ಬೆಂಗಳೂರು : ರಾಜ್ಯದಲ್ಲಿ ಮುಖ್ಯಮಂತ್ರಿ ಹುದ್ದೆಯಿಂದ ಬಿ.ಎಸ್.ಯಡಿಯೂರಪ್ಪ ಕೆಳಗಿಳಿಯುತ್ತಲೇ ಬಿಎಸ್‌ವೈ ಆಪ್ತರನ್ನು ಕಡೆಗಣಿಸಲಾಗುತ್ತಿದೆ ಅನ್ನೋ ಮಾತುಗಳು ಕೇಳಿಬಂದಿತ್ತು. ಆದ್ರೀಗ ಯಡಿಯೂರಪ್ಪ ಆಪ್ತ ನಾಯಕರನ್ನು ಸಿಎಂ ಬಸವರಾಜ್ ಬೊಮ್ಮಾಯಿ ಅವರ ರಾಜಕೀಯ ಆಪ್ತ ಕಾರ್ಯದರ್ಶಿಯನ್ನಾಗಿ ನೇಮಕ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.
ಶೃಂಗೇರಿಯ ಮಾಜಿ ಶಾಸಕ ಡಿ.ಎನ್. ಜೀವರಾಜ್ ಹಾಗೂ ಹೊನ್ನಾಳಿ ಬಿಜೆಪಿ ಶಾಸಕ ರೇಣುಕಾಚಾರ್ಯ ಅವರನ್ನು ಸಿಎಂ ರಾಜಕೀಯ ಆಪ್ತ ಕಾರ್ಯದರ್ಶಿಯನ್ನಾಗಿ ನೇಮಕ ಮಾಡಲಾಗಿದೆ. ಈ ಇಬ್ಬರೂ ಕೂಡ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಅಧಿಕಾರದ ಅವಧಿಯಲ್ಲಿಯೂ ರಾಜಕೀಯ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದರು.
ಆದರೆ ಸಿಎಂ ಯಡಿಯೂರಪ್ಪ ಸಿಎಎಮ್ ಹುದ್ದೆಯಿಂದ ಕೆಳಗಿಳಿಯುತ್ತಲೇ ಆದೇಶವನ್ನು ರದ್ದುಪಡಿಸಲಾಗಿತ್ತು. ಆದರೆ ಇದೀಗ ಯಡಿಯೂರಪ್ಪ ಮತ್ತೆ ತನ್ನ ಆಪ್ತರಿಗೆ ಕ್ಯಾಬಿನೆಟ್ ದರ್ಜೆಯ ಹುದ್ದೆಯನ್ನು ಕೊಡಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಇದನ್ನೂ ಓದಿ : ಸಿದ್ದರಾಮಯ್ಯ ದೊಡ್ಡ ಭಯೋತ್ಪಾದಕ, ಅವರದ್ದುತಾಲಿಬಾನ್ ಸಂಸ್ಕೃತಿ : ಕಟೀಲ್
ಇದನ್ನೂ ಓದಿ : ಆರೋಗ್ಯ ಇಲಾಖೆ ಸಿಬ್ಬಂದಿಗಳಿಗೆ ಬಿಗ್ ಶಾಕ್ : ಭಾನುವಾರ ರಜೆ ಕಡಿತಕ್ಕೆ ಸರ್ಕಾರದ ಚಿಂತನೆ
( EX MLA Jeevraj, MLA Renukacharya Appointed CM Political Secretary )