ಮಾಜಿ ಸಿಎಂ ಎಚ್‌.ಡಿ. ಕುಮಾರಸ್ವಾಮಿಗೆ ಕೋವಿಡ್ ಸೋಂಕು ದೃಢ : ಆಸ್ಪತ್ರೆಗೆ ದಾಖಲು

ಬೆಂಗಳೂರು : ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಕೊರೊನಾ ವೈರಸ್ ಸೋಂಕು ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ಅವರು ಬೆಂಗಳೂರಿನ ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಕೋವಿಡ್ ಸೋಂಕು ದೃಢಪಟ್ಟಿರುವ ಹಿನ್ನೆಲೆಯಲ್ಲಿ ಕಳೆದ ಕೆಲ ದಿನ ಗಳಿಂದಲೂ ತನ್ನ ಸಂಪರ್ಕಕ್ಕೆ ಬಂದವರು ತಪಾಸಣೆ ಮಾಡಿಕೊಳ್ಳು ವಂತೆಯೂ ಅವರು ಟ್ವೀಟ್ ಮೂಲಕ ಮನವಿ‌ ಮಾಡಿಕೊಂಡಿದ್ದಾರೆ.

ಸಿಎಂ ಯಡಿಯೂರಪ್ಪ ಸೇರಿದಂತೆ ಚುನಾವಣಾ ಪ್ರಚಾರದಲ್ಲಿ ಪಾಲ್ಗೊಂಡಿದ್ದ ಹಲವು ಶಾಸಕರಿಗೆ ಕೊರೊನಾ ಸೋಂಕು ದೃಢಪಟ್ಟಿತ್ತು. ಇದೀಗ ಕುಮಾರಸ್ವಾಮಿ ಅವರಿಗೂ ಸೋಂಕು ಕಾಣಿಸಿಕೊಂಡಿದೆ.

Comments are closed.