ಸೋಮವಾರ, ಏಪ್ರಿಲ್ 28, 2025
Homekarnatakaಕರ್ನಾಟಕದ ಮಾಜಿ ಮಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಸ್ಪತ್ರೆಗೆ ದಾಖಲು

ಕರ್ನಾಟಕದ ಮಾಜಿ ಮಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಸ್ಪತ್ರೆಗೆ ದಾಖಲು

- Advertisement -

ಬೆಂಗಳೂರು : ಕರ್ನಾಟಕದ ಮಾಜಿಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ( Karnataka Former CM Basavaraja Bommai ) ಅವರು ಅನಾರೋಗ್ಯದ ಹಿನ್ನೆಲೆಯಲ್ಲಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಶಸ್ತ್ರ ಚಿಕಿತ್ಸೆಗೆ ಒಳಗಾಗಿ ಅವರು ಚಿಕಿತ್ಸೆಯನ್ನು ಪಡೆಯುತ್ತಿದ್ದಾರೆ ಎಂದು ತಿಳಿದು ಬಂದಿದೆ.

ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರು ವೈದ್ಯರ ಸಲಹೆ ಮೇರೆಗೆ ಮೊಣಕಾಲು ನೋವಿನ ಶಸ್ತ್ರಚಿಕಿತ್ಸೆಗಾಗಿ ಬನ್ನೇರುಘಟ್ಟ ರಸ್ತೆಯಲ್ಲಿರುವ ಫೋರ್ಟಿಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಮೊಣಕಾಲಿನ ನೋವಿಗೆ ಅವರು ಶಸ್ತ್ರ ಚಿಕಿತ್ಸೆಗೆ ಒಳಗಾಗದ್ದು, ಸದ್ಯ ಆರೋಗ್ಯವಾಗಿದ್ದಾರೆ ಎಂದು ತಿಳಿದು ಬಂದಿದೆ.

Karnataka Former CM Basavaraja Bommai Admitted To private Hospital Bangalore
Image credit to Original Source

ಇನ್ನು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಬಸವರಾಜ್‌ ಬೊಮ್ಮಾಯಿ ಅವರ ಕುರಿತು ಟ್ವೀಟ್‌ ಮಾಡಿದ್ದಾರೆ. ಶಸ್ತ್ರ ಚಿಕಿತ್ಸೆಗೆ ಒಳಗಾಗಿ ಚಿಕಿತ್ಸೆ ಪಡೆಯುತ್ತಿರುವ ಬಸವರಾಜ ಬೊಮ್ಮಾಯಿ ಅವರು ಆದಷ್ಟು ಬೇಗ ಸಂಪೂರ್ಣ ಗುಣಮುಖರಾಗಲಿ ಎಂದು ಹಾರೈಸಿದರು.

ಇದನ್ನೂ ಓದಿ : ಲೋಕಸಭಾ ಚುನಾವಣೆ 2024: ತುಮಕೂರಿಗೆ ದೇವೇಗೌಡ್ರು, ಹಾಸನಕ್ಕೆ ಪ್ರಜ್ವಲ್‌, ಮಂಡ್ಯದಿಂದ ನಿಖಿಲ್‌ ಕುಮಾರಸ್ವಾಮಿ !

ರಾಜ್ಯದ ಕಾಂಗ್ರಸ್‌ ಸರಕಾರ ಎಟಿಎಂ ಸರಕಾರ : ಬಿವೈ ವಿಜಯೇಂದ್ರ ಆರೋಪ

ಬೆಂಗಳೂರಿನಲ್ಲಿ ನಡೆದ ಐಟಿ ದಾಳಿಯ ವೇಳೆ ಕೋಟ್ಯಂತರ ರೂಪಾಯಿ ಹಣ ಪತ್ತೆಯಾಗಿದೆ. ಈ ಕುರಿತು ಬಿಜೆಪಿಯ ಮುಖಂಡ, ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿವೈ ವಿಜಯೇಂದ್ರ ಕಾಂಗ್ರೆಸ್ ಸರ್ಕಾರದ ವಿರುದ್ದ ಗಂಭೀರ ಆರೋಪ ಮಾಡಿದ್ದಾರೆ. ಪಂಚ ರಾಜ್ಯಗಳ ಚುನಾವಣೆಗೆ ರಾಜ್ಯದಿಂದ ಹಣ ಕಳುಹಿಸುತ್ತಿರುವುದು ಎಲ್ಲರಿಗೆ ಗೊತ್ತಿದೆ ಎಂದಿದ್ದಾರೆ.

Karnataka Former CM Basavaraja Bommai Admitted To private Hospital Bangalore
Image Credit to Original Source

ಐಟಿ ದಾಳಿ ರಾಜಕೀಯ ಪ್ರೇರಿತ ಎಂದು ಕಾಂಗ್ರೆಸ್‌ ನಾಯಕರು ಆರೊಪಿಸುತ್ತಿದ್ದಾರೆ. ಆದರೆ ಈ ಹಣ ಕಾಂಗ್ರೆಸ್‌ಗೆ ಸೇರಿದ್ದು ಎಂದು ಒಪ್ಪಿಕೊಂಡಿದ್ದಾರೆ. ಕಾಂಗ್ರೆಸ್‌ ಸರಕಾರದ ವಿರುದ್ದ ಆರೋಪ ಮಾಡಿದ್ದು, ಕಾಂಗ್ರೆಸ್‌ ಸರಕಾರ ಎಟಿಎಂ ಸರಕಾರ. ಇದು ಲೂಟಿ ಮಾಡುವ ಸರಕಾರ, ಭ್ರಷ್ಟಾಚಾರದ ಮೂಲಕ ಇತರ ರಾಜ್ಯಗಳನ್ನು ಗೆಲ್ಲಿಸಲು ಹೊರಟಿದೆ ಎಂದಿದ್ದಾರೆ.

