Karnataka MLA Election : ಕರ್ನಾಟಕ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟ: ಮೇ 10 ಕ್ಕೆ ಚುನಾವಣೆ

ಬೆಂಗಳೂರು : ಕರ್ನಾಟಕ ವಿಧಾನಸಭಾ ಚುನಾವಣಾ (Karnataka MLA Election) ದಿನಾಂಕ ಇಂದು ಘೋಷಣೆಯಾಗಿದ್ದು, ಮೇ ರಂದು ನಡೆಯಲಿದೆ. ಇಂದು ಬೆಳಗ್ಗೆ 11.30 ಕ್ಕೆ ದೆಹಲಿಯ ವಿಜ್ಞಾನ ಕೇಂದ್ರದಲ್ಲಿ ಕೇಂದ್ರ ಚುನಾವಣಾ ಆಯೋಗ ಮಹತ್ವದ ಸುದ್ದಿಗೋಷ್ಠಿಯನ್ನು ಕರೆದಿದ್ದು, ಕೇಂದ್ರ ಚುನಾವಣಾ ಆಯೋಗದ ಮುಖ್ಯಸ್ಥರಾಗಿರುವ ರಾಜೀವ್‌ ಕುಮಾರ್‌ ಚುನಾವಣಾ ದಿನಾಂಕ ಘೋಷಣೆ ಮಾಡಿದ್ದಾರೆ.

ಕರ್ನಾಟಕ ವಿಧಾನಸಭಾ ಚುನಾವಣೆಗಾಗಿ (Karnataka MLA Election) ಈಗಾಗಲೇ ವಿವಿಧ ರಾಜಕೀಯ ಪಕ್ಷಗಳು ಕಸರತ್ತು ನಡೆಸುತ್ತಿವೆ. ಇದೀಗ ಚುನಾವಣಾ ದಿನಾಂಕ ಘೋಷಣೆಯಾಗಿದ್ದು, ಇಂದಿನಿಂದಲೇ ಚುನಾವಣಾ ನೀತಿ ಸಂಹಿತೆ ಜಾರಿಯಾಗಲಿದೆ. ಮೇ 10 ರಂದು ಚುನಾವಣೆ, ಮೇ 13 ರಂದು ಪಲಿತಾಂಶ ದಿನಾಂಕ ನಿಗಧಿಯಾಗಿದೆ. ಕಳೆದ ಚುನಾವಣೆಯಂತೆ ಈ ಬಾರಿಯೂ ಒಂದೇ ಹಂತದಲ್ಲಿ ಮತದಾನ ನಡೆಯಲಿದ್ದು, 5.21 ಕೋಟಿ ಮತದಾರರಿಂದ ಈ ಬಾರಿ ಮತದಾನ ನಡೆಯಲಿದೆ.

ರಾಜ್ಯದಲ್ಲಿ ಚುನಾವಣೆಗಾಗಿ ಈಗಾಗಲೇ ಚುನಾವಣಾ ಆಯೋಗ ಸಿದ್ದತೆಯನ್ನು ಮಾಡಿಕೊಂಡಿದೆ. ಈಗಾಗಲೇ ಕೇಂದ್ರ ಚುನಾವಣಾ ಆಯೋಗದ ಮುಖ್ಯಸ್ಥರು ರಾಜ್ಯಕ್ಕೆ ಭೇಟಿ ನೀಡಿ ಸಿದ್ದತೆಗಳನ್ನು ಪರಿಶೀಲನೆ ನಡೆಸಿದ್ದಾರೆ. ಚುನಾವಣೆಯ ಹಿನ್ನೆಲೆಯಲ್ಲಿ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಈಗಾಗಲೇ ಚುನಾವಣಾ ಆಯೋಗ ಜಿಲ್ಲಾಡಳಿತಗಳಿಗೆ ಸೂಚನೆಯನ್ನು ನೀಡಿದೆ. ಇನ್ನು ಚುನಾವಣಾ ಅಕ್ರಮ ತಡೆಯುವ ನಿಟ್ಟಿನಲ್ಲಿ ಈಗಾಗಲೇ ಜಿಲ್ಲಾ ಗಡಿಭಾಗಗಳಲ್ಲಿ ಚೆಕ್‌ಪೋಸ್ಟ್‌ಗಳನ್ನು ತೆರೆದು ವಾಹನಗಳ ತಪಾಸಣಾ ಕಾರ್ಯವನ್ನು ಈಗಾಗಲೇ ನಡೆಸಲಾಗುತ್ತಿದೆ.

ಕಾಂಗ್ರೆಸ್, ಜೆಡಿಎಸ್‌, ಆಮ್‌ ಆದ್ಮಿ ಪಕ್ಷಗಳು ಈಗಾಗಲೇ ತಮ್ಮ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿವೆ. ಉಳಿದಂತೆ ಬಿಜೆಪಿ ಎಪ್ರಿಲ್‌ ಮೊದಲ ವಾರದಲ್ಲಿ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸುವ ಸಾಧ್ಯತೆಯಿದೆ. 2018ರ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಒಂದೇ ಹಂತದಲ್ಲಿ ಮತದಾನ ಮಾಡಲಾಗಿತ್ತು. ಕೇಂದ್ರ ಚುನಾವಣಾ ಆಯೋಗ ಮಾ.9ರಂದು ನಡೆಸಿದ್ದ ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಸಭೆಯಲ್ಲಿ ಎಲ್ಲಾ 224 ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಮತದಾನ ನಡೆಸಬೇಕು ಎಂದು ಕಾಂಗ್ರೆಸ್ ಮತ್ತು ಜೆಡಿಎಸ್ ಆಗ್ರಹಿಸಿದ್ದರೆ, ಒಂದಕ್ಕಿಂತ ಹೆಚ್ಚು ಹಂತಗಳಲ್ಲಿ ಚುನಾವಣೆ ನಡೆಸುವಂತೆ ಬಿಜೆಪಿ ಬೇಡಿಕೆ ಇಟ್ಟಿತ್ತು ಎಂದು ಹೇಳಲಾಗಿತ್ತು. ಒಂದೇ ಹಂತದಲ್ಲಿ ನಡೆಯುವ ಎಲ್ಲ ಸಾಧ್ಯತೆಗಳು ಇವೆ.

ಮೇ ೨೪ ಕ್ಕೆ ಕರ್ನಾಟಕ ವಿಧಾನಸಭೆ ಅವಧಿ ಮುಗಿಯಲಿದ್ದು, ಮೊದಲ ಬಾರಿಗೆ ಮನೆಯಿಂದಲೇ ಮತದಾನಕ್ಕೆ ಅವಕಾಸ ನೀಡಲಾಗಿದೆ. 80 ವರ್ಷ ಮೇಲ್ಪಟ್ಟವರಿಗೆ ಹಾಗೂ ವಿಕಲಚೇತನರಿಗೆ ಮನೆಯಿಂದಲೇ ಮತದಾನ ಮಾಡಲು ಅವಕಾಶ ಕಲ್ಪಿಸಲಾಗಿದ್ದು, ಸಿಬ್ಬಂದಿಯೇ ಮನೆಗೆ ತೆರಳಿ ಮತದಾನ ಮಾಡಿಸಕೊಳ್ಳಲಿದ್ದಾರೆ. ಅದೇ ಗೌಪ್ಯತೆಯೊಂದಿಗೆ ಮನೆಯಲ್ಲಿಯೇ ಮತದಾನ ನಡೆಯಲಿದೆ. ಏಪ್ರಿಲ್‌ 1 ಕ್ಕೆ 18 ವರ್ಷ ತುಂಬಿದವರಿಗೂ ಮತದಾನಕ್ಕೆ ಅರ್ಹರಾಗಿರುತ್ತಾರೆ. 2.62 ಕೋಟಿ ಪುರುಷರು, 2.59 ಕೋಟಿ ಮಹಿಳೆಯರು, 5 ಲಕ್ಷ ವಿಕಲ ಚೇತನ ಮತದಾರರು, 4,699 ತೃತಿಯಲಿಂಗಿ ಮತದಾರರಿದ್ದು, 9.17 ಲಕ್ಷ ಯುವ ಸಮೂಹದಿಂದ ಮತದಾನ ನಡೆಯಲಿದೆ.

ರಾಜ್ಯದಲ್ಲಿ ಒಟ್ಟು 58, ಸಾವಿರ ಮತಗಟ್ಟೆಗಳಿದ್ದು, 34219 ಗ್ರಾಮೀಣ ಮತಗಟ್ಟೆ, 20063 ನಗರ ಮತಗಟ್ಟೆ, 1320 ಮಹಿಳಾ ಮತಗಟ್ಟೆಗಳಲ್ಲಿ ಮತದಾನ ನಡೆಯಲಿದೆ.

ಇದನ್ನೂ ಓದಿ : ಮೇ ಮೊದಲ ವಾರ ಕರ್ನಾಟಕ ವಿಧಾನಸಭಾ ಚುನಾವಣೆ : ಇಂದೇ ಮುಹೂರ್ತ ಫಿಕ್ಸ್

ಇದನ್ನೂ ಓದಿ : Horoscope Today : ದಿನಭವಿಷ್ಯ – ಮಾರ್ಚ್ 29 ಬುಧವಾರ

ಈ ಬಗ್ಗೆ ರಾಜಕೀಯ ಪಕ್ಷಗಳ ಅಭಿಪ್ರಾಯ ಕೇಳುವುದು ಸಾಮಾನ್ಯ ಪ್ರಕ್ರಿಯೆಯಾಗಿದ್ದು, ರಾಜ್ಯದ ಪ್ರಮುಖ ಪಕ್ಷಗಳ ಅಭಿಪ್ರಾಯ ಕೇಳಲಾಗಿತ್ತು. ಈ ಸಮಯದಲ್ಲಿ ಒಂದೇ ಹಂತದಲ್ಲಿ ಚುನಾವಣೆ ನಡೆಸಬೇಕು ಎಂದೂ ಅಭಿಪ್ರಾಯಗಳು ಬಂದಿವೆ. ಈ ಎಲ