ಸೋಮವಾರ, ಏಪ್ರಿಲ್ 28, 2025
HomepoliticsKarnataka Election : ಕರ್ನಾಟಕದಲ್ಲಿ ಅವಧಿ ಪೂರ್ವ ಚುನಾವಣೆ : ಎಚ್.ಡಿ. ಕುಮಾರಸ್ವಾಮಿ ಭವಿಷ್ಯ

Karnataka Election : ಕರ್ನಾಟಕದಲ್ಲಿ ಅವಧಿ ಪೂರ್ವ ಚುನಾವಣೆ : ಎಚ್.ಡಿ. ಕುಮಾರಸ್ವಾಮಿ ಭವಿಷ್ಯ

- Advertisement -

ಬೆಂಗಳೂರು : ರಾಜ್ಯದಲ್ಲಿ ವಿಧಾನಸಭಾ ಚುನಾವಣೆಗೆ (Karnataka Election ) ಇನ್ನೂ ಒಂದು ವರ್ಷ ಬಾಕಿ ಇರುವಂತೆಯೇ ರಾಜಕೀಯ ನಾಯಕರು ಚುನಾವಣೆಗೆ ಸಜ್ಜಾಗುತ್ತಿದ್ದಾರೆ. ಈ ಮಧ್ಯೆ 2023 ರ ಮೇ ವೇಳೆಗೆ ನಡೆಯಬೇಕಿದ್ದ ಚುನಾವಣೆ 2022 ರ ಡಿಸೆಂಬರ್ ವೇಳೆಗೆ ನಡೆಯಬಹುದು ಎಂಬ ಸಂಗತಿ ಚರ್ಚೆಗೆ ಗ್ರಾಸವಾಗುತ್ತಿದೆ. ಈ ಸಂಗತಿಗೆ ಪೂರಕ ಎಂಬಂತೆ ಮಾಜಿಸಿಎಂ ಎಚ್.ಡಿ. ಕುಮಾರಸ್ವಾಮಿ ಮಾತನಾಡಿದ್ದು, ರಾಜ್ಯದಲ್ಲಿ ಅವಧಿ ಪೂರ್ಣ ಚುನಾವಣೆ (Karnataka Election ) ನಡೆಯಲಿದೆ ಎಂದಿದ್ದಾರೆ.

ಕಲಬುರಗಿ ನಗರದಲ್ಲಿ ಮಾತನಾಡಿದ ಮಾಜಿ ಸಿಎಂ ಕುಮಾರಸ್ವಾಮಿ, ರಾಜ್ಯದಲ್ಲಿ ಅವಧಿಗೂ ಮುನ್ನವೇ ಚುನಾವಣೆ ಬರುವ ಸಾಧ್ಯತೆ ಇದೆ ಎನ್ನಲಾಗ್ತಿದೆ. ಚುನಾವಣೆ (Karnataka Election) ಬಂದ್ರೆ ಜೆಡಿಎಸ್ ಸಿದ್ಧವಾಗ್ತಿದೆ. ನಾವು ಹಿಂದೆಂದಿಗಿಂತಲೂ ಹೆಚ್ಚು ಸ್ಥಾನಗಳನ್ನು ಗೆದ್ದು ಬರುವ ವಿಶ್ವಾಸವಿದೆ ಎಂದು ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ನೀರಾವರಿ ವಿಚಾರದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಜನರಿಗೆ ನಾಮ ಎಳೆಯುತ್ತಿದ್ದಾರೆ.ರಾಜ್ಯದ ಜನರಿಗೆ ಎರಡು ಪಕ್ಷಗಳು ದ್ರೋಹ ಮಾಡ್ತಿವೆ ಎಂದ ಎಚ್ಡಿಕೆ, ಬೊಮ್ಮಾಯಿ ಅವರು ನೀರಾವರಿ ಸಚಿವರಾಗಿ ಅನುಭವ ಇದ್ದವರು. ಆದ್ರೆ ಬಜೆಟ್ ನಲ್ಲಿ ನೀರಾವರಿ ಯೋಜನೆಗಳನ್ನು ಪ್ರಸ್ತಾಪಿಸಿದ್ದಾರೆ. ಆದರೆ ಸ್ಪಷ್ಟವಾದ ತೀರ್ಮಾನ ಕೈಗೊಳ್ಳದೇ, ರಾಜ್ಯದ ಜನರಿಗೆ ಸಿಎಂ ದ್ರೋಹ ಮಾಡಿದ್ದಾರೆ ಎಂದು ಎಚ್.ಡಿ. ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.

