ಬಿಜೆಪಿ – ಜೆಡಿಎಸ್ ಮೈತ್ರಿಗೆ ನಾಂದಿ ಹಾಡುತ್ತಾ ರಾಸಲೀಲೆ ಸಿಡಿ ಪ್ರಕರಣ….?

ಬೆಂಗಳೂರು : ರಾಸಲೀಲೆ ಸಿಡಿ ಪ್ರಕರಣ ರಾಜ್ಯ ರಾಜಕಾರಣದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿದೆ. ಪ್ರಕರಣದ ಬೆನ್ನಲ್ಲೇ ರಮೇಶ್ ಜಾರಕಿಹೊಳಿ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದು, ಬಂಧನದ ಭೀತಿ ಎದುರಿಸುತ್ತಿದ್ದಾರೆ. ಇನ್ನೊಂದೆಡೆ ಯುವತಿ ನ್ಯಾಯಾಧೀಶರ ಮುಂದೆ ಹೇಳಿಕೆ ನೀಡಿದ್ದಾಳೆ. ಈ ನಡುವಲ್ಲೇ ರಾಜ್ಯದಲ್ಲಿ ಬಿಜೆಪಿ – ಜೆಡಿಎಸ್ ಮೈತ್ರಿಯ ಮಾತುಗಳು ಕೇಳಿಬರುತ್ತಿದೆ.

ರಾಸಲೀಲೆ ಸಿಡಿ ಪ್ರಕರಣದಲ್ಲಿ ಈಗಾಗಲೇ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೆಸರು ಕೇಳಿಬಂದಿದೆ. ಅಷ್ಟೇ ಯಾಕೆ ಖುದ್ದು ಸಂತ್ರಸ್ತ ಯುವತಿಯ ಪೋಷಕರೇ ಗಂಭೀರ ಆರೋಪಗಳನ್ನು ಮಾಡುತ್ತಿದ್ದಾರೆ. ಇನ್ನೊಂದೆಡೆ ಬಿಜೆಪಿಯ ಪ್ರಭಾವಿ ಮುಖಂಡ ಬಸವನಗೌಡ ಪಾಟೀಲ್ ಯತ್ನಾಳ್ ಬಿಜೆಪಿ ಯುವರಾಜನ ವಿರುದ್ದ ಆರೋಪಿಸಿದ್ದಾರೆ. ರಾಸಲೀಲೆ ಸಿಡಿ ಪ್ರಕರಣದ ಹಿಂದೆ ಡಿ.ಕೆ.ಶಿವಕುಮಾರ್ ಹಾಗೂ ಬಿ.ವೈ.ವಿಜಯೇಂದ್ರ ಭಾಗಿಯಾಗಿದ್ದಾರೆ ಅನ್ನೋ ಗಂಭೀರ ಆರೋಪ ಮಾಡಿರುವುದು ರಾಜ್ಯ ರಾಜಕೀಯದಲ್ಲಿ ತಲ್ಲಣ ಮೂಡಿಸಿದೆ.

ಮಾಜಿ ಸಚಿವ ರಮೇಶ್ ಜಾರಕಿಹೊಳಿ ಈಗಾಗಲೇ ತನ್ನ ವಿರುದ್ದ ಷಡ್ಯಂತ್ರ ನಡೆದಿರುವ ಕುರಿತು ಪೊಲೀಸರಿಗೆ ನೀಡಿರುವ ದೂರಿನ ಹಿನ್ನೆಲೆಯಲ್ಲಿ ತನಿಖೆ ನಡೆಯುತ್ತಿದೆ. ಇನ್ನೊಂದೆಡೆ ಯುವತಿಯ ದೂರು ರಮೇಶ್ ಜಾರಕಿಹೊಳಿಗೆ ಮುಳುವಾಗುವ ಸಾಧ್ಯತೆಯಿದೆ. ಒಂದೊಮ್ಮೆ ತನ್ನನ್ನ ಬಂಧಿಸಿದ್ರೆ ರಾಜ್ಯ ಸರಕಾರವನ್ನೇ ಪತನ ಮಾಡುತ್ತೇನೆ ಅಂತಾನು ರಮೇಶ್ ಜಾರಕಿಹೊಳಿ ಬಹಿರಂಗವಾಗಿಯೇ ಹೇಳಿಕೆ ನೀಡಿದ್ದಾರೆ. ಈ ನಡುವಲ್ಲೇ ರಾಜ್ಯ ಸರಕಾರ ಪತನವಾಗುತ್ತೆ ಅನ್ನೊ ಮಾತುಗಳು ರಾಜಕೀಯ ಪಡಸಾಲೆಯಲ್ಲಿ ಕೇಳಿಬರುತ್ತಿದೆ.

ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆಯ ಕೂಗು ಹಲವು ಸಮಯಗಳಿಂದಲೂ ಕೇಳಿಬರುತ್ತಿದೆ. ಬಿಜೆಪಿ ಮುಖಂಡ ಯತ್ನಾಳ್ ಹಲವು ಬಾರಿ ಸಿಎಂ ಬದಲಾವಣೆಯ ಬಗ್ಗೆ ಮಾತನಾಡಿದ್ದಾರೆ. ಇನ್ನೊಂದೆಡೆ ಹಲವು ಶಾಸಕರು ಸಿಎಂ ಪುತ್ರ ವಿಜಯೇಂದ್ರ ವಿರುದ್ದ ಮುನಿಸಿಕೊಂಡು ರೆಬೆಲ್ ಆಗೋ ಮುನ್ಸೂಚನೆಯನ್ನು ಕೊಟ್ಟಿದ್ದರು. ಕಳೆದ ಕೆಲ ದಿನಗಳ ಹಿಂದೆಯಷ್ಟೇ ರಮೇಶ್ ಜಾರಕಿಹೊಳಿ ಅವರು ಉತ್ತರ ಕರ್ನಾಟಕದ ಪ್ರಭಾವಿ ಸಂಸದರೋರ್ವರನ್ನು ಮುಖ್ಯಮಂತ್ರಿಯನ್ನಾಗಿ ಮಾಡುವ ಕುರಿತು ಹೈಕಮಾಂಡ್ ಜೊತೆಗೆ ಮಾತನಾಡಿದ್ದಾರೆ. ಈ ಮೂಲಕ ಸಿಎಂ ಯಡಿಯೂರಪ್ಪ ವಿರುದ್ದ ತೊಡೆತಟ್ಟಲು ಸಿದ್ದವಾಗಿದ್ದರು ಅನ್ನೋ ಗುಸು ಗುಸು ಇದೀಗ ರಾಜಕಿಯ ಪಡಸಾಲೆಯಲ್ಲಿ ಕೇಳಿಬರುತ್ತಿದೆ.

ರಾಸಲೀಲೆ ಸಿಡಿ ಪ್ರಕರಣದಲ್ಲಿ ಬಿಜೆಪಿ ನಾಯಕರೇ ಸಿಡಿ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಅನ್ನೋ ಆರೋಪ ಕೇಳಿಬಂದಿದ್ದು, ಖುದ್ದು ರಮೇಶ್ ಜಾರಕಿಹೊಳಿ ಅವರೇ ಬಿಜೆಪಿ ನಾಯಕರ ವಿರುದ್ದ ಹೈಕಮಾಂಡ್ ಗೆ ದೂರು ನೀಡುವುದಾಗಿಯೂ ಹೇಳಿದ್ದಾರೆ. ಇನ್ನೊಂದೆಡೆ ಸಿಡಿ ಪ್ರಕರಣದಲ್ಲಿ ತನ್ನನ್ನು ಬಂಧಿಸಿದ್ರೆ ಶಾಸಕರು ಸಾಲು ಸಾಲಾಗಿ ರಾಜೀನಾಮೆ ನೀಡುತ್ತಾರೆ ಅನ್ನೋ ಹೇಳಿಕೆಯನ್ನೂ ನೀಡಿದ್ದರು. ರಾಜ್ಯದಲ್ಲಿ ಸಿಡಿ ಪ್ರಕರಣ ದಿನೇ ದಿನೇ ಕಗ್ಗಂಟಾಗುತ್ತಿರೋ ಬೆನ್ನಲ್ಲೇ ಸರಕಾರ ಪತನದ ಮಾತು ಕೇಳಿಬರುತ್ತಿದೆ. ಅಷ್ಟೇ ಯಾಕೆ ಒಂದೊಮ್ಮೆ ರಾಜ್ಯದಲ್ಲಿ ಬಿಜೆಪಿ ಸರಕಾರ ಪತನದ ಹಂತಕ್ಕೆ ತಲುಪಿದ್ರೆ ಬಿಜೆಪಿ – ಜೆಡಿಎಸ್ ಮೈತ್ರಿಯಾಗುತ್ತೆ ಅನ್ನೋ ಮಾತು ಕೇಳಿಬರುತ್ತಿದೆ.

https://kannada.newsnext.live/bangalore-modelhighschool-shutdown-nostudent-pranitha-tweet-vishnuvardhan/

ಕಾಂಗ್ರೆಸ್ – ಜೆಡಿಎಸ್ ಮೈತ್ರಿ ಸರಕಾರ ಪತನವಾದ ಬೆನ್ನಲ್ಲೇ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಬಿಜೆಪಿ ಬಯಸಿದರೆ ಜೆಡಿಎಸ್ ಬಾಹ್ಯ ಬೆಂಬಲವನ್ನು ನೀಡಲು ಸಿದ್ದವಿದೆ. 5 ವರ್ಷಗಳ ಕಾಲ ಬಿಜೆಪಿ ಪಕ್ಷವೇ ಸರಕಾರವನ್ನೇ ನಡೆಸಲಿ ಅನ್ನೋ ಮಾತನ್ನು ಹೇಳಿದ್ದರು. ಅಷ್ಟೇ ಅಲ್ಲಾ ಕಳೆದ ಕೆಲ ತಿಂಗಳ ಹಿಂದೆಯಷ್ಟೇ ಬಿಜೆಪಿ – ಜೆಡಿಎಸ್ ವಿಲೀನದ ಮಾತುಗಳು ಕೇಳಿಬಂದಿತ್ತು. ಇನ್ನೊಂದೆಡೆ ಜೆಡಿಎಸ್ ಮುಖಂಡ ಎಚ್.ಡಿ.ಕುಮಾರಸ್ವಾಮಿ ಅವರೇ ಖುದ್ದು ಪ್ರಧಾನಿ ನರೇಂದ್ರ ಮೋದಿ ಅವರೇ ತನ್ನನ್ನ ಪಕ್ಷಕ್ಕೆ ಆಹ್ವಾನಿಸಿದ್ದರು ಅನ್ನೋ ಮಾತನ್ನು ಹೇಳಿದ್ದರು.

ಸದ್ಯದ ರಾಜಕೀಯ ಲೆಕ್ಕಾಚಾರದ ಪ್ರಕಾರ ಒಂದೆಡೆ ಲಿಂಗಾಯಿತ ಪ್ರಭಾವಿ ಮುಖಂಡ ಯತ್ನಾಳ್ ಯಡಿಯೂರಪ್ಪ ವಿರುದ್ದ ತೊಡೆ ತಟ್ಟಿದ್ರೆ, ಇನ್ನೊಂದೆಡೆ ರಮೇಶ್ ಜಾರಕಿಹೊಳಿ ಕೂಡ ಮುನಿಸಿಕೊಂಡಿದ್ದಾರೆ ಎನ್ನುವ ಮಾತುಗಳು ಕೇಳಿಬರುತ್ತಿದೆ. ಈ ನಡುವಲ್ಲೇ ಜೆಡಿಎಸ್ – ಬಿಜೆಪಿ ಮೈತ್ರಿಯ ಮಾತುಗ ಕೇಳಿಬಂದಿದ್ದು, ರಾಸಲೀಲೆ ಸಿಡಿ ಪ್ರಕರಣವೇ ಮೈತ್ರಿಗೆ ನಾಂದಿ ಹಾಡುತ್ತಾ ಅನ್ನೋದನ್ನು ಕಾದುನೋಡಬೇಕಾಗಿದೆ.

https://kannada.newsnext.live/kerala-viral-photoshoot-bride-drinks-smoke-photos/

Comments are closed.