ರಾಜ್ಯದ ಎರಡು ಕ್ಷೇತ್ರಗಳಲ್ಲಿ ಇಂದು ಉಪಕದನ : ಬಿಜೆಪಿ – ಕಾಂಗ್ರೆಸ್​ ಅಭ್ಯರ್ಥಿಗಳ ಭವಿಷ್ಯ ಬರೆಯಲಿದ್ದಾನೆ ಮತದಾರ

ಬಿಜೆಪಿ ಹಾಗೂ ಕಾಂಗ್ರೆಸ್​ ಪಾಲಿಗೆ ಪ್ರತಿಷ್ಠೆಯ ಕಣವಾಗಿ ಮಾರ್ಪಟ್ಟಿರುವ ಬಾಗಲಕೋಟೆ ಹಾಗೂ ದಾವಣಗೆರೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಇಂದು ಆರಂಭಗೊಂಡಿದೆ. ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದ ತೆರವಾಗಿರುವ ದಾವಣಗೆರೆ ಮತಕ್ಷೇತ್ರ ಹಾಗೂ ಎಚ್​.ವೈ ಮೇಟಿ ಅವರ ಅಗಲಿಕೆಯಿಂದ ತೆರವಾಗಿರುವ ಬಾಗಲಕೋಟೆ ಮತಕ್ಷೇತ್ರಗಳಲ್ಲಿ ಇಂದು ಮತದಾನ ಪ್ರಕ್ರಿಯೆ ಬಿರುಸಿನಿಂದ ಸಾಗಿದೆ.

ಬೆಳಗ್ಗೆ 7 ಗಂಟೆಯಿಂದಲೇ ಮತದಾನ ಪ್ರಕ್ರಿಯೆ ಆರಂಭಗೊಂಡಿಗಿದ್ದು ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ಬಿಗಿ ಪೊಲೀಸ್​ ಬಂದೋಬಸ್ತ್​ ಕಲ್ಪಿಸಲಾಗಿದೆ. ಸಂಜೆ ಆರು ಗಂಟೆಯವರೆಗೂ ಮತದಾನ ಪ್ರಕ್ರಿಯೆ ನಡೆಯಲಿದೆ. ಮೇ 4ರಂದು ಬೈಎಲೆಕ್ಷನ್​ ಮತದಾನ ಪ್ರಕ್ರಿಯೆ ನಡೆಯಲಿದೆ .
ಕಾಂಗ್ರೆಸ್​ ಪಕ್ಷದ ಹಿರಿಯ ನಾಯಕಾರದ ಶಾಮನೂರು ಶಿವಶಂಕರಪ್ಪ ನಿಧನದ ಬಳಿಕ ಈ ಕ್ಷೇತ್ರದಲ್ಲಿ ಅಲ್ಪಸಂಖ್ಯಾತರಿಗೆ ಟಿಕೆಟ್​ ನೀಡಬೇಕೆಂಬ ಕೂಗು ಬಲವಾಗಿ ಕೇಳಿಬಂದಿತ್ತು. ಆದರೆ ಅಂತಿಮವಾಗಿ ಕಾಂಗ್ರೆಸ್​ ಶಾಮನೂರು ಮೊಮ್ಮಗ ಸಮರ್ಥ ಮಲ್ಲಿಕಾರ್ಜುನ ಶಾಮನೂರಿಗೆ ಟಿಕೆಟ್​ ನೀಡಿದ್ದು ಅಲ್ಪಸಂಖ್ಯಾತರ ಮುನಿಸಿಗೆ ಕಾರಣವಾಗಿದೆ. ಹೀಗಾಗಿ ಕಾಂಗ್ರೆಸ್​ ಬಂಡಾಯ ಅಭ್ಯರ್ಥಿಯಾಗಿ ಸಾದ್ವಿಕ್​ ಪೈಲ್ವಾನ್​ ಅಖಾಡದಲ್ಲಿರುವುದು ಕಾಂಗ್ರೆಸ್​ಗೆ ಕೊಂಚ ಪೆಟ್ಟು ನೀಡುವ ಸಾಧ್ಯತೆಯಿದೆ.ಅಸಲಿಗೆ ಸಾದ್ವಿಕ್​ ಪೈಲ್ವಾನ್​ ಚುನಾವಣಾ ಕಣದಿಂದ ಹಿಂದೆ ಸರಿದಿದ್ದಾರೆ.ಆದರೆ ಇವಿಎಂನಲ್ಲಿ ಅವರ ಹೆಸರು ಇರುವುದು ಕಾಂಗ್ರೆಸ್​ಮತಬ್ಯಾಂಕ್​ಗೆ ಕೊಂಚ ಸಮಸ್ಯೆ ತಂದೊಡ್ಡುವ ಸಾಧ್ಯತೆಯಿದೆ. ಸಮರ್ಥ್​ ವಿರುದ್ಧ ಬಿಜೆಪಿಯ ಶ್ರೀನಿವಾಸ ದಾಸ ಕರಿಯಪ್ಪ ನೇರ ಹಣಾಹಣಿ ನಡೆಸಲಿದ್ದಾರೆ. ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಒಟ್ಟೂ 25 ಅಭ್ಯರ್ಥಿಗಳು ಕಣಕ್ಕಿಳಿದಿದ್ದು ಎಲ್ಲರ ಭವಿಷ್ಯ ಇಂದು ಮತಪೆಟ್ಟಿಗೆಯಲ್ಲಿ ಭದ್ರಗೊಳ್ಳಲಿದೆ.