ಇದನ್ನೂ ಓದಿ :  ಬಿಜೆಪಿ – ಜೆಡಿಎಸ್‌ ಮೈತ್ರಿಗೆ ಮುಳುವಾಗುತ್ತಾ ಬಿಎಂಎಸ್ ಪರಭಾರೆ ಹಗರಣ

ಕಳೆದ 5 ದಿನಗಳಲ್ಲಿ ದೇಶಾದ್ಯಂತ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. 55 ಸ್ಥಳಗಳಲ್ಲಿ ಐಟಿ ಅಧಿಕಾರಿಗಳ ದಾಳಿಯಲ್ಲಿ 94 ಕೋಟಿಗೂ ಹೆಚ್ಚು ಹಣವನ್ನು ವಶಪಡಿಸಿಕೊಳ್ಳಲಾಗಿದೆ. ಬೆಂಗಳೂರಿನಲ್ಲಿ ಭಾರೀ ದಾಳಿ ನಡೆಸಿದ ಐಟಿ ಅಧಿಕಾರಿಗಳು ಗುತ್ತಿಗೆದಾರ ಅಂಬಿಕಾಪತಿ ಪುತ್ರನ ಮನೆಯಲ್ಲಿ 40 ಕೋಟಿಗೂ ಅಧಿಕ ಹಣವನ್ನು ವಶಪಡಿಸಿಕೊಂಡಿದ್ದಾರೆ.

ಮಂಚದ ಕೆಳಗೆ 40 ಕೋಟಿ ರೂಪಾಯಿ ಪತ್ತೆಯಾಗಿದ್ದು, ಬಾಕ್ಸ್ ಗಳಲ್ಲಿ ಹಣ ತುಂಬಿದ್ದ ಐಟಿ ಅಧಿಕಾರಿಗಳು ಅಂಬಿಕಾಪತಿಗೆ ಶಾಕ್ ನೀಡಿದ್ದಾರೆ. ಇದಾದ ಬಳಿಕ ಬಿಲ್ಡರ್ ಸಂತೋಷ್ ಗೂ ಐಟಿ ತಂಡ ಶಾಕ್ ನೀಡಿದೆ. ಬೆಂಗಳೂರಿನ ರಾಜಾಜಿನಗರದ ಅಪಾರ್ಟ್‌ಮೆಂಟ್‌ ನಲ್ಲಿ ಇರುವ ಸಂತೋಷ್ ಅವರ ಫ್ಲ್ಯಾಟ್ ಮೇಲೆ ದಾಳಿ ನಡೆಸಿದ್ದಾರೆ. ಇದೇ ವೇಳೆ ಸಿಕ್ಕಿದ 40 ಕೋಟಿಗೂ ಅಧಿಕ ಹಣವನ್ನು ಜಪ್ತಿ ಮಾಡಿ ಮೂರು ಟ್ರಂಕ್ , ಎರಡು ದೊಡ್ಡ ಬ್ಯಾಗ್ , ಒಂದು ಬಾಕ್ಸ್ , ಒಂದು ದೊಡ್ಡ ಸೂಟ್ ಕೇಸ್ ನಲ್ಲಿ ಹಣ ಸಾಗಿಸುತ್ತಿದ್ದರು.

ರಾಜ್ಯದಲ್ಲಿ ಐಟಿ ದಾಳಿ ರಾಜಕೀಯ ತಿರುವು ಪಡೆದುಕೊಂಡಿದೆ. ಐಟಿ ದಾಳಿ ರಾಜಕೀಯ ಪ್ರೇರಿತ ಎಂದು ಕಾಂಗ್ರೆಸ್‌ ನಾಯಕರು ಆರೋಪಿಸುತ್ತಿದ್ದಾರೆ. ಅಲ್ಲದೇ ಪಂಚರಾಜ್ಯಗಳ ಚುನಾವಣೆಗೆ ಕಾಂಗ್ರೆಸ್‌ ಕರ್ನಾಟಕವನ್ನು ಎಟಿಎಂ ಮಾಡಿದೆ ಎಂದಿದ್ದಾರೆ.

ಇದನ್ನೂ ಓದಿ : ಬಿಜೆಪಿಗೆ ಮತ್ತೊಂದು ಶಾಕ್: ಕೈಪಾಳಯ ಸೇರಿದ ಬಿಜೆಪಿ ಮಾಜಿಶಾಸಕಿ ಪೂರ್ಣಿಮಾ ಶ್ರೀನಿವಾಸ್

Karnataka Former Chief Minister Basavaraja Bommai has been admitted to the Fortis Hospital on Bannerghatta Bangalore, for knee pain surgery on doctors advice. Bs yediyurappa tweet

Kannada News Next Deskhttp://kannada.newsnext.live
Kannada News Next Live brings latest news from India and World on breaking news, today news headlines, politics, business, technology, Sports, Education in Kannada Language since 2020. kannada.newsnext.live it was first indexed by Google in July 2021
RELATED ARTICLES

Most Popular