ಮಾಜಿ ಕೇಂದ್ರ ಸಚಿವ ಜಸ್ವಂತ್ ಸಿಂಗ್ ವಿಧಿವಶ

0

ವದೆಹಲಿ : ಬಜೆಪಿ ಮುಖಂಡ ಹಾಗೂ ಮಾಜಿ ಕೇಂದ್ರ ಸಚಿವ ಜಸ್ವಂತ್ ಸಿಂಗ್ ವಿಧಿವಶರಾಗಿದ್ದಾರೆ. 82 ವರ್ಷ ಜಸ್ವಂತ್ ಸಿಂಗ್ ಅವರು ಹಲವು ಸಮಯಗಳಿಂದಲೂ ಅನಾರೋಗ್ಯದಿಂದ ಬಳಲುತ್ತಿದ್ದು, ಇಂದು ಕೊನೆಯುಸಿರೆಳೆದಿದ್ದಾರೆ.

ಜಸ್ವಂತ್ ಸಿಂಗ್ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಸೇರಿದಂತೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.

ಜಸ್ವಂತ್ ಸಿಂಗ್ ಆರಂಭದಲ್ಲಿ ದೇಶ ಕಾಯೋ ಯೋಧರಾಗಿ ಸೇವೆ ಸಲ್ಲಿಸಿದ್ದರು. ನಂತರದಲ್ಲಿ ರಾಜಕೀಯಕ್ಕೆ ಧುಮುಕಿದ ಜಸ್ವಂತ್ ಸಿಂಗ್ ಸುದೀರ್ಘ ಅವಧಿಯವರೆಗೆ ರಾಜಕಾರಣಿಯಾಗಿ ಸೇವೆ ಸಲ್ಲಸಿದ್ದಾರೆ.

ಅಟಲ್ ಬಿಹಾರಿ ವಾಜಪೇಯಿ ಅವರ ಅವಧಿಯಲ್ಲಿ ಪ್ರಮುಖ ಹುದ್ದೆಯನ್ನು ನಿಭಾಯಿಸಿದ್ದಾರೆ. ರಕ್ಷಣಾ ಸಚಿವರಾಗಿ, ವಿದೇಶಾಂಗ ವ್ಯವಹಾರ ಸಚಿವರಾಗಿಯೂ ಸೇವೆಯನ್ನು ಸಲ್ಲಿಸಿದ್ದಾರೆ.

Leave A Reply

Your email address will not be published.