ಬೆಂಗಳೂರು : ವಿದೇಶಗಳಲ್ಲಿ ರೂಪಾಂತರಿ ಕೊರೊನಾ ವೈರಸ್ ಸೋಂಕಿನ ಆರ್ಭಟ ಹೆಚ್ಚುತ್ತಿದೆ. ಈ ನಡುವಲ್ಲೇ ರಾಜ್ಯದ ಶಾಲೆ, ಕಾಲೇಜುಗಳಲ್ಲಿಯೂ ಕೊರೊನಾ ಸೋಂಕು ಹೆಚ್ಚುತ್ತಿದೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವ ಬಗ್ಗೆ ಇಂದು 4 ಗಂಟೆಗೆ ಆರೋಗ್ಯ ಅಧಿಕಾರಿಗಳ ಜೊತೆ ಸಭೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Covid Bommai Meeting) ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಸಭೆ ನಡೆಸಲಿದ್ದಾರೆ. ಸಭೆಯಲ್ಲಿ ಮಹತ್ವದ ನಿರ್ಧಾರ ಕೈಗೊಳ್ಳುವ ಸಾಧ್ಯತೆಯಿದೆ.
ದಕ್ಷಿಣ ಆಫ್ರಿಕಾ ಸೇರಿದಂತೆ ಹಲವು ರಾಷ್ಟ್ರಗಳಲ್ಲಿ ಹೊಸ ರೂಪಾಂತರ ತಳಿ ಪತ್ತೆಯಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ಸರಕಾರ ಅಲರ್ಟ್ ಆಗಿದೆ. ರಾಜ್ಯದ ಶಾಲೆ, ಕಾಲೇಜುಗಳಲ್ಲಿಯೂ ಕೊರೊನಾ ಹೆಚ್ಚುತ್ತಿದೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವ ಕುರಿತು ಆರೋಗ್ಯ ಇಲಾಖೆ ಮತ್ತು ಬಿಬಿಎಂಪಿ ಅಧಿಕಾರಿಗಳ ಜೊತೆ ನಡೆಯಲಿರುವ ಸಭೆ ಹೆಚ್ಚು ಮಹತ್ವವನ್ನು ಪಡೆದುಕೊಂಡಿದೆ.
ಧಾರವಾಡದ ಎಸ್‌ಡಿಎಂ ಕಾಲೇಜಿನಲ್ಲಿ ಅಧಿಕ ಸಂಖ್ಯೆಯಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಹೀಗಾಗಿ ಜಿಲ್ಲೆಯ ಅಧಿಕಾರಿಗಳ ಜೊತೆಗೂ ಕೂಡ ಸಿಎಂ ಬಸವರಾಜ್ ಬೊಮ್ಮಾಯಿ ಅವರು ಚರ್ಚೆಯನ್ನು ನಡೆಸಲುವ ಸಾಧ್ಯತೆಯಿದೆ. ವಿದೇಶಗಳಲ್ಲಿ ರೂಪಾಂತರಿ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ತಡ ಮಾಡದೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುತ್ತೇವೆ ಎಂದಿದ್ದಾರೆ.
ವಿದೇಶದಲ್ಲಿ ಹೊಸ ರೂಪಾಂತರ ತಳಿ ಪತ್ತೆಯಾಗಿರುವುದರ ಕುರಿತೂ ಮಹತ್ವದ ಚರ್ಚೆ ನಡೆಯಲಿದೆ. ಈ ಸಂಬಂಧ ಸಭೆಯಲ್ಲಿ ಮಹತ್ವದ ಕೆಲ ನಿರ್ಧಾರ ಪ್ರಕಟ ಮಾಡುವ ಸಾಧ್ಯತೆ ಇದೆ. ಏರ್ ಪೋರ್ಟ್ ಹಾಗೂ ರಾಜ್ಯದ ಗಡಿ ಭಾಗದಲ್ಲಿ ತೆಗೆದುಕೊಳ್ಳಬೇಕಾದ ಬಿಗಿ ಕ್ರಮಗಳು, ಶಾಲೆಗಳಲ್ಲಿ ಅನುಸರಿಸಬೇಕಾದ ಮುಂಜಾಗ್ರತಾ ಕ್ರಮಗಳು, ವಿದೇಶದಿಂದ ಬರುವವರಿಗೆ ಕ್ವಾರಂಟೈನ್ ಮಾಡುವುದು, ಗಡಿ ಭಾಗದಲ್ಲಿ ರಾಜ್ಯಕ್ಕೆ ಬಂದು ಹೋಗುವವರ ಮೇಲೆ ಯಾವ ರೀತಿ ನಿಗಾ ವಹಿಸಬೇಕು… ಹೀಗೆ ಹಲವು ಮಹತ್ವದ ವಿಚಾರಗಳು ಚರ್ಚೆಯಾಗಲಿದ್ದು, ನಂತರ ನಿಯಮಾವಳಿಗಳನ್ನು ಘೋಷಿಸುವ ಸಾಧ್ಯತೆ ಇದೆ.
ಸಿಎಂ ಬಸವರಾಜ್ ಬೊಮ್ಮಾಯಿ ಅವರು ಬಿಬಿಎಂಪಿ ಅಧಿಕಾರಿಗಳ ಜೊತೆಗೆ ಕೊರೊನಾ ಸೋಂಕು ಹೆಚ್ಚುತ್ತಿರುವ ಧಾರವಾಡ, ದಕ್ಷಿಣ ಕನ್ನಡ, ಉಡುಪಿ, ಚಾಮರಾಜನಗರ, ಕೊಡಗು, ಮೈಸೂರು ಜಿಲ್ಲಾಧಿಕಾರಿಗಳ ಜೊತೆಗೆ ವಿಡಿಯೋ ಕಾನ್ಪರೆನ್ಸ್ ನಡೆಸಲಿದ್ದಾರೆ. ಅಲ್ಲದೇ ಕೋವಿಡ್ ತಾಂತ್ರಿಕ ಸಮಿತಿಯ ಸದಸ್ಯರು ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.
ಇದನ್ನೂ ಓದಿ : BJP – Congress : ಬಿಜೆಪಿ ಅಂಗಡಿಯಲ್ಲಿ ಪ್ರಭಾವ ನೋಡಿ ಸುಣ್ಣ-ಬೆಣ್ಣೆ: ಟ್ವೀಟ್ ನಲ್ಲಿ ಕುಟುಕಿದ ಕಾಂಗ್ರೆಸ್
ಇದನ್ನೂ ಓದಿ : 44 people dead : ಮಳೆಯ ಅಬ್ಬರಕ್ಕೆ ನಲುಗಿದೆ ಆಂಧ್ರಪ್ರದೇಶ : ಶೋಧದಿಂದ ಪತ್ತೆಯಾಯ್ತು 44 ಮೃತದೇಹ
(Covid new variant fear Karnataka CM Basavaraj Bommai Meeting with Officials)