾನಿಯು ಕಡ್ಡಾಯವಾಗಿ ಆಧಾರ್‌ ಕಾರ್ಡ್‌, ಬ್ಯಾಂಕ್‌ ಅಕೌಂಟ್‌ ಪಾಸ್‌ ಬುಕ್‌ ಜೆರಾಕ್ಸ್‌ ಪ್ರತಿ, ಬಿಪಿಎಲ್‌ ಅಥವಾ ಎಪಿಎಲ್‌ ಕಾರ್ಡಿನ ಜೆರಾಕ್ಸ್‌ ಪ್ರತಿಯನ್ನು ನೀಡಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

Gruhalakshmi Scheme: July 15 Last Date to Apply for Gruhalakshmi Scheme: How to Apply? Here is the information

Kannada News Next Deskhttp://kannada.newsnext.live
Kannada News Next Live brings latest news from India and World on breaking news, today news headlines, politics, business, technology, Sports, Education in Kannada Language since 2020. kannada.newsnext.live it was first indexed by Google in July 2021
RELATED ARTICLES

Most Popular