ಇದನ್ನೂ ಓದಿ :  ಬಿ.ಕೆ. ಹರಿಪ್ರಸಾದ್‌ಗೆ ತಾಕತ್ತಿದ್ದರೆ ತಾಲೂಕು ಪಂಚಾಯತ್‌ ಚುನಾವಣೆ ಗೆಲ್ಲಲಿ : ಕೆ.ಎಸ್.ಈಶ್ವರಪ್ಪ ಸವಾಲು

ಕೇಂದ್ರ ನೀರಾವರಿ ಸಚಿವರು ಮೇಕೆದಾಟು ಯೋಜನೆ ಬಗ್ಗೆ ಮಾತನಾಡಿದ್ದಾರೆ. ಎರಡು ರಾಜ್ಯ ಒಪ್ಪಿದ್ರೆ ಮಾತುಕತೆ ಮಾಡೋದಾಗಿ ಹೇಳ್ತಾರೆ.ಕಾಂಗ್ರೆಸ್ ನವರು ನಮ್ಮ ಪಾದಯಾತ್ರೆ ನೋಡಿ ಸಾವಿರ ಕೋಟಿ ನೀಡಿದ್ದಾರೆ ಅಂತ ಹೇಳ್ತಾರೆ. ಎರಡು ಪಕ್ಷಕ್ಕೆ ಮೇಕೆದಾಟು ಯೋಜನೆ ಪ್ರಾರಂಭ ಮಾಡೋ ಯೋಗ್ಯತೆ ಇಲ್ಲಾ ಎಂದು ಎಚ್.ಡಿ. ಕುಮಾರಸ್ವಾಮಿ ಆರೋಪಿಸಿದ್ದಾರೆ. ಇನ್ನು ಉಕ್ರೇನ್ ವಿದ್ಯಾರ್ಥಿಗಳ ವಿಚಾರಕ್ಕೆ ಸರ್ಕಾರ ಹಾಗೂ ವ್ಯವಸ್ಥೆಯ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ ಎಚ್ಡಿಕೆ, ರಾಜ್ಯದಲ್ಲಿ ಬಡ ಮತ್ತು ಮಧ್ಯಮ ವರ್ಗದ ಮಕ್ಕಳಿಗೆ ಕೈಗೆಟಕುವ ದರದಲ್ಲಿ ಶಿಕ್ಷಣ ಸಿಗ್ತಿಲ್ಲಾ. ಸಿಕ್ಕರೆ ಅಲ್ಲಿಗೆ ಹೋಗಿ ಪ್ರಾಣ ಕಳೆದುಕೊಳ್ಳಬೇಕಾದ ಸ್ಥಿತಿ ನಿರ್ಮಾಣವಾಗ್ತಿರಲಿಲ್ಲ ಎಂದು ಕಿಡಿ ಕಾರಿದ್ದಾರೆ.

ಇದಕ್ಕೂ ಮುನ್ನ ಸರಣಿ ಟ್ವೀಟ್ ಗಳ ಮೂಲಕ ಕಾಂಗ್ರೆಸ್ ಮತ್ತು ಜೆಡಿಎಸ್ ವಿರುದ್ಧ ವಾಗ್ದಾಳಿ ನಡೆಸಿದ ಎಚ್.ಡಿ. ಕುಮಾರಸ್ವಾಮಿ, ನಮ್ಮ ಕುಡಿಯುವ ನೀರಿನ ಯೋಜನೆಗೆ ಕೇಂದ್ರ ಸರ್ಕಾರದ ಸಚಿವರು ವಿವಾದದ, ಬಿಕ್ಕಟ್ಟಿನ ಲೇಪನ ಹಚ್ಚಿದ್ದಾರೆ ಎಂದು ಆರೋಪಿಸಿದ್ದಾರೆ. ಅಲ್ಲದೇ ಮೇಕೆದಾಟು ಯೋಜನೆಗೆ ಒಕ್ಕೂಟ ವ್ಯವಸ್ಥೆಯ ಆಶಯಕ್ಕೆ ತಕ್ಕಂತೆ ಕಾನೂನಾತ್ಮಕ ಅನುಮತಿ ನೀಡುವ ಹೊಣೆಗಾರಿಕೆಯಿಂದ ಕೇಂದ್ರ ಸರ್ಕಾರ ನುಣುಚಿಕೊಳ್ಳುತ್ತಿದೆ ಎಂದು ಎಚ್.ಡಿ. ಕುಮಾರಸ್ವಾಮಿ ವ್ಯಂಗ್ಯವಾಡಿದ್ದಾರೆ.

ಇದನ್ನೂ ಓದಿ : ಬೇಸಿಗೆ ಆರಂಭದಲ್ಲೇ ಬೆಂಗಳೂರಿಗರಿಗೆ ಶಾಕ್ ನೀಡಿದ ಜಲಮಂಡಳಿ

(Karnataka Election : Pre Election in Karnataka says HD Kumaraswamy)

Kannada News Next Deskhttp://kannada.newsnext.live
Kannada News Next Live brings latest news from India and World on breaking news, today news headlines, politics, business, technology, Sports, Education in Kannada Language since 2020. kannada.newsnext.live it was first indexed by Google in July 2021
RELATED ARTICLES

Most Popular