Nikhil Kumaraswamy : ಮುಂದಿನ ಚುನಾವಣೆಯಲ್ಲಿ ನಿಖಿಲ್​ ಕುಮಾರಸ್ವಾಮಿ ಸ್ಪರ್ಧೆ ಇಲ್ಲ : ಹೆಚ್​ಡಿಕೆ ಸ್ಪಷ್ಟನೆ

ಮಂಡ್ಯ : Nikhil Kumaraswamy : ರಾಜ್ಯ ವಿಧಾನಸಭಾ ಚುನಾವಣೆಗೆ ಇನ್ನೇನು 8 ತಿಂಗಳು ಬಾಕಿ ಉಳಿದಿದೆ. ಈಗಾಗಲೇ ರಾಜ್ಯದಲ್ಲಿ ಮುಂದಿನ ವಿಧಾನಸಭಾ ಚುನಾವಣೆಗೆ ಪೂರಕವಾದ ಅನೇಕ ಬೆಳವಣಿಗೆಗಳು ರಾಜಕೀಯ ವಲಯದಲ್ಲಿ ಉಂಟಾಗುತ್ತಿದೆ. ಕಳೆದ ಬಾರಿ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಮಂಡ್ಯದಲ್ಲಿ ಸುಮಲತಾ ಅಂಬರೀಶ್​ ಹಾಗೂ ನಿಖಿಲ್​ ಕುಮಾರಸ್ವಾಮಿ ನಡುವಿನ ಜಿದ್ದಾ ಜಿದ್ದಿನ ಹೋರಾಟ ನೆನಪಿರಬಹುದು. ಲೋಕಸಭಾ ಚುನಾವಣೆಯಲ್ಲಿ ಸೋಲನ್ನುಂಡ ಬಳಿಕ ದಳಪತಿಗಳು ನಿಖಿಲ್​ ಕುಮಾರಸ್ವಾಮಿಯನ್ನು ವಿಧಾನಸಭಾ ಚುನಾವಣೆಗೆ ನಿಲ್ಲಿಸಿ ಅವರಿಗೆ ರಾಜಕೀಯ ಪ್ರವೇಶಕ್ಕೆ ಹಾದಿ ಮಾಡುಕೊಡುತ್ತಾರೆ ಎಂದೇ ಹೇಳಲಾಗುತ್ತಿತ್ತು.

ಆದರೆ ಈ ಎಲ್ಲಾ ಊಹಾ ಪೋಹಗಳಿಗೆ ತೆರೆ ಎಳೆದಿರುವ ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ, ನಿಖಿಲ್​ ಕುಮಾರಸ್ವಾಮಿ ಮುಂದಿನ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧೆ ಮಾಡುತ್ತಿಲ್ಲ ಎಂದು ಸ್ಪಷ್ಟವಾಗಿ ಹೇಳಿದ್ದಾರೆ. ಮಂಡ್ಯದ ಮದ್ದೂರಿನಲ್ಲಿ ಈ ವಿಚಾರವಾಗಿ ಮಾತನಾಡಿದ ಅವರು ನಿಖಿಲ್​ ಕುಮಾರಸ್ವಾಮಿ ಪಕ್ಷ ಸಂಘಟನೆಯಲ್ಲಿ ಭಾಗಿಯಾಗಲಿದ್ದಾರೆ. ನಮ್ಮೊಂದಿಗೆ ಸೇರಿ ಅವರು 40ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ. ಆದರೆ ಅವರು ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧೆ ಮಾಡುತ್ತಿಲ್ಲ ಎಂದು ಹೇಳಿದರು.

ಇನ್ನು ಇದೇ ವೇಳೆ ಸೋನಿಯಾ ಗಾಂಧಿಗೆ ಇಡಿ ವಿಚಾರಣೆ ಖಂಡಿಸಿ ಕಾಂಗ್ರೆಸ್​ ಪ್ರತಿಭಟನೆ ವಿಚಾರವಾಗಿಯೂ ಮಾತನಾಡಿದ ಅವರು , ಬಿಜೆಪಿ ಸರ್ಕಾರವು ತನ್ನ ವಿರೋಧಿಗಳನ್ನು ವಿವಿಧ ಸರ್ಕಾರಿ ಸಂಸ್ಥೆಗಳನ್ನು ಬಳಸಿಕೊಂಡು ಮಟ್ಟ ಹಾಕುವ ಕೆಲಸವನ್ನು ಮಾಡುತ್ತಿದೆ. ಬಿಜೆಪಿ ಸರ್ಕಾರಕ್ಕೆ ಜನರಿಗೆ ಎರಡು ಹೊತ್ತು ಸರಿಯಾಗಿ ಊಟ ನೀಡುವ ಶಕ್ತಿಯಿಲ್ಲ. ಆದರೆ ತನಗೆ ಬೇಕಾದವರಿಗೆ 1600 ಕೋಟಿ ರೂಪಾಯಿ ಆಸ್ತಿ ಮಾಡಿಕೊಳ್ಳಲು ಅವಕಾಶ ನೀಡುತ್ತಿದ್ದಾರೆ. ಇಂತಹ ದಾಖಲೆಗಳನ್ನು ಇಟ್ಟುಕೊಂಡು ಕಾಂಗ್ರೆಸ್​ ಹೋರಾಟ ನಡೆಸಬೇಕು. ಅದನ್ನು ಬಿಟ್ಟು ಸುಖಾ ಸುಮ್ಮನೇ ರೋಡಿಗಿಳಿದರೆ ಅದರಿಂದ ಸಾರ್ವಜನಿಕರಿಗೆ ಕಿರಿಕಿರಿಯಾಗುತ್ತದೆ ಎಂದು ಸಲಹೆ ನೀಡಿದರು.

ಇದನ್ನು ಓದಿ : severed snake : ವಿಮಾನಯಾನದ ಸಸ್ಯಾಹಾರಿ ಊಟದಲ್ಲಿತ್ತು ಹಾವಿನ ತಲೆ : ವಿಡಿಯೋ ವೈರಲ್​

ಇದನ್ನೂ ಓದಿ : actress bhavana : ಕಾಂಗ್ರೆಸ್​ ಪ್ರತಿಭಟನೆಯಲ್ಲಿ ಭಾವನಾಗೆ ಕಾರ್ಯಕರ್ತರಿಂದ ಕ್ಲಾಸ್​: ಕುರ್ಚಿಗಾಗಿ ಪರದಾಡಿದ ನಟಿ

HDK clarified on the issue of Nikhil Kumaraswamy candidacy for the state assembly elections

Comments are closed.