ಇಂದಿರಾ ಕ್ಯಾಂಟೀನ್‌ ಹೆಸರು ಬದಲಾಯಿಸುತ್ತಾ ಸರಕಾರ : ಇಂದು ಮಹತ್ವದ ಸಚಿವ ಸಂಪುಟ ಸಭೆ

ಬೆಂಗಳೂರು : ರಾಜ್ಯದಲ್ಲಿಇಂದಿರಾ ಕ್ಯಾಂಟೀನ್‌ ಹೆಸರು ಬದಲಾವಣೆ ವಿವಾದಕ್ಕೆ ಕಾರಣವಾಗಿದೆ. ಬಿಜೆಪಿ ನಾಯಕರು ಹೆಸರು ಬದಲಾವಣೆಗೆ ಪಟ್ಟು ಹಿಡಿದಿದ್ರೆ, ಕಾಂಗ್ರೆಸ್‌ ನಾಯಕರು ವಿರೋಧ ವ್ಯಕ್ತಪಡಿಸಿದ್ದಾರೆ. ಈ ನಡುವಲ್ಲೇ ಇಂದು ಸಚಿವ ಸಂಪುಟ ಸಭೆ ನಡೆಯಲಿದ್ದು, ಇಂದಿರಾ ಕ್ಯಾಂಟೀನ್‌ ಹೆಸರು ಬದಲಾವಣೆ ಕುರಿತು ನಿರ್ಧಾರವಾಗುವ ಸಾಧ್ಯತೆಯಿದೆ.

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಇಂದಿರಾ ಕ್ಯಾಂಟೀನ್‌ ಹೆಸರು ಬದಲಾವಣೆಯ ಪ್ರಸ್ತಾಪವನ್ನು ಸರಕಾರದ ಮುಂದಿಟ್ಟಿದ್ದರು. ಬಿಜೆಪಿ ನಾಯಕರು ಕೂಡ ಸಿ.ಟಿ.ರವಿ ಪ್ರಸ್ತಾಪವನ್ನು ಸ್ವಾಗತಿಸಿದ್ದಾರೆ. ಇದು ಕಾಂಗ್ರೆಸ್‌ ನಾಯಕರ ಆಕ್ರೋಶಕ್ಕೆ ಕಾರಣವಾಗಿದೆ. ಇಂದು ಮುಖ್ಯಮಂತ್ರಿ ಬಸವರಾಜ್‌ ಬೊಮ್ಮಾಯಿ ಅವರ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ ನಡೆಯಲಿದೆ. ಸಭೆಯಲ್ಲಿ ಕೋವಿಡ್‌ ನಿಯಂತ್ರಣ, ಇಂದಿರಾ ಕ್ಯಾಂಟೀನ್‌ ಹೆಸರು ಬದಲಾವಣೆ, ವಿಧಾನ ಮಂಡಲ ಕಲಾಪ ಸೇರಿದಂತೆ ಹಲವು ವಿಷಯಗಳ ಕುರಿತು ಚರ್ಚೆ ನಡೆಯುವ ಸಾಧ್ಯತೆಯಿದೆ.

ಸಪ್ಟೆಂಬರ್‌ನಲ್ಲಿ ವಿಧಾನ ಮಂಡಲ ಅಧಿವೇಶನ ಕರೆಯುವಂತೆ ಈಗಾಗಲೇ ಪ್ರತಿಪಕ್ಷ ಕಾಂಗ್ರೆಸ್‌ ಪಟ್ಟು ಹಿಡಿದಿವೆ. ಇನ್ನೊಂದೆಡೆ ರಾಜ್ಯದಲ್ಲಿ ಕೊರೊನಾ ವೈರಸ್‌ ಸೋಂಕು ಹೆಚ್ಚುತ್ತಿದ್ದು, ನಿಯಂತ್ರಣದ ನಿಟ್ಟಿನಲ್ಲಿ ಇಂದಿನ ಸಭೆಯಲ್ಲಿ ಮಹತ್ವದ ನಿರ್ಧಾರ ಕೈಗೊಳ್ಳಲುವ ಸಾಧ್ಯತೆಯಿದೆ.

ಇದನ್ನೂ ಓದಿ : ಇಂದಿರಾ ಕ್ಯಾಂಟೀನ್ ಹೆಸರು ಬದಲಾಗಬೇಕು….! ಸಿಎಂಗೆ ಬಿಜೆಪಿ ನಾಯಕ ಸಿ.ಟಿ.ರವಿ ಒತ್ತಾಯ…!!

ಇದನ್ನೂ ಓದಿ : ಇಂದಿರಾ ಗಾಂಧಿ ಹೆಸರಲ್ಲಿ ಕಾಂಗ್ರೆಸ್ ಬಾರ್ ತೆರೆಯಲಿ….! ಮತ್ತೊಂದು ವಿವಾದಕ್ಕೆ ಮುನ್ನುಡಿ ಬರೆದ ಸಿ.ಟಿ.ರವಿ…!!

Comments are closed.