Karnataka Election Congress : ಹೊಸ ಮುಖಗಳಿಗೆ ಅವಕಾಶ : ಕರಾವಳಿ ನಾಯಕರಿಗೆ ಡಿಕೆಶಿ, ಸಿದ್ದರಾಮಯ್ಯ ಸೂಚನೆ

ಬೆಂಗಳೂರು : Karnataka Election 2023 : ರಾಜ್ಯದಲ್ಲಿ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷ (Congress) ಸಜ್ಜಾಗುತ್ತಿದೆ. ಯಾವ ಕ್ಷೇತ್ರದಲ್ಲಿ ಯಾರಿಗೆ ಟಿಕೆಟ್ ನೀಡಬೇಕು. ಯಾರಿಗೆ ಟಿಕೆಟ್ ಕೊಟ್ರೆ ಕಾಂಗ್ರೆಸ್ ರಾಜ್ಯದಲ್ಲಿ ಅಧಿಕಾರ ಹಿಡಿಯುತ್ತೇ ಅನ್ನೋ ಲೆಕ್ಕಾಚಾರ ಜೋರಾಗಿಯೇ ನಡೆಯುತ್ತಿದೆ. ಈ ನಡುವಲ್ಲೇ ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಹೊಸ ಮುಖಗಳಿಗೆ ಮಣೆ ಹಾಕುವುದು ಬಹುತೇಕ ಖಚಿತವಾಗಿದೆ. ಬೆಂಗಳೂರು ಹೊರವಲಯದಲ್ಲಿ ನಡೆದ ಕಾಂಗ್ರೆಸ್ ಮುಖಂಡರ ಸಭೆಯಲ್ಲಿಯೂ ಈ ವಿಚಾರ ಮುನ್ನೆಲೆಗೆ ಬಂದಿದೆ. ಅದ್ರಲ್ಲೂ ಕರಾವಳಿ ಭಾಗದಲ್ಲಿ ಹಿರಿಯ ನಾಯಕರು ಈ ಬಾರಿ ಹೊಸ ಮುಖಗಳಿಗೆ ಅವಕಾಶ ಮಾಡಿಕೊಡಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ಖಡಕ್ ಸೂಚನೆ ನೀಡಿದ್ದಾರೆಂದು ತಿಳಿದು ಬಂದಿದೆ.

ರಾಜ್ಯದಲ್ಲಿ ನಡೆಯುತ್ತಿರುವ ಸಮೀಕ್ಷೆಗಳಲ್ಲಿ ಹಳೆಯ ಯಾವುದೇ ನಾಯಕರು ಗೆಲುವು ಕಾಣುವ ವಿಶ್ವಾಸ ವ್ಯಕ್ತಪಡಿಸುತ್ತಿಲ್ಲ. ಈ ಕಾರಣದಿಂದಲೇ ಕಾರಾವಳಿ ಭಾಗದಲ್ಲಿ ನಾಯಕತ್ವ ಬದಲಾವಣೆ ಅನಿವಾರ್ಯ ಎಂಬ ಸಂದೇಶವನ್ನು ಖುದ್ದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ರವಾನಿಸಿದ್ದಾರೆ. ಕಾಂಗ್ರೆಸ್ ಆಂತರಿಕ ಸಮೀಕ್ಷೆ, ಜೊತೆಗೆ ಮಾಧ್ಯಮ ಸಮೀಕ್ಷೆಗಳನ್ನು ಆಧರಿಸಿ ಕಾಂಗ್ರೆಸ್ ಪಕ್ಷ ಈ ಬಾರಿ ಟಿಕೆಟ್ ನೀಡಲು ಮುಂದಾಗಿದೆ. ಇದೇ ಕಾರಣಕ್ಕೆ ಡಿ.ಕೆ.ಶಿವಕುಮಾರ್ ಅವರು ಹೊಸ ಮುಖಗಳಿಗೆ ಹಾದಿ ಮಾಡಿಕೊಡುವಂತೆ ಹಿರಿಯ ನಾಯಕರಿಗೆ ಸೂಚನೆಯನ್ನು ನೀಡಿದ್ದಾರೆ ಎಂದು ತಿಳಿದು ಬಂದಿದೆ. ಇದನ್ನೂ ಓದಿ : ಕರ್ನಾಟಕ ವಿಧಾನಸಭಾ ಚುನಾವಣೆ 2023: ಮಂಗಳೂರು ದಕ್ಷಿಣದಲ್ಲಿ ವೇದವಾಸ್ ಕಾಮತ್ V/S ಐವನ್ ಡಿಸೋಜಾ ಬಿಗ್ ಫೈಟ್ ಸಾಧ್ಯತೆ

ಇನ್ನೊಂದೆಡೆಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಹ ಕರಾವಳಿ ಸಮೀಕ್ಷೆ ಕಾಂಗ್ರೆಸ್ಸಿಗೆ ಸಹಕಾರಿಯಾಗಿಲ್ಲ. ಈ ಕಾರಣದಿಂದ ಹಿರಿಯ ನಾಯಕರುಗಳನ್ನು ಬದಲಾಯಿಸಿ ಹೊಸ ಮುಖಗಳಿಗೆ ಟಿಕೆಟ್ ನೀಡಬೇಕು ಎಂಬ ನಿರ್ಧಾರಕ್ಕೆ ಬಂದಿದ್ದಾರೆ ಎನ್ನಲಾಗುತ್ತಿದೆ. ಈ ನಡುವಲ್ಲೇ ಕರಾವಳಿಯ ಪ್ರಮುಖ ಕಾಂಗ್ರೆಸ್ ನಾಯಕರಾದ ರಮಾನಾಥ ರೈ, ಅಭಯ್ ಚಂದ್ರ ಜೈನ್, ವಸಂತ ಬಂಗೇರ, ಶಕುಂತಲಾ ಶೆಟ್ಟಿ, ಜೆಆರ್ ಲೋಬೊ ಸೇರಿದಂತೆ ಹಲವು ನಾಯಕರಿಗೆ ಈ ಬಾರಿ ಬಹುತೇಕ ಟಿಕೆಟ್ ಕೈತಪ್ಪಲಿದೆ ಎಂದು ಹೈಕಮಾಂಡ್ ಹಾಗೂ ಕೆಪಿಸಿಸಿ ಮೂಲಗಳು ಸ್ಪಷ್ಟಪಡಿಸಿವೆ.

ಇದನ್ನೂ ಓದಿ : ದ.ಕ ಜಿಲ್ಲೆಯ ಎಲ್ಲಾ ಕ್ಷೇತ್ರಗಳಿಗೆ ಹೊಸ ಮುಖ : ಪುತ್ತೂರು, ಬಂಟ್ವಾಳ ಸೇರಿ ಕಾಂಗ್ರೆಸ್ ನಲ್ಲಿ ಹಳಬರಿಗಿಲ್ಲ ಟಿಕೇಟ್ !

ಇದನ್ನೂ ಓದಿ : ವಿಧಾನಸಭಾ ಚುನಾವಣೆ 2023: ಬಂಟ್ವಾಳದಲ್ಲಿ ಬಿಜೆಪಿಯಿಂದ ರಾಜೇಶ್ ನಾಯಕ್ Vs ಕಾಂಗ್ರೆಸ್ ನಿಂದ ಪದ್ಮರಾಜ್, ಅಶ್ವಿನ್ ಕುಮಾರ್ ರೈ

Karnataka Assembly Election 2023 Opportunity for new faces DK Shivakumar and Siddaramaiah notice to coastal Congress leaders

Comments are closed.