Karnataka Election: ಕೊನೆಗೂ ಕ್ಷೇತ್ರ ಆಯ್ದುಕೊಂಡ ವಿಪಕ್ಷ ನಾಯಕ ಸಿದ್ದರಾಮಯ್ಯ

ಬೆಂಗಳೂರು : (Karnataka Election) ರಾಜ್ಯದಲ್ಲಿ ವಿಧಾನಸಭೆ ಸಮೀಪಿಸುತ್ತಿದ್ದು, ಪಕ್ಷಗಳ ಟಿಕೆಟ್‌ ಹಂಚಿಕೆಗೆ ಕ್ಷೇತ್ರಗಳನ್ನು ಆಯ್ದುಕೊಳ್ಳುವಲ್ಲಿ ಸಚಿವರು ಬ್ಯುಸಿಯಾಗಿದ್ದಾರೆ. ಆದರೆ ರಾಜ್ಯ ರಾಜಕಾರಣದಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಮಾತ್ರ ಇಂದಿಗೂ ತನ್ನ ಕ್ಷೇತ್ರದ ಗುಟ್ಟು ಬಿಟ್ಟುಕೊಟ್ಟಿಲ್ಲ. ಈಗಲೂ ಕೂಡ ಕ್ಷೇತ್ರ ಸಿದ್ದರಾಮಯ್ಯನವರ ಕ್ಷೇತ್ರ ಆಯ್ಕೆಯಲ್ಲಿ ಗೊಂದಲಗಳಿದ್ದು, ಮೂರು ಕ್ಷೇತ್ರಗಳನ್ನು ಆಯ್ಕೆ ಮಾಡಿಕೊಂಡಿದ್ದಾರೆ. ಬಾದಾಮಿ, ಕೋಲಾರ, ವರುಣಾ ನನ್ನ ಆಯ್ಕೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಇಂದು ಸುದ್ದಿಗಾರರ ಜೊತೆ ಮಾತನಾಡಿದ ಸಿದ್ದರಾಮಯ್ಯ ರಾಜ್ಯ ರಾಜಕಾರಣದಲ್ಲಿ ಏನು ಬೇಕಾದರೂ ಆಗಬಹುದು, ಬಾದಾಮಿ, ಕೋಲಾರ, ವರುಣಾ ನನ್ನ ಆಯ್ಕೆ . ವರಿಷ್ಟರ ನಿರ್ಧಾರವೇ ಅಂತಿಮ ಎಂದು ಹೇಳುವ ಮೂಲಕ ಕೊನೆಗೂ ತನ್ನ ಕ್ಷೇತ್ರದ ಗುಟ್ಟು ಬಿಟ್ಟು ಕೊಟ್ಟಿಲ್ಲ. ಈ ಬಗ್ಗೆ ವರಿಷ್ಟರ ಜೊತೆ ಚರ್ಚಿಸಿ ತೀರ್ಮಾನ ಕೈಗೊಳ್ಳುತ್ತೇನೆ, ನಾಳೆ ಕಾಂಗ್ರೆಸ್ ಅಭ್ಯರ್ಥಿ ಗಳ ಪಟ್ಟಿ ಬಿಡುಗಡೆ ಮಾಡಲಾಗುತ್ತದೆ. ವರಿಷ್ಟರ ನಿರ್ಧಾರವೇ ಅಂತಿಮ, ಯಾವುದೇ ಕ್ಷೇತ್ರದಲ್ಲಿ ನಿಂತರೂ ನಾನು ಗೆಲ್ಲಲ್ಲ, ನನ್ನನ್ನು ಕ್ಷೇತ್ರಕ್ಕೆ ಆಹ್ವಾನಿಸುವವರ ಸಂಖ್ಯೆ ಹೆಚ್ಚಾಗಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಈ ಹಿಂದೆ ಕೋಲಾರ ಕ್ಷೇತ್ರದಲ್ಲಿ ಸ್ಪರ್ಧೆ ಮಾಡುವುದು ಬೇಡ ಎಂದು ರಾಹುಲ್‌ ಗಾಂಧಿ ಸಿದ್ದರಾಮಯ್ಯನವರಿಗೆ ಹೇಳಿದ್ದು, ಮತ್ತೆ ಸಿದ್ದು ಗೊಂದಲದಲ್ಲಿ ಸಿಲುಕಿದ್ದಾರೆ. ಅಳೆದು ತೂಗಿ ಲೆಕ್ಕ ಹಾಕಿ ಕೋಲಾರ ಕ್ಷೇತ್ರದಲ್ಲಿ ಫೈನಲ್‌ ಆಗಿದ್ದ ಸಿದ್ದರಾಮಯ್ಯನವರಿಗೆ ಹೈಕಮಾಂಡ್‌ ಬ್ರೇಕ್‌ ಹಾಕಿದೆ. ಆದರೆ ಸಿದ್ದರಾಮಯ್ಯನವರ ಅಭಿಮಾನಿಗಳ ದಂಡು ಸಿದ್ದು ಕೋಲಾರದಿಂದಲೇ ಸ್ಪರ್ಧಿಸಲಿ ಎಂದು ಆಗ್ರಹಿಸಿದ್ದಾರೆ. ಒಟ್ಟಾರೆಯಾಗಿ ಸಿದ್ದರಾಮಯ್ಯನವರ ಕ್ಷೇತ್ರ ಆಯ್ಕೆ ಗೊಂದಲದ ಗೂಡಾಗಿದೆ.

ಇದನ್ನೂ ಓದಿ : Karnataka Assembly Elections: ನಿರುದ್ಯೋಗಿ ಯುವಕರಿಗೆ ‘ಯುವ ನಿಧಿ’ ಯೋಜನೆಯನ್ನು ಘೋಷಿಸಿದ ರಾಹುಲ್ ಗಾಂಧಿ

ಇದನ್ನೂ ಓದಿ : Assembly Election 2023 : ಎಎಪಿ ಟಿಕೆಟ್‌ ಆಕಾಂಕ್ಷಿಗಳ ಮೊದಲ ಪಟ್ಟಿ ಬಿಡುಗಡೆ

ಸಿದ್ದರಾಮಯ್ಯನವರು ಎಲ್ಲಿಂದ ಸ್ಪರ್ಧಿಸಲಿದ್ದಾರೆ ಎನ್ನುವುದು ಎಲ್ಲರ ಪ್ರಶ್ನೆಯಾಗಿ ಉಳಿದಿದೆ. ಸಿದ್ದರಾಮಯ್ಯನವರ ಕ್ಷೇತ್ರ ಆಯ್ಕೆ ಪಯಣ ಯಾವ ನಿಲ್ದಾಣಕ್ಕೆ ಬಂದು ತಲುಪುತ್ತೋ ಅನ್ನೋದೆ ಒಂದು ಸಸ್ಪೆನ್ಸ್‌ ಥ್ರಿಲ್ಲರ್‌ ಸಿನಿಮಾದಂತೆ ಕುತೂಹಲ ಮೂಡಿಸಿದೆ.

Karnataka Election: Opposition leader Siddaramaiah has finally chosen his constituency

Comments are closed.