ಬೆಂಗಳೂರು : ಕೇಂದ್ರದಲ್ಲಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಮಾಜಿ ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡರು ಅವರು ಬೆಂಗಳೂರಿಗೆ ಆಗಮಿಸಿದ್ದಾರೆ. ಈ ವೇಳೆಯಲ್ಲಿ ಅವರನ್ನು ಅದ್ದೂರಿಯಾಗಿ ಬಿಜೆಪಿ ಕಾರ್ಯಕರ್ತರು ಸ್ವಾಗತ ಕೋರಿದ್ದಾರೆ. ಈ ವೇಳೆಯಲ್ಲಿ ತಾನು ಪಕ್ಷ ಅಧ್ಯಕ್ಷರ ಸೂಚನೆಯ ಮೇರೆಗೆ ರಾಜೀನಾಮೆ ನೀಡಿದ್ದೇ. ಪಕ್ಷ ನನಗೆ ಎಲ್ಲವನ್ನೂ ಕೊಟ್ಟಿದೆ. ನಾನು ಸಂತೋಷದಿಂದಲೇ ಇದ್ದೇನೆ. ಅಧಿಕಾರ ಇಲ್ಲದಿದ್ದರೂ ಜನರು ನನ್ನ ಜೊತೆಯಲ್ಲಿದ್ದಾರೆ ಎಂದು ಅವರು ಹೇಳಿದ್ದಾರೆ.
ರಾಜ್ಯದಲ್ಲಿ ಮುಂದಿನ ಸಿಎಂ ಆಗ್ತೀರಾ ಅನ್ನೋ ಪ್ರಶ್ನೆಗೆ ಉತ್ತರಿಸಿದ ಡಿವಿಎಸ್, ರಾಜ್ಯ ರಾಜಕಾರಣದ ಬಗ್ಗೆ ಈಗಲೇ ಏನನ್ನೂ ಹೇಳುವುದಿಲ್ಲ. ಪಕ್ಷ ನೀಡುವ ಜವಾಬ್ದಾರಿ ಹಾಗೂ ಸೂಚನೆಯ ಮೇರೆಗೆ ಕೆಲಸ ಮಾಡುತ್ತೇವೆ ಎಂದಿದ್ದಾರೆ. ರಾಜ್ಯ ರಾಜಕಾರಣದ ಬಗ್ಗೆ ಗಮನ ಹರಿಸಿ ಎಂದು ಪಕ್ಷದ ಹೈಕಮಾಂಡ್ ಡಿ.ವಿ.ಸದಾನಂದ ಗೌಡ ಅವರಿಗೆ ಸೂಚನೆಯನ್ನು ನೀಡಿತ್ತು ಎನ್ನಲಾಗುತ್ತಿದೆ. ಆದ್ರೆ ಸದಾನಂದ ಗೌಡರು ಮಾತ್ರ ಯಾವುದೇ ಗುಟ್ಟನ್ನೂ ಬಿಟ್ಟುಕೊಟ್ಟಿಲ್ಲ.
ಕೇಂದ್ರ ಸಚಿವರಾಗಿದ್ದ ಡಿ.ವಿ.ಸದಾನಂದ ಗೌಡ ಅವರು, ಪಕ್ಷದ ವರಿಷ್ಠರ ಸೂಚನೆಯ ಮೇರೆಗೆ ಕೇಂದ್ರ ಸಚಿವ ಸ್ಥಾನಕ್ಕೆ ರಾಜೀನಾಮೆಯನ್ನು ನೀಡಿದ್ದಾರೆ. ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುತ್ತಿದ್ದಂತೆಯೇ ಡಿ.ವಿ.ಸದಾನಂದ ಗೌಡರನ್ನು ಕೇಂದ್ರ ಸಚಿವರನ್ನಾಗಿ ನೇಮಕ ಮಾಡಲಾಗಿತ್ತು. ರಸಗೊಬ್ಬರ ಖಾತೆಯನ್ನು ನಿಬಾಯಿಸುತ್ತಿದ್ದು, ರಸಗೊಬ್ಬರ ಕ್ಷೇತ್ರದಲ್ಲಿ ಹಲವು ಬದಲಾವಣೆಗಳನ್ನು ತಂದಿದ್ದಾರೆ.