HD Kumaraswamy : ಯಾವ ಪಕ್ಷದ ಜೊತೆ ಜೆಡಿಎಸ್‌ ಮೈತ್ರಿ : ಸ್ಪಷ್ಟನೆ ಕೊಟ್ಟ ಎಚ್.ಡಿ.ಕುಮಾರಸ್ವಾಮಿ

ಬೆಂಗಳೂರು : ಪಂಚ ರಾಜ್ಯ ಚುನಾವಣೆ ಬೆನ್ನಲ್ಲೇ ರಾಜ್ಯದಲ್ಲೂ ಚುನಾವಣೆ ಕಣ ರಂಗೇರತೊಡಗಿದೆ. ಅವಧಿ ಪೂರ್ವ ಚುನಾವಣೆಯಾಗಲಿದೆ ಎಂಬ ಸಂಗತಿ ಚರ್ಚೆಗೆ ಗ್ರಾಸವಾಗಿರುವ ಬೆನ್ನಲ್ಲೇ ಜೆಡಿಎಸ್ ಚುನಾವಣೆ ಎದುರಿಸಲು ಸಿದ್ಧವಾಗಿದೆ ಎಂದು ಮಾಜಿಸಿಎಂ ಎಚ್.ಡಿ.ಕುಮಾರಸ್ವಾಮಿ (HD Kumaraswamy) ಹೇಳಿದ್ದು, ಯಾವುದೇ ರಾಷ್ಟ್ರೀಯ ಪಕ್ಷದೊಂದಿಗೆ ಮೈತ್ರಿ ಸಾಧ್ಯತೆಯನ್ನು (JDS alliance) ಕುಮಾರಸ್ವಾಮಿ ನೇರವಾಗಿ ತಳ್ಳಿಹಾಕಿದ್ದಾರೆ.

ಕಲಬುರಗಿ ಯಲ್ಲಿ ನಡೆದ ಜೆಡಿಎಸ್ ಸಮಾವೇಶದಲ್ಲಿ ಮಾತನಾಡಿದ ಎಚ್.ಡಿ.ಕುಮಾರಸ್ವಾಮಿ (HD Kumaraswamy ), ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಯಾವುದೇ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ಸ್ಪಷ್ಟವಾಗಿ ಹೇಳಿದ್ದಾರೆ. ರಾಜ್ಯದಲ್ಲಿ ಅವಧಿಗೂ ಮುನ್ನವೇ ವಿಧಾನಸಭಾ ಚುನಾವಣೆ ಘೋಷಣೆಯಾಗುವ ಸಾಧ್ಯತೆ ಇದೆ.‌ ಜೆಡಿಎಸ್ ಯಾವುದೇ ಕ್ಷಣದಲ್ಲಿ ಚುನಾವಣೆ ಘೋಷಣೆಯಾದರೂ ಎದುರಿಸಲು ಸಿದ್ಧವಾಗಿದೆ. ಕಳೆದ ಎರಡು ವರ್ಷದಿಂದ ಕರೋನಾ ಕಾರಣಕ್ಕೆ ಪಕ್ಷ ಸಂಘಟನೆ ಸಾಧ್ಯವಾಗಿರಲಿಲ್ಲ. ಹೀಗಾಗಿ ಎಲ್ಲ ಜಿಲ್ಲೆಗಳಿಗೂ ತೆರಳಿ ನಾನೇ ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಳ್ಳುತ್ತಿದ್ದೇನೆ ಎಂದರು.

ಮಾತ್ರವಲ್ಲ ವಿಧಾನಸಭಾ ಚುನಾವಣೆಯನ್ನು ಜೆಡಿಎಸ್ ಏಕಾಂಗಿಯಾಗಿ ಎದುರಿಸಲಿದೆ. ನಾವು ಯಾರ ಜೊತೆಗೂ ಮೈತ್ರಿ ಮಾಡಿಕೊಳ್ಳುತ್ತಿಲ್ಲ. ನಮಗೆ ರೈಟೂ ಬೇಡ. ಲೆಫ್ಟೂ ಬೇಡ. ನಾವು ಸ್ಟ್ರೇಟ್ ಆಗಿ ಹೋಗೋಣ ಅನ್ನೋ ನಿರ್ಧಾರ ಮಾಡಿದ್ದೇವೆ ಎಂದರು. ಪಕ್ಷದ ಸಂಘಟನೆಗಾಗಿ ವಿವಿಧ ಯೋಜನೆ ಹಮ್ಮಿಕೊಂಡಿದ್ದೇವೆ. ವಿಧಾನಮಂಡಲದ ಬಜೆಟ್ ಅಧಿವೇಶನದ ಬಳಿಕ ರಾಜ್ಯದ ನೀರಾವರಿ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು ಜನತಾ ಜಲಧಾರೆ ಗಂಗಾರಥಯಾತ್ರೆಯನ್ನು ಹಮ್ಮಿಕೊಳ್ಳಲಾಗುವುದು ಎಂದರು.

