ಬೆಂಗಳೂರು : ರಾಜ್ಯದಲ್ಲಿ ಸಂಪುಟ ರಚನೆ ಮಾಡುವ ಕುರಿತು ಹೈಕಮಾಂಡ್ ಸಂದೇಶಕ್ಕಾಗಿ ಕಾಯಲಾಗುತ್ತಿದೆ. ಹೈಕಮಾಂಡ್ ಸಂದೇಶದ ಬಂದ ಕೂಡಲೇ ರಾಜ್ಯದಲ್ಲಿ ಸಂಪುಟ ರಚನೆ ಮಾಡಲಾಗುತ್ತದೆ. ಇಂದು ಅಥವಾ ನಾಳೆ ಸಂದೇಶ ಬರುವ ನಿರೀಕ್ಷೆಯಿದ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.

ಬೆಂಗಳೂರಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಶೀಘ್ರದಲ್ಲಿಯೇ ರಾಜ್ಯದಲ್ಲಿ ನೂತನ ಮಂತ್ರಿ ಮಂಡಲ ರಚನೆಯಾಗಲಿದೆ. ಇನ್ನು ಕೊರೊನಾ ಪ್ರವಾಹ ಪರಿಹಾರದ ಕಾರ್ಯಗಳ ಕುರಿತು ಹಿರಿಯ ಅಧಿಕಾರಿಗಳ ಜೊತೆಗೆ ಸಭೆ ನಡೆಸುತ್ತೇನೆ. ಅಲ್ಲದೇ ಎಲ್ಲಾ ಜಿಲ್ಲಾಧಿಕಾರಿಗಳಿಂದಲೂ ವರದಿಯನ್ನು ತರಿಸಿಕೊಂಡು ಅಗತ್ಯ ಹಣಕಾಸಿನ ಬಿಡುಗಡೆಯ ಕುರಿತು ಪ್ರಸ್ತಾಪ ಮಾಡುತ್ತೇನೆ ಎಂದು ತಿಳಿಸಿದ್ದಾರೆ.

ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಇಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರನ್ನು ಭೇಟಿ ಮಾಡಿದ್ದಾರೆ. ಅಲ್ಲದೇ ಬೆಳಗಿನಿಂದಲೇ ಸಚಿವಾಕಾಂಕ್ಷಿಗಳು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ಸಚಿವ ಸ್ಥಾನ ನೀಡುವಂತೆ ಒತ್ತಡ ಹೇರುತ್ತಿದ್ದಾರೆ.