ರಾಜ್ಯದಲ್ಲಿ ಕೊರೊನಾ ಹೆಚ್ಚಳ : ಲಾಕ್ ಡೌನ್ ನೈಟ್ ಕರ್ಪ್ಯೂ ಅನಿವಾರ್ಯ : ಸಚಿವ ಸುಧಾಕರ್

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿದೆ. ಪರಿಸ್ಥಿತಿ ಮಿತಿಮೀರಿದ್ರೆ ರಾಜ್ಯದಲ್ಲಿ ಲಾಕ್ ಡೌನ್, ನೈಟ್ ಕರ್ಪ್ಯೂ ಅನಿವಾರ್ಯ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ.

ಕೊರೊನಾ ಸೋಂಕು ಒಬ್ಬರಿಂದ ಒಬ್ಬರಿಗೆ ಹಬ್ಬುವುದನ್ನು ತಡೆಗಟ್ಟಬೇಕಾದರೆ ಪ್ರತಿಯೊಬ್ಬರು ಕಡ್ಡಾಯವಾಗಿ ನಿಯಮಗಳನ್ನು ಪಾಲನೆ ಮಾಡಬೇಕು. ಇಲ್ಲದಿದ್ದರೆ ಕಠಿಣ ಕ್ರಮ ಕೈಗೊಳ್ಳುವುದು ಅನಿವಾರ್ಯವಾಗುತ್ತದೆ. ಮಹಾರಾಷ್ಟ್ರದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಿದ  ಪರಿಣಾಮವೇ ಲಾಕ್‍ಡೌನ್ ಮತ್ತು ರಾತ್ರಿ ಕಫ್ರ್ಯೂವನ್ನು ಹೇರಿಕೆ ಮಾಡಲಾಗಿದೆ. ನಮ್ಮಲ್ಲಿ ಅಂತಹ ವಾತಾವರಣ ನಿರ್ಮಾಣವಾಗಬಾರದು ಎಂದರೆ ಪ್ರತಿಯೊಬ್ಬರು ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಪಾಡಿಕೊಂಡು, ಸಾನಿಟೈಸರ್ ಬಳಕೆ ಮಾಡಬೇಕೆಂದು ಮನವಿ ಮಾಡಿದ್ದಾರೆ‌.

ಲಾಕ್‍ಡೌನ್ ಜಾರಿಯಾದರೆ ಸಂಪೂರ್ಣವಾಗಿ ವ್ಯಾಪಾರ ವಹಿವಾಟು ಸ್ಥಗಿತಗೊಳ್ಳುತ್ತದೆ. ಇದರಿಂದ ಜನಸಾಮಾನ್ಯರಿಗೆ ಹೊರೆಯಾಗಲಿದೆ. ನಾವು ಅದಕ್ಕೆ ಅವಕಾಶ ಮಾಡಿಕೊಡಬಾರದೆಂದರೆ ಸಾರ್ವಜನಿಕರು ನಿಯಮಗಳನ್ನು ಪಾಲನೆ ಮಾಡಬೇಕೆಂದು ಹೇಳಿದರು.

ಮೇ ಅಂತ್ಯದವರೆಗೆ ಕೋವಿಡ್ 2ನೇ ಅಲೆ ಇರುವ ಕಾರಣ ನಾವು ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದ್ದೇವೆ. ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್ ಸೋಂಕಿತರಿಗೆ ಶೇ.20ರಷ್ಟು ಹಾಸಿಗೆಗಳನ್ನು ಮೀಸಲಿಡಬೇಕೆಂದು ಸೂಚಿಸಲಾಗಿದೆ. ಬೆಂಗಳೂರಿನ ಬೌರಿಂಗ್ ಮತ್ತು ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಹಾಸಿಗೆಗಳು ಲಭ್ಯವಿದೆ ಎಂದರು.

ಪ್ರಧಾನಿ ನರೇಂದ್ರ ಮೋದಿ ಅವರು 8 ರಾಜ್ಯಗಳ ಮುಖ್ಯಸ್ಥರಿಗೆ ಕೋವಿಡ್ ನಿಯಂತ್ರಣಕ್ಕೆ ಕೆಲವು ಸಲಹೆಗಳನ್ನು ನೀಡಿದ್ದಾರೆ. ಕೋವಿಡ್ ಸೋಂಕು ನಿಯಂತ್ರಣಕ್ಕೆ ಬಾರದಿದ್ದರೆ ಕೆಲವು ಕಠಿಣ ನಿಯಮಗಳನ್ನು ಜಾರಿ ಮಾಡುವಂತೆ ಸೂಚಿಸಿದ್ದಾರೆ. ಅದನ್ನು ಯಾವ ರೀತಿ ಅನುಷ್ಠಾನದ ಕುರಿತು ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ಕೋವಿಡ್ ತಾಂತ್ರಿಕ ಸಲಹಾ ಸಮಿತಿಯೊಂದಿಗೆ ಚರ್ಚಿಸಲಿದ್ದಾರೆ ಎಂದರು.

https://kannada.newsnext.live/ruralindia-postwedding-photoshoot-byndoor-couples/amp/

ಇನ್ನು ಮುಖ್ಯಮಂತ್ರಿ ಯಡಿಯೂರಪ್ಪ ಅವರು ಮಾನವೀಯತೆ ನೆಲೆಯಲ್ಲಿ ಲಾಕ್‍ಡೌನ್ ಜಾರಿ ಮಾಡಲು ಅವಕಾಶ ಕೊಡುತ್ತಿಲ್ಲ. ಚಲನಚಿತ್ರರಂಗ ದವರು ಈಗಾಗಲೇ ಮುಂಗಡವಾಗಿ ಟಿಕೆಟ್ ಬುಕ್ ಮಾಡಲಾಗಿದೆ ಎಂದು ಮನವಿ‌ ಮಾಡಿದ್ದರು. ಜಿಮ್ ಮಾಲೀಕರು ಶೇ.50ರಷ್ಟು ಅವಕಾಶ ನೀಡಬೇಕೆಂದು ಕೇಳಿಕೊಂಡಿದ್ದಕ್ಕೆ ಅನುಮತಿ ನೀಡಲಾಗಿದೆ. ಆದರೆ ಕಡ್ಡಾಯವಾಗಿ ನಿಯಮ ಪಾಲನೆ‌ ಮಾಡಲೇ ಬೇಕು ಎಂದಿದ್ದಾರೆ.

Comments are closed.