ಬೆಂಗಳೂರು : Karnataka Election 2023 : ರಾಜ್ಯದಲ್ಲಿ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷ (Congress) ಸಜ್ಜಾಗುತ್ತಿದೆ. ಯಾವ ಕ್ಷೇತ್ರದಲ್ಲಿ ಯಾರಿಗೆ ಟಿಕೆಟ್ ನೀಡಬೇಕು. ಯಾರಿಗೆ ಟಿಕೆಟ್ ಕೊಟ್ರೆ ಕಾಂಗ್ರೆಸ್ ರಾಜ್ಯದಲ್ಲಿ ಅಧಿಕಾರ ಹಿಡಿಯುತ್ತೇ ಅನ್ನೋ ಲೆಕ್ಕಾಚಾರ ಜೋರಾಗಿಯೇ ನಡೆಯುತ್ತಿದೆ. ಈ ನಡುವಲ್ಲೇ ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಹೊಸ ಮುಖಗಳಿಗೆ ಮಣೆ ಹಾಕುವುದು ಬಹುತೇಕ ಖಚಿತವಾಗಿದೆ. ಬೆಂಗಳೂರು ಹೊರವಲಯದಲ್ಲಿ ನಡೆದ ಕಾಂಗ್ರೆಸ್ ಮುಖಂಡರ ಸಭೆಯಲ್ಲಿಯೂ ಈ ವಿಚಾರ ಮುನ್ನೆಲೆಗೆ ಬಂದಿದೆ. ಅದ್ರಲ್ಲೂ ಕರಾವಳಿ ಭಾಗದಲ್ಲಿ ಹಿರಿಯ ನಾಯಕರು ಈ ಬಾರಿ ಹೊಸ ಮುಖಗಳಿಗೆ ಅವಕಾಶ ಮಾಡಿಕೊಡಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ಖಡಕ್ ಸೂಚನೆ ನೀಡಿದ್ದಾರೆಂದು ತಿಳಿದು ಬಂದಿದೆ.
ರಾಜ್ಯದಲ್ಲಿ ನಡೆಯುತ್ತಿರುವ ಸಮೀಕ್ಷೆಗಳಲ್ಲಿ ಹಳೆಯ ಯಾವುದೇ ನಾಯಕರು ಗೆಲುವು ಕಾಣುವ ವಿಶ್ವಾಸ ವ್ಯಕ್ತಪಡಿಸುತ್ತಿಲ್ಲ. ಈ ಕಾರಣದಿಂದಲೇ ಕಾರಾವಳಿ ಭಾಗದಲ್ಲಿ ನಾಯಕತ್ವ ಬದಲಾವಣೆ ಅನಿವಾರ್ಯ ಎಂಬ ಸಂದೇಶವನ್ನು ಖುದ್ದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ರವಾನಿಸಿದ್ದಾರೆ. ಕಾಂಗ್ರೆಸ್ ಆಂತರಿಕ ಸಮೀಕ್ಷೆ, ಜೊತೆಗೆ ಮಾಧ್ಯಮ ಸಮೀಕ್ಷೆಗಳನ್ನು ಆಧರಿಸಿ ಕಾಂಗ್ರೆಸ್ ಪಕ್ಷ ಈ ಬಾರಿ ಟಿಕೆಟ್ ನೀಡಲು ಮುಂದಾಗಿದೆ. ಇದೇ ಕಾರಣಕ್ಕೆ ಡಿ.ಕೆ.ಶಿವಕುಮಾರ್ ಅವರು ಹೊಸ ಮುಖಗಳಿಗೆ ಹಾದಿ ಮಾಡಿಕೊಡುವಂತೆ ಹಿರಿಯ ನಾಯಕರಿಗೆ ಸೂಚನೆಯನ್ನು ನೀಡಿದ್ದಾರೆ ಎಂದು ತಿಳಿದು ಬಂದಿದೆ. ಇದನ್ನೂ ಓದಿ : ಕರ್ನಾಟಕ ವಿಧಾನಸಭಾ ಚುನಾವಣೆ 2023: ಮಂಗಳೂರು ದಕ್ಷಿಣದಲ್ಲಿ ವೇದವಾಸ್ ಕಾಮತ್ V/S ಐವನ್ ಡಿಸೋಜಾ ಬಿಗ್ ಫೈಟ್ ಸಾಧ್ಯತೆ
ಇನ್ನೊಂದೆಡೆಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಹ ಕರಾವಳಿ ಸಮೀಕ್ಷೆ ಕಾಂಗ್ರೆಸ್ಸಿಗೆ ಸಹಕಾರಿಯಾಗಿಲ್ಲ. ಈ ಕಾರಣದಿಂದ ಹಿರಿಯ ನಾಯಕರುಗಳನ್ನು ಬದಲಾಯಿಸಿ ಹೊಸ ಮುಖಗಳಿಗೆ ಟಿಕೆಟ್ ನೀಡಬೇಕು ಎಂಬ ನಿರ್ಧಾರಕ್ಕೆ ಬಂದಿದ್ದಾರೆ ಎನ್ನಲಾಗುತ್ತಿದೆ. ಈ ನಡುವಲ್ಲೇ ಕರಾವಳಿಯ ಪ್ರಮುಖ ಕಾಂಗ್ರೆಸ್ ನಾಯಕರಾದ ರಮಾನಾಥ ರೈ, ಅಭಯ್ ಚಂದ್ರ ಜೈನ್, ವಸಂತ ಬಂಗೇರ, ಶಕುಂತಲಾ ಶೆಟ್ಟಿ, ಜೆಆರ್ ಲೋಬೊ ಸೇರಿದಂತೆ ಹಲವು ನಾಯಕರಿಗೆ ಈ ಬಾರಿ ಬಹುತೇಕ ಟಿಕೆಟ್ ಕೈತಪ್ಪಲಿದೆ ಎಂದು ಹೈಕಮಾಂಡ್ ಹಾಗೂ ಕೆಪಿಸಿಸಿ ಮೂಲಗಳು ಸ್ಪಷ್ಟಪಡಿಸಿವೆ.
ಇದನ್ನೂ ಓದಿ : ದ.ಕ ಜಿಲ್ಲೆಯ ಎಲ್ಲಾ ಕ್ಷೇತ್ರಗಳಿಗೆ ಹೊಸ ಮುಖ : ಪುತ್ತೂರು, ಬಂಟ್ವಾಳ ಸೇರಿ ಕಾಂಗ್ರೆಸ್ ನಲ್ಲಿ ಹಳಬರಿಗಿಲ್ಲ ಟಿಕೇಟ್ !
ಇದನ್ನೂ ಓದಿ : ವಿಧಾನಸಭಾ ಚುನಾವಣೆ 2023: ಬಂಟ್ವಾಳದಲ್ಲಿ ಬಿಜೆಪಿಯಿಂದ ರಾಜೇಶ್ ನಾಯಕ್ Vs ಕಾಂಗ್ರೆಸ್ ನಿಂದ ಪದ್ಮರಾಜ್, ಅಶ್ವಿನ್ ಕುಮಾರ್ ರೈ
Karnataka Assembly Election 2023 Opportunity for new faces DK Shivakumar and Siddaramaiah notice to coastal Congress leaders