ಸೋಮವಾರ, ಏಪ್ರಿಲ್ 28, 2025
Homekarnatakaಚುನಾವಣೆ ಹೊತ್ತಲ್ಲೇ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಗುರುವಪ್ಪ ನಾಯ್ಡು ಮನೆ ಮೇಲೆ ಐಟಿ ದಾಳಿ

ಚುನಾವಣೆ ಹೊತ್ತಲ್ಲೇ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಗುರುವಪ್ಪ ನಾಯ್ಡು ಮನೆ ಮೇಲೆ ಐಟಿ ದಾಳಿ

- Advertisement -

ಬೆಂಗಳೂರು : (IT raid on Guruvappa Naidu house) ಕರ್ನಾಟಕ ವಿಧಾನಸಭೆ ಚುನಾವಣೆಗೆ ಇನ್ನೂ ಕೆಲವೇ ದಿನಗಳು ಬಾಕಿ ಇವೆ. ರಾಜ್ಯ ರಾಜಕಾರಣದಲ್ಲಿ ಟಿಕೆಟ್‌ ಹಂಚಿಕೆಗೆ ಪಕ್ಷಗಳು ಹರಸಾಹಸ ಪಡುತ್ತಿದ್ದಾವೆ. ಕಾಂಗ್ರೆಸ್‌ ಇನ್ನೇನು ಅಭ್ಯರ್ಥಿಗಳ ಎರಡನೇ ಹಂತದ ಪಟ್ಟಿಯನ್ನು ಬಿಡುಗಡೆ ಮಾಡಬೇಕಿದೆ. ಅಭ್ಯರ್ಥಿಗಳ ಪಟ್ಟಿ ಘೋಷಣೆಗೆ ಸಿದ್ದತೆಗಳು ನಡೆಸುತ್ತಿರುವಾಗಲೇ ಕಾಂಗ್ರೆಸ್‌ ಟಿಕೆಟ್‌ ಆಕಾಂಕ್ಷಿಯಾಗಿರುವ ಓರ್ವ ನಾಯಕನ ಮನೆ ಮೇಲೆ ಆದಾಯ ತೆರಿಗೆ ಇಲಾಖೆ ದಾಳಿ ನಡೆಸಿದ್ದು, ಕಾಂಗ್ರೆಸ್‌ ಗೆ ಇದು ದೊಡ್ಡ ಶಾಕಿಂಗ್‌ ಸುದ್ದಿಯಾಗಿದೆ.

ಕಾಂಗ್ರೆಸ್‌ ಮುಖಂಡ, ಈ ಬಾರಿಯ ಕಾಂಗ್ರೆಸ್‌ ಟಿಕೆಟ್‌ ಆಕಾಂಕ್ಷಿಯಾಗಿರುವ ಗುರಪ್ಪನಾಯ್ಡು ಅವರ ಮನೆ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು, ಬೆಂಗಳೂರಿನ ಬನಶಂಕರಿ ಎರಡನೇ ಹಂತದಲ್ಲಿರುವ ಮನೆಲೆ ಮೇಲೆ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಇದೀಗ ದಾಖಲೆಗಳ ಪರಿಶೀಲನೆ ಕೂಡ ನಡೆಸಿದ್ದು, ಚುನಾವಣೆ ಹೊತ್ತಲ್ಲೇ ಕಾಂಗ್ರೆಸ್‌ ಮುಖಂಡನ ಮನೆಗೆ ಐಟಿ ದಾಳಿ ನಡೆಸಿದ್ದು, ಕಾಂಗ್ರೆಸ್‌ ನಾಯಕನಿಗೆ ಸಂಕಷ್ಟ ಎದುರಾಗಿದೆ. ಇನ್ನೂ ಗುರಪ್ಪನಾಯ್ಡು ಅವರು ಬೆಂಗಳೂರಿನ ಪದ್ಮನಾಭನಗರದ ಕಾಂಗ್ರೆಸ್‌ ಟಿಕೆಟ್‌ ಆಕಾಂಕ್ಷಿಯಾಗಿದ್ದಾರೆ ಎನ್ನಲಾಗಿದೆ.

ಇನ್ನೂ ನಿನ್ನೆ ಸುದ್ದಿಗೋಷ್ಠಿ ನಡೆಸಿದ ಕಾಂಗ್ರೆಸ್‌, ನಮ್ಮ ನಾಯಕರ ಮೇಲೆ ಐಟಿ ದಾಳಿ ಆಗಲಿದೆ, ಈಗಾಗಲೇ ಅಧಿಕಾರಿಗಳು ಹೊರಟಿದ್ದಾರೆ ಎಂದು ಬಿಜೆಪಿ ವಿರುದ್ದ ಆರೋಪಿಸಿದ್ದರು. ಶಿವಕುಮಾರ್ ಸೇರಿದಂತೆ ಕಾಂಗ್ರೆಸ್ ನಾಯಕರು, ಬೆಂಬಲಿಗರ ಮನೆ ಮೇಲೆ ದಾಳಿ ನಡೆಸಲು ಸಿದ್ಧತೆ ನಡೆದಿದೆ. ದೆಹಲಿಯಿಂದ ಸಾವಿರಾರು ಅಧಿಕಾರಿಗಳು ಈಗಾಗಲೇ ಹೊರಟಿದ್ದಾರೆ. ಸೋಲುವ ಭಯದಲ್ಲಿ ನಮಗೂ ಭಯ ಸೃಷ್ಟಿಸಲು ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ. ಬಿಜೆಪಿಗೆ ಸೋಲುವ ಭಯ ಶುರುವಾಗಿದೆ. ರಾಜ್ಯದಲ್ಲಿ ಕಾಂಗ್ರೆಸ್‌ ಪರ ಅಲೆ ಇದೆ ಎಂದು ಎಲ್ಲರಿಗೂ ಗೊತ್ತಾಗಿದೆ. ಹಣದ ಶಕ್ತಿಯಿಂದ ಅಧಿಕಾರಕ್ಕೆ ಬರಲು ಪ್ರಯತ್ನ ಮಾಡುತ್ತಿದ್ದಾರೆ ಎಂದು ಬಿಜೆಪಿ ವಿರುದ್ದ ಕಾಂಗ್ರೆಸ್‌ ವಾಗ್ದಾಳಿ ನಡೆಸಿತ್ತು. ಇದರ ಬೆನ್ನಲ್ಲೇ ಇದೀಗ ಕಾಂಗ್ರೆಸ್‌ ಮುಖಂಡನ ಮನೆ ಮೇಲೆ ಐಟಿ ದಾಳಿಯಾಗಿದೆ.

ಇದನ್ನೂ ಓದಿ : ಆಟೋ ರಿಕ್ಷಾಗಳ ಹಿಂದೆ ಪಕ್ಷಗಳ ಚುನಾವಣಾ ಪ್ರಚಾರ : ಆಟೋ ರಿಕ್ಷಾಗಳು ಪೊಲೀಸ್‌ ವಶಕ್ಕೆ

IT raid on Guruvappa Naidu house: IT raid on the house of Congress ticket aspirant Guruvappa Naidu just before the election.

RELATED ARTICLES

Most Popular