karnataka legislative council : ವಿಧಾನ ಪರಿಷತ್​ ಚುನಾವಣೆಗೆ ಎಲ್ಲಾ 7 ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆ

ಬೆಂಗಳೂರು : karnataka legislative council : ವಿಧಾನ ಪರಿಷತ್​ ಚುನಾವಣೆಯಲ್ಲಿ ಯಾವುದೇ ಪಕ್ಷವು ಹೆಚ್ಚುವರಿ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸದ ಹಿನ್ನೆಲೆಯಲ್ಲಿ ಇಂದು ನಾಮಪತ್ರ ಹಿಂಪಡೆಯುವ ಅವಧಿ ಮೀರುತ್ತಿದ್ದಂತೆಯೇ ಚುನಾವಣಾಧಿಕಾರಿ ಹಾಗೂ ವಿಧಾನಸಭೆಯ ಕಾರ್ಯದರ್ಶಿ ವಿಶಾಲಾಕ್ಷಿ ಎಲ್ಲಾ ಏಳು ಮಂದಿ ಅಭ್ಯರ್ಥಿಗಳಿಗೆ ಅವಿರೋಧ ಆಯ್ಕೆಯ ಪ್ರಮಾಣ ಪತ್ರವನ್ನು ನೀಡಿದ್ದಾರೆ.


ಈ ಮೂಲಕ ಬಿಜೆಪಿಯಿಂದ ಛಲವಾದಿ ನಾರಾಯಣಸ್ವಾಮಿ, ಹೇಮಲತಾ ನಾಯಕ್​, ಲಕ್ಷ್ಮಣ ಸವದಿ ಹಾಗೂ ಕೇಶವ ಪ್ರಸಾದ್​ ಅವಿರೋಧವಾಗಿ ಪರಿಷತ್​ ಸದಸ್ಯನ ಸ್ಥಾನವನ್ನು ಪಡೆದುಕೊಂಡಿದ್ದಾರೆ. ಇನ್ನು ಕಾಂಗ್ರೆಸ್​ನಿಂದ ನಾಗರಾಜ್​ ಯಾದವ್​ ಹಾಗೂ ಅಬ್ದುಲ್​​ ಜಬ್ಬಾರ್​​ ಮತ್ತು ಜೆಡಿಎಸ್​ನಿಂದ ಟಿ.ಎ ಶರವಣ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.


ಮೇ 24ರಂದು ಪರಿಷತ್​ ಚುನಾವಣೆಗೆ ನಾಮಪತ್ರ ಸಲ್ಲಿಕೆ ಮಾಡಲು ಕೊನೆಯ ದಿನಾಂಕವಾಗಿದೆ. ಮೇ 25ರಂದು ನಾಮಪತ್ರ ಪರಿಶೀಲನೆ ಹಾಗೂ ಮೇ 27ರಂದು ನಾಮಪತ್ರ ಹಿಂತೆಗೆದುಕೊಳ್ಳಲು ಕೊನೆಯ ದಿನಾಂಕವಾಗಿತ್ತು. ಇಂದು ನಾಮಪತ್ರ ವಾಪಸ್​ ತೆಗೆದುಕೊಳ್ಳುವ ಅವಧಿಯು ಕೊನೆಯಾಗುತ್ತಿದ್ದಂತೆಯೇ ವಿಶಾಲಾಕ್ಷಿ ಅವಿರೋಧವಾಗಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರಮಾಣ ಪತ್ರ ನೀಡಿದ್ದಾರೆ.

ಇದನ್ನು ಓದಿ : ಚೈತ್ರಾ ಹಳ್ಳಿಕೇರಿ 25 ಕೋಟಿ ಪರಿಹಾರಕ್ಕಾಗಿ ಸುಳ್ಳು ಆರೋಪ : ನಟಿ ಪತಿ ಬಾಲಾಜಿ ಪ್ರತ್ಯಾರೋಪ

ಇದನ್ನೂ ಓದಿ : Samantha and Vijay : ಸಾಹಸ ಚಿತ್ರೀಕರಣದ ವೇಳೆ ಗಾಯಗೊಂಡ ಸಮಂತಾ ಮತ್ತು ವಿಜಯ ದೇವರಕೊಂಡ

karnataka legislative council polls all seven candidates unanimously elected

Comments are closed.