ದೆಹಲಿಗೆ ಹೊರಟ ಸಿಎಂ ಬೊಮ್ಮಾಯಿ : ಸಂಪುಟ ರಚನೆಗೆ ಸಿಗುತ್ತಾ ಗ್ರೀನ್‌ ಸಿಗ್ನಲ್‌

ಬೆಂಗಳೂರು : ರಾಜ್ಯದಲ್ಲಿ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ ಮಾಡುತ್ತಿದ್ದಂತೆಯೇ ಸಿಎಂ ಬಸವರಾಜ್‌ ಬೊಮ್ಮಾಯಿ ಅವರು ದೆಹಲಿಗೆ ತೆರಳಿದ್ದಾರೆ. ಹೈಕಮಾಂಡ್‌ ನಾಯಕರನ್ನು ಭೇಟಿಯಾಗಲಿರುವ ಬೊಮ್ಮಾಯಿ ಧನ್ಯವಾದ ಸಮರ್ಪಣೆ ಮಾಡಲಿದ್ದಾರೆ. ಈ ವೇಳೆಯಲ್ಲಿ ಸಂಪುಟ ರಚನೆಗೆ ಗ್ರೀನ್‌ ಸಿಗ್ನಲ್‌ ಕೊಡುತ್ತಾ ಅನ್ನೋ ಕುತೂಹಲ ಹುಟ್ಟುಹಾಕಿದೆ.

ಬೆಂಗಳೂರಿನ ಕೆಂಪೆಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಏರ್‌ ಇಂಡಿಯಾ ವಿಮಾನದ ಮೂಲಕ ದೆಹಲಿಗೆ ತೆರಳಿದ್ದಾರೆ. ಪ್ರಧಾನಿ ನರೇಂದ್ರ ಮೋದಿ, ಅಮಿತ್‌ ಶಾ ಹಾಗೂ ಜೆಪಿ ನಡ್ಡಾ ಅವರನ್ನು ಭೇಟಿ ಮಾಡಿ, ಧನ್ಯವಾದ ಸಮರ್ಪಣೆ ಮಾಡಲಿದ್ದಾರೆ.

ರಾಜ್ಯದಲ್ಲಿ ಬೊಮ್ಮಾಯಿ ಒಬ್ಬರೇ ಅಧಿಕಾರ ಸ್ವೀಕರಿಸಿದ್ದು, ನೆರೆ ಹಾವಳಿ ಇನ್ನೊಂದೆಡೆ ಕೊರೊನಾ ವೈರಸ್‌ ಸೋಂಕಿನ ಹಾವಳಿ ಹೆಚ್ಚುತ್ತಿದೆ. ಈ ನಿಟ್ಟಿನಲ್ಲಿ ಸಂಪುಟದ ರಚನೆಗೆ ಹೈಕಮಾಂಡ್‌ ನಾಯಕರಿಂದ ಒಪ್ಪಿಗೆಯನ್ನು ಪಡೆಯುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ.

ಆದರೆ ಸಿಎಮ್‌ ಬೊಮ್ಮಾಯಿ ಅವರು ತಾನು ಈ ಭೇಟಿಯಲ್ಲಿ ಸಂಪುಟ ರಚನೆಯ ಮಾತನ್ನಾಡುವುದಿಲ್ಲ, ಬದಲಾಗಿ ಮುಂದಿನ ಸಭೆಯಲ್ಲಿ ತೀರ್ಮಾನ ಮಾಡುತ್ತೇವೆ ಎಂದು ಹೇಳಿಕೆ ನೀಡಿದ್ದರು. ಆದರೆ ರಾಜ್ಯದ ಪ್ರಸ್ತುತ ಸ್ಥಿತಿಗತಿಯನ್ನು ಅವಲೋಕಿಸಿದ್ರೆ ರಾಜ್ಯದಲ್ಲಿ ಸಚಿವ ಸಂಪುಟ ರಚನೆ ತುರ್ತಾಗಿ ಆಗಬೇಕಾದ ಅಗತ್ಯವಿದೆ.

Comments are closed.