ಬೆಂಗಳೂರು : ಅಣ್ಣಾಮಲೈ ಪ್ರತಿಭಟನೆಗೆ ಐ ಡೋಂಟ್ ಕೇರ್. ಅವನನ್ನು ಅಷ್ಟು ದೊಡ್ಡ ವ್ಯಕ್ತಿ ಮಾಡುವ ಅವಶ್ಯಕತೆಯಿಲ್ಲ ಎನ್ನುವ ಮೂಲಕ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಮೇಕೆದಾಟು ಯೋಜನೆಯನ್ನು ಮಾಡಿಯೇ ಮಾಡುತ್ತೇವೆ ಎಂದಿದ್ದಾರೆ.
ಮೇಕದಾಟು ಯೋಜನೆಯನ್ನು ವಿರೋಧಿಸಿ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಅವರು ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆಯನ್ನು ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿದ ಬೊಮ್ಮಾಯಿ ಅವರು ಕಾವೇರಿ ನದಿಗೆ ಅಡ್ಡಲಾಗಿ ಮೇಕೆದಾಟು ಯೋಜನೆಯನ್ನು ಕರ್ನಾಟಕ ಅರ್ಹವಾಗಿ ರೂಪಿಸಿದೆ. ಅಣ್ಣಾಮಲೈ ಧರಣಿ ನಡೆಸುತ್ತಿರುವುದು ರಾಜಕೀಯ ಪೇರಿತ. ನಾವೂ ಅದನ್ನು ರಾಜಕೀಯ ಪ್ರೇರಿತ ಮಾಡುವುದು ಬೇಡ. ಹೆಚ್ಚುವರಿ ನೀರು ಸಂಗ್ರಹಕ್ಕೆ ಮೇಕೆದಾಟು ಯೋಜನೆ ಕೈಗೆತ್ತಿಕೊಳ್ಳಲಾಗಿದೆ ಎಂದಿದ್ದಾರೆ.
ಬೆಂಗಳೂರು ನಗರಕ್ಕೆ ನೀರು ಪೂರೈಸುವ ಸಲುವಾಗಿಯೇ ನೀರು ಸಂಗ್ರಹ ಮಾಡಲಾಗುತ್ತಿದೆ ಅನ್ನೋದು ಗೊತ್ತಿದ್ದರೂ ಕೂಡ ಪ್ರತಿಭಟನೆ ಮಾಡಲಾಗುತ್ತಿದೆ. ಇದರೊಂದು ರಾಜಕೀಯ ಪ್ರೇರಿತ ಪ್ರತಿಭಟನೆ ಎಂದಿದ್ದಾರೆ.