Karnataka Budget 2023 : ಮದ್ಯಪ್ರಿಯರಿಗೆ ಶಾಕ್‌, ದುಬಾರಿಯಾಗಲಿದೆ ಬಿಯರ್‌

ಬೆಂಗಳೂರು : ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ 14 ನೇ ಬಾರಿಗೆ ಬಜೆಟ್‌ ಮಂಡಿಸುವ (Karnataka Budget 2023) ಮೂಲಕ ಹೊಸ ದಾಖಲೆ ಬರೆದಿದ್ದಾರೆ. ಆದರೆ ಈ ಬಾರಿಯ ಬಜೆಟ್‌ನಲ್ಲಿ ಮದ್ಯಪ್ರಿಯರಿಗೆ ರಾಜ್ಯ ಸರಕಾರ ಶಾಕ್‌ ಕೊಟ್ಟಿದೆ. ಅಬಕಾರಿ ಸುಂಕದ ದರವನ್ನು ಹೆಚ್ಚಳ ಮಾಡುವುದಾಗಿ ಸಿಎಂ ಸಿದ್ದರಾಮಯ್ಯ ಅವರು ಬಜೆಟ್‌ನಲ್ಲಿ ಘೋಷಣೆ ಮಾಡಿದ್ದಾರೆ.

ಮದ್ಯದ ಎಲ್ಲಾ 18 ಘೋಷಿತ ಬೆಲೆ ಸ್ಲಾಬ್‌ಗಳ ಮೇಲಿನ ಹೆಚ್ಚುವರಿ ಅಬಕಾರಿ ಸುಂಕದ ದರಗಳನ್ನು ಅನುಬಂಧ (ಅ)ರಲ್ಲಿ ಇರುವಂತೆ ಹಾಲಿ ಇರುವ ದರಗಳ ಮೇಲೆ ಶೇ.20 ರಷ್ಟು ಹೆಚ್ಚಿಸಲು ಪ್ರಸ್ತಾಪ ಮಾಡಲಾಗಿದೆ. ಅಲ್ಲದೇ ಬಿಯರ್‌ ಮೇಲಿನ ಹೆಚ್ಚುವರಿ ಅಬಕಾರಿ ಸುಂಕವನ್ನು ಶೇ.175 ರಿಂದ ಶೇ.185ಕ್ಕೆ ಹೆಚ್ಚಿಸಲು ಪ್ರಸ್ತಾಪಿಸಲಾಗಿದೆ.

ಪ್ರಸಕ್ತ ಸಾಲಿನಲ್ಲಿ ಹೆಚ್ಚು ಪರಿಣಾಮಕಾರಿಯಾಗಿ ಜಾರಿ ಮತ್ತು ನಿಯಂತ್ರಣ ಕ್ರಮಗಳ ಮೂಲಕ 2023-24ನೇ ಸಾಲಿನಲ್ಲಿ ಅಬಕಾರಿ ಇಲಾಖೆಗೆ 36,000 ಕೋಟಿ ರೂಪಾಯಿ ರಾಜಸ್ವ ಸಂಗ್ರಹಣೆಯ ಗುರಿಯನ್ನು ನಿಗದಿ ಪಡಿಸಲಾಗಿದೆ ಎಂದು ಸಿಎ ಸಿದ್ದರಾಮಯ್ಯ ಘೋಷಿಸಿದ್ದಾರೆ.

ಇದನ್ನೂ ಓದಿ : CM Siddaramaiah : ಬಜೆಟ್‌ ಮಂಡನೆಯಲ್ಲೂ ಸಿದ್ದರಾಮಯ್ಯ ದಾಖಲೆ : ರಾಜ್ಯದಲ್ಲಿ ಯಾರು ಎಷ್ಟು ಬಾರಿ ಬಜೆಟ್‌ ಮಂಡಿಸಿದ್ದಾರೆ ಗೊತ್ತಾ ?

ಇದನ್ನೂ ಓದಿ : BS Yediyurappa : ಕರ್ನಾಟಕ ವಿರೋಧ ಪಕ್ಷದ ನಾಯಕನ ಆಯ್ಕೆ ಕೇಂದ್ರದ ನಿರ್ಧಾರ ಎಂದ ಯಡಿಯೂರಪ್ಪ

ಅಬಕಾರಿ ತೆರಿಗೆ ಏರಿಕೆ ಮಾಡಿರುವ ಹಿನ್ನೆಲೆಯಲ್ಲಿ ಎಲ್ಲಾ ರೀತಿಯ ಮದ್ಯದ ದರದಲ್ಲಿ ಏರಿಕೆಯಾಗಲಿದೆ. ಅದ್ರಲ್ಲೂ ಬಿಯರ್‌ ಇನ್ನಷ್ಟು ದುಬಾರಿಯಾಗಿದೆ. ಆದರೆ ರಾಜ್ಯದಲ್ಲಿ ಅಬಕಾರಿ ಸುಂಕ ಹೆಚ್ಚಳವಾದರೂ ಕೂಡ ನಮ್ಮ ರಾಜ್ಯದ ಮದ್ಯದ ದರವು ನೆರೆಯ ರಾಜ್ಯಗಳಿಗಿಂತ ಕಡಿಮೆಯಾಗಿದೆ.‌

Karnataka Budget 2023: Shock for alcoholics, beer will be expensive

Comments are closed.