ಇದನ್ನೂ ಓದಿ: ತಮಿಳುನಾಡು ವಿಧಾನಸಭಾ ಚುನಾವಣೆ ಬಿಜೆಪಿ ಅಭ್ಯರ್ಥಿ ಪಟ್ಟಿ ಪ್ರಕಟ : ಅಣ್ಣಾಮಲೈಗೆ ಕೊಕ್​

ಇನ್ನು ಮಾಜಿ ಸಚಿವ ಎಚ್​.ವೈ ಮೇಟಿ ನಿಧನದ ಬಳಿಕ ತೆರವಾಗಿರುವ ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಟಿಕೆಟ್​ಗಾಗಿ ಮೇಟಿ ಮಕ್ಕಳಲ್ಲೇ ಪ್ರಬಲ ಪೈಪೋಟಿ ಎದುರಾಗಿತ್ತು.ಕೊನೆಗೆ ಉಮೇಶ್​ ಮೇಟಿ ಅವರಿಗೆ ಟಿಕೆಟ್​ ನೀಡಲಾಗಿದೆ. ಬಾಗಲಕೋಟೆಯಲ್ಲಿಯೂ ಉಮೇಶ್​ ಮೇಟಿ ಹಾಗೂ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ನಡುವೆ ಜಿದ್ದಾಜಿದ್ದಿನ ಸ್ಪರ್ಧೆ ನಡೆಯಲಿದೆ. ಬಾಗಲಕೋಟೆಯಲ್ಲಿ ಒಟ್ಟೂ 9 ಅಭ್ಯರ್ಥಿಗಳು ಕಣದಲ್ಲಿದ್ದಾರೆ ಎನ್ನಲಾಗಿದೆ.

ರಶ್ಮಿ ಎಸ್. | Rashmi S.

ರಶ್ಮಿ ಎಸ್. ನ್ಯೂಸ್‌ ನೆಕ್ಸ್ಟ್‌ ಕನ್ನಡ ( News Next Kannada) ದಲ್ಲಿ ಕಂಟೆಂಟ್‌ ರೈಟರ್‌ ಆಗಿ ಕೆಲಸ ಮಾಡುತ್ತಿದ್ದಾರೆ. ಪತ್ರಿಕೋದ್ಯಮ ವಿಭಾಗದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದು, ಹತ್ತು ವರ್ಷಗಳ ಕಾಲ ಕನ್ನಡ ಸುದ್ದಿ ಮಾಧ್ಯಮಗಳಲ್ಲಿ ಕೆಲಸ ಮಾಡಿದ್ದಾರೆ. ರಾಜಕೀಯ, ಕ್ರೀಡೆ, ವಾಣಿಜ್ಯ, ಸಿನಿಮಾ, ಸ್ಥಳೀಯ ಸುದ್ದಿಗಳನ್ನು ಪ್ರಕಟಿಸುತ್ತಿದ್ದಾರೆ. More »

Related Stories