HD Kumaraswamy hijab controversy : ಹಿಜಾಬ್‌ ವಿವಾದ : ನ್ಯಾಯಾಲಯದ ಆದೇಶಕ್ಕೆ ತಲೆಬಾಗಿ, ರಕ್ತಪಾತಕ್ಕೆ ಅವಕಾಶ ಬೇಡ : ಮಾಜಿ ಸಿಎಂ ಕುಮಾರಸ್ವಾಮಿ

ಬೆಂಗಳೂರು : ರಾಜ್ಯದಲ್ಲಿ ಹಿಜಾಬ್‌ ಹಾಗೂ ಕೇಸರಿ ಶಾಲು ವಿವಾದದ (Hijab Controversy) ತಾರಕಕ್ಕೇರಿದೆ. ಈಗಾಗಲೇ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್‌ನಲ್ಲಿ ವಿಚಾರಣೆ ನಡೆಯುತ್ತಿದೆ. ರಾಜ್ಯದಲ್ಲಿ ಇಂತಹ ಘಟನೆಗಳು ನಡೆಯಬಾರದು. ನ್ಯಾಯಾಲಯದ ತೀರ್ಪಿಗೆ ಎಲ್ಲರೂ ಬದ್ದರಾಗಿರಬೇಕು. ರಕ್ತಪಾತಕ್ಕೆ ಅವಕಾಶ ನೀಡಬಾರದು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ (HD Kumaraswamy) ಅವರು ಮನವಿ ಮಾಡಿದ್ದಾರೆ.

ಬೆಂಗಳೂರಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ (HD Kumaraswamy) ಅವರು, ಕೆಲವು ಸಂಘಟನೆಗಳಿಂದ ಪ್ರೇರಿತರಾಗಿ ರಾಜ್ಯದಲ್ಲಿ ಇಂತಹ ಘಟನೆಗಳು ನಡೆಯುತ್ತಿವೆ. ಆದರೆ ರಾಜ್ಯದಲ್ಲಿ ಇಂತಹ ಘಟನೆಗಳು ನಡೆಯಬಾರದು. ಶಾಂತಿ ಕಾಪಾಡುವಂತೆ ಯುವರಿಗೆ ಮನವಿಯನ್ನು ಮಾಡುತ್ತೇನೆ ಎಂದು ಅವರು ಹೇಳಿದ್ದಾರೆ. ಇನ್ನು ನ್ಯಾಯಾಲಯ ನೀಡುವ ತೀರ್ಪಿಗೆ ಎಲ್ಲರೂ ಬದ್ದರಾಗಬೇಕು. ಯಾವುದೇ ಕಾರಣಕ್ಕೂ ರಕ್ತಪಾತಕಕ್ಕೆ ಯಾರೂ ಕೂಡ ಅವಕಾಶವನ್ನು ನೀಡಬಾರದು. ಮಕ್ಕಳಿಗೆ ತಿಳಿ ಹೇಳುವ ಕಾರ್ಯವನ್ನು ಪೋಷಕರು ಮಾಡಬೇಕು ಎಂದು ಅವರು ಪೋಷಕರಲ್ಲಿ ಮನವಿ ಮಾಡಿಕೊಂಡಿದ್ದಾರೆ.

ಇನ್ನು ಸಚಿವ ಸಂಪುಟ ಸಭೆಯ ಬೆನ್ನಲ್ಲೇ ಮಾತನಾಡಿರುವ ಸಚಿವ ಮಾಧುಸ್ವಾಮಿ ಅವರು, ಹಿಜಾಬ್‌ ಕೇಸರಿ ಶಾಲು ವಿವಾದಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದ ತೀರ್ಪು ಬರುವವರೆಗೂ ಯಾವುದೇ ಕಾರಣಕ್ಕೂ ಚರ್ಚೆ ನಡೆಸುವುದಿಲ್ಲ. ಚರ್ಚೆ ನಡೆಸ ಬಾರದು ಎಂದು ತೀರ್ಮಾನಿಸಲಾಗಿದೆ ಎಂದಿದ್ದಾರೆ. ಇನ್ನು ರಾಜ್ಯದ ಕಾಲೇಜುಗಳಲ್ಲಿ ಉಂಟಾಗಿರುವ ಹಿಜಾಬ್‌ ಹಾಗೂ ಕೇಸರಿ ಶಾಲು ವಿವಾದಕ್ಕೆ ಸಂಬಂಧಿಸಿದಂತೆ ಈಗಾಗಲೇ ಹೈಕೋರ್ಟ್‌ನಲ್ಲಿ ವಿಚಾರಣೆ ನಡೆಯುತ್ತಿದೆ. ನಿನ್ನೆ ವಿಚಾರಣೆ ಯನ್ನು ಕೈಗೆತ್ತಿಕೊಂಡಿರುವ ನ್ಯಾಯಾಲಯ ವಿಚಾರಣೆಯನ್ನು ಇಂದಿಗೆ ಮುಂದೂಡಿಕೆ ಮಾಡಿತ್ತು. ಹೀಗಾಗಿ ಇಂದು ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಂತರ ತೀರ್ಪು ಹೊರ ಬೀಳುವ ಸಾಧ್ಯತೆಯಿದೆ.

ಹೈಕೋರ್ಟ್‌ ಪ್ರಕರಣದ ವಿಚಾರಣೆಯನ್ನು ಮುಂದೂಡಿಕೆ ಮಾಡಿದ ಬೆನ್ನಲ್ಲೇ ರಾಜ್ಯ ಸರಕಾರ ಪ್ರೌಢಶಾಲೆ, ಪದವಿ ಪೂರ್ವ ಹಾಗೂ ಪದವಿ ಕಾಲೇಜು ಸೇರಿದಂತೆ ಶೈಕ್ಷಣಿಕ ಸಂಸ್ಥೆಗಳಿಗೆ ಮೂರು ದಿನಗಳ ಕಾಲ ರಜೆಯನ್ನು ಘೋಷಣೆಯನ್ನು ಮಾಡಿದೆ. ನ್ಯಾಯಾಲಯದಲ್ಲಿ ಒಂದೆರಡು ದಿನಗಳಲ್ಲಿ ಪ್ರಕರಣ ತೀರ್ಪು ಹೊರ ಬರುವ ಸಾಧ್ಯತೆಯಿದೆ. ಒಂದೊಮ್ಮೆ ಹೈಕೋರ್ಟ್‌ ತೀರ್ಪು ವಿಳಂಭವಾದ್ರೆ, ಶಾಲೆಗಳಿಗೆ ನೀಡಲಾಗಿರುವ ರಜೆಯನ್ನು ಇನ್ನಷ್ಟು ದಿನಗಳ ಕಾಲ ವಿಸ್ತರಣೆಯನ್ನು ಮಾಡುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ.

ಇದನ್ನೂ ಓದಿ : ಸಚಿವ ಸಂಪುಟದ ಜೊತೆ ನಿಗಮ ಮಂಡಳಿ ಸಂಕಷ್ಟ: ಬೊಮ್ಮಾಯಿ ಲಿಸ್ಟ್ ಗೆ ಕೆಂಡಾಮಂಡಲವಾದ ಬಿಎಸ್ವೈ

ಇದನ್ನೂ ಓದಿ : ಹರತಾಳು VS ಬೇಳೂರು : ಧರ್ಮಸ್ಥಳದಲ್ಲಿ ಆಣೆ ಪ್ರಮಾಣಕ್ಕೆ ಮುಂದಾದ ಹಾಲಿ, ಮಾಜಿ ಶಾಸಕರು

( Former CM HD Kumaraswamy said everyone should bow to the court order regarding the hijab controversy)

Comments are closed.