ಮಾತ್ರವಲ್ಲ ರಾಜ್ಯದಾದ್ಯಂತ ನಡೆಯುವ ಜನತಾ ಜಲಧಾರೆ ಗಂಗಾರಥಯಾತ್ರೆಯಲ್ಲಿ ವಿವಿಧ ನದಿಗಳ ಉಗಮಸ್ಥಳ ಹಾಗೂ ಸಂಗಮ ಕ್ಷೇತ್ರಗಳಲ್ಲಿ ಜಲಸಂಗ್ರಹ ಮಾಡಲಾಗುವುದು. ಪುಣ್ಯಕ್ಷೇತ್ರಗಳು ಸೇರಿದಂತೆ 53 ಕ್ಷೇತ್ರಗಳಲ್ಲಿ ಜಲ‌ಸಂಗ್ರಹ ಮಾಡಲಾಗುವುದು ಎಂದು ಎಚ್ಡಿಕೆ ವಿವರಣೆ ನೀಡಿದ್ದಾರೆ. ಮಾತ್ರವಲ್ಲ 75 ವರ್ಷಗಳಿಂದ ನೀರಿನ ವಿಚಾರದಲ್ಲಿ ರಾಜ್ಯಕ್ಕೆ ಆಗಿರುವ ಅನ್ಯಾಯ ತಿಳಿಸಲು ಹಾಗೂ ನಾವು ಅಧಿಕಾರಕ್ಕೆ ಬಂದ್ರೇ ಕೈಗೊಳ್ಳುವ ಕ್ರಮಗಳ ಬಗ್ಗೆ ಗಂಗೆ ಸಾಕ್ಷಿಯಾಗಿ ಸಂಕಲ್ಪ ಮಾಡಲಾಗುವುದು ಎಂದು ಎಚ್ಡಿಕೆ ಹೇಳಿದ್ದಾರೆ. ಅಲ್ಲದೇ ಬಿಜೆಪಿ ಬಗ್ಗೆ ಜೆಡಿಎಸ್ ಗೆ ಸಾಫ್ಟ್ ಕಾರ್ನರ್ ಇದೆ. ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಳ್ಳಲಿದೆ ಎಂಬ ಮಾತಿಗೆ ಉತ್ತರಿಸಿದ ಕುಮಾರಸ್ವಾಮಿ, ಬಿಜೆಪಿ ಮಹದಾಯಿ ವಿಚಾರದಲ್ಲಿ ಜನರಿಗೆ ಮೋಸ ಮಾಡುತ್ತಿದೆ. ಯಾವ ಕಾರಣಕ್ಕೂ ಬಿಜೆಪಿ ಜೊತೆ ಮೈತ್ರಿ ಇಲ್ಲ ಎಂದು ಪುನರುಚ್ಛರಿಸಿದ್ದಾರೆ.

ಇದನ್ನೂ ಓದಿ : ಕರ್ನಾಟಕದಲ್ಲಿ ಅವಧಿ ಪೂರ್ವ ಚುನಾವಣೆ : ಎಚ್.ಡಿ. ಕುಮಾರಸ್ವಾಮಿ ಭವಿಷ್ಯ

ಇದನ್ನೂ ಓದಿ : ನವೀನ್ ಸಾವು ಪ್ರಕರಣ : ನೀಟ್ ವಿರುದ್ಧ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ತೀವ್ರ ಆಕ್ರೋಶ

( HD Kumaraswamy, the JDS alliance with which party is clear)

Comments are closed.