Umesh Katthi : ಬಿಜೆಪಿಯಲ್ಲೂ ಶುರುವಾಯ್ತು ಸಿಎಂ ಅಭ್ಯರ್ಥಿ ಚರ್ಚೆ : ಮುಖ್ಯಮಂತ್ರಿಯಾಗಲು ನಾನು ಸಿದ್ಧನೆಂದ ಉಮೇಶ್​ ಕತ್ತಿ

ಮಂಡ್ಯ : Umesh Katthi : ರಾಜ್ಯ ವಿಧಾನಸಭಾ ಚುನಾವಣೆಗೆ ಇನ್ನೇನು ಕೆಲವೇ ತಿಂಗಳುಗಳು ಬಾಕಿ ಇರುವಾಗಲೇ ರಾಜ್ಯದಲ್ಲಿ ಸಿಎಂ ಸ್ಥಾನಕ್ಕೆ ಭಾರೀ ಪೈಪೋಟಿ ಎದುರಾಗಿದೆ. ಕಾಂಗ್ರೆಸ್​ನಲ್ಲಂತೂವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್​ ನಡುವೆ ಮುಸುಕಿನ ಗುದ್ದಾಟ ಏರ್ಪಟ್ಟಿದೆ. ಇದೀಗ ಸಿಎಂ ಸ್ಥಾನದ ರೇಸ್​ ಬಿಜೆಪಿಗೂ ವ್ಯಾಪಿಸಿರುವಂತೆ ಕಾಣುತ್ತಿದೆ . ಈ ಮಾತಿಗೆ ಪುಷ್ಠಿ ಎಂಬಂತೆ ಆಹಾರ ಮತ್ತು ನಾಗರಿಕ ಪೂರೈಕೆ ಹಾಗೂ ಅರಣ್ಯ ಸಚಿವ ಉಮೇಶ ಕತ್ತಿ ತಾವೂ ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿ ಎಂದು ಬಹಿರಂಗವಾಗಿ ಹೇಳಿದ್ದಾರೆ.


ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಶಿವನಸಮುದ್ರದ ಗಗನಚುಕ್ಕಿ ಜಲಪಾತ ಹಾಗೂ ಜಲವಿದ್ಯುತ್ ಸ್ಥಾವರವನ್ನು ವೀಕ್ಷಿಸಿದ ಬಳಿಕ ಈ ವಿಚಾರವಾಗಿ ಮಾತನಾಡಿದ ಅವರು 2023ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯು ರಾಜ್ಯದಲ್ಲಿ ಮತ್ತೆ ಅಧಿಕಾರಕ್ಕೆ ಬರುವುದರಲ್ಲಿ ಯಾವುದೇ ಸಂದೇಹವಿಲ್ಲ. ನಾನು ರಾಜ್ಯದಲ್ಲಿ ಎಂಟು ಬಾರಿ ಶಾಸಕನಾಗಿ ಆಯ್ಕೆಯಾಗಿದ್ದೇನೆ ಹಾಗೂ ಸಚಿವನಾಗಿಯೂ ಕಾರ್ಯನಿರ್ವಹಿಸುತ್ತಿದ್ದೇನೆ. ಹೀಗಾಗಿ ನನಗೂ ರಾಜ್ಯದ ಮುಖ್ಯಮಂತ್ರಿಯಾಗಿ ಜನರ ಸೇವೆ ಮಾಡಬೇಕೆಂಬ ಹಂಬಲವಿದೆ. ಆದ್ದರಿಂದ ಮುಂದಿನ ವಿಧಾನಸಭಾ ಚುನಾವಣಾ ಫಲಿತಾಂಶ ಹೊರಬಂದ ಬಳಿಕ ನಾನು ವರಿಷ್ಠರ ಬಳಿಯಲ್ಲಿ ನನಗೆ ಈ ಬಾರಿ ರಾಜ್ಯದ ಮುಖ್ಯಮಂತ್ರಿಯಾಗುವ ಅವಕಾಶ ನೀಡಿ ಎಂದು ಮನವಿ ಮಾಡುತ್ತೇನೆ ಎಂದು ಹೇಳಿದ್ದಾರೆ.

ಇನ್ನು ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರವಾಗಿಯೂ ಸ್ಪಷ್ಟನೆ ನೀಡಿದ ಅವರು, ನಾವು ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿಯೇ ಮುಂದಿನ ಚುನಾವಣೆಯನ್ನು ಎದುರಿಸಲಿದ್ದೇವೆ. ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾಗ್ತಾರೆ ಎನ್ನವುದು ಕೇವಲ ಊಹಾಪೋಹ. ಆ ರೀತಿಯ ಯಾವುದೇ ಚರ್ಚೆಯು ಪಕ್ಷದಲ್ಲಿ ನಡೆದಿಲ್ಲ ಎಂದು ಹೇಳಿದರು. ಅಲ್ಲದೇ ಬಿಎಸ್ ಯಡಿಯೂರಪ್ಪ ಬಗ್ಗೆಯೂ ಮಾತನಾಡಿದ ಕತ್ತಿ, ಯಡಿಯೂರಪ್ಪರನ್ನು ಪಕ್ಷವು ಎಂದಿಗೂ ಕಡೆಗಣಿಸುವುದಿಲ್ಲ. ಪಕ್ಷಕ್ಕೆ ಯಡಿಯೂರಪ್ಪರ ಮಾರ್ಗದರ್ಶನದ ಅವಶ್ಯಕತೆ ತುಂಬಾನೇ ಇದೆ ಎಂದು ಹೇಳಿದರು.

ಇದನ್ನು ಓದಿ : Jayaprakash Hegde: ಕಳಿಹಿತ್ಲುವಿನಲ್ಲಿ ಮೀನುಗಾರಿಕಾ ದೋಣಿಗಳಿಗೆ ಹಾನಿ : ಮೀನುಗಾರರ ಸಮಸ್ಯೆ ಆಲಿಸಿದ ಜಯಪ್ರಕಾಶ್‌ ಹೆಗ್ಡೆ

ಇದನ್ನೂ ಓದಿ : Dipika Pallikal : ಕಂಚಿನ ಪದಕ ಗೆದ್ದ ದಿನೇಶ್ ಕಾರ್ತಿಕ್ ಪತ್ನಿ, ಅವಳಿ ಮಕ್ಕಳ ತಾಯಿ ದೀಪಿಕಾ

I Am An Aspirant For The Post Of CM Says Umesh Katthi

Comments are closed.