ಬೆಂಗಳೂರು : ರಾಜ್ಯದ ಹಾನಗಲ್ ಹಾಗೂ ಸಿಂದಗಿ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ಒಂದೊಂದು ಸ್ಥಾನಗಳನ್ನು ಗೆಲ್ಲುವಲ್ಲಿ ಯಶಸ್ವಿಯಾಗಿವೆ. ಸಿಎಂ ತವರು ಕ್ಷೇತ್ರ ಹಾನಗಲ್‌ನಲ್ಲಿ ಕಾಂಗ್ರೆಸ್‌ನ ಶ್ರೀನಿವಾಸ ಮಾನೆ ಗೆಲುವು ದಾಖಲಿಸಿದ್ರೆ, ಸಿಂದಗಿಯಲ್ಲಿ ಬಿಜೆಪಿ ಅಭ್ಯರ್ಥಿ ರಮೇಶ್ ಭೂಸನೂರ ಜಯಭೇರಿ ಬಾರಿಸಿದ್ದಾರೆ. ಆದರೆ ಜೆಡಿಎಸ್ ಖಾತೆ ತೆರೆಯುವಲ್ಲಿ ವಿಫಲವಾಗಿದೆ.
ಬಿಜೆಪಿ ಶಾಸಕ ಸಿಎಂ ಉದಾಸಿ ಅವರ ಅಕಾಲಿಕ ನಿಧನದಿಂದ ತೆರವಾಗಿದ್ದ ಹಾನಗಲ್ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ ಮಾನೆ ಗೆಲುವು ದಾಖಲಿಸಿದ್ದಾರೆ. ಬಿಜೆಪಿಯ ಶಿವರಾಜ್ ಸಜ್ಜನರ ಎರಡನೇ ಸ್ಥಾನಕ್ಕೆ ಜಾರಿದ್ರೆ ಜೆಡಿಎಸ್‌ನ ನಿಯಾಜ್ ಶೇಖ್ ಕೇವಲ 629 ಮತಗಳನ್ನು ಪಡೆಯುವ ಮೂಲಕ ಜೆಡಿಎಸ್ ಹಾಗೂ ಬಿಜೆಪಿ ತೀವ್ರ ಮುಖಭಂಗವನ್ನು ಅನುಭವಿಸಿವೆ.
ಇನ್ನು ಸಿಂದಗಿ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ರಂಏಶ್ ಭೂಸನೂರು ಭರ್ಜರಿ ಗೆಲುವು ಕಂಡಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ರಮೇಶ್ ಮನಗೂಳಿ ಎರಡನೇ ಸ್ಥಾನಕ್ಕೆ ಜಾರಿದ್ರೆ ಜೆಡಿಎಸ್ ಅಭ್ಯರ್ಥಿ ನಾಜಿಯಾ ಅಂಗಡಿ ಮೂರನೇ ಸ್ಥಾನಕ್ಕೆ ಜಾರಿದ್ದಾರೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸೋಲನ್ನು ಕಂಡಿದ್ದ ರಮೇಶ್ ಭೂಸನೂರ ಪರ ಅನುಕಂಪದ ಅಲೆ ಕೆಲಸ ಮಾಡಿದೆ.
ಇದನ್ನೂ ಓದಿ : ರಾಜ್ಯದಲ್ಲಿ ಪೆಟ್ರೋಲ್, ಡಿಸೇಲ್ ಬೆಲೆ ಇಳಿಕೆಯ ಸುಳಿವು ಕೊಟ್ಟ ಸಿಎಂ ಬೊಮ್ಮಾಯಿ
ಇದನ್ನೂ ಓದಿ : ಹೊಸ ಪಕ್ಷ ಕಟ್ಟಿದ ಕ್ಯಾಪ್ಟನ್ ಅಮರಿಂದರ್ ಸಿಂಗ್ : ಬಿಜೆಪಿ ಜೊತೆ ಸೀಟು ಹಂಚಿಕೆ
( Bjp Bhusanur Ramesh Balappa Sindagi and congress Srinivasa Mane win Hanagal assembly By -election 2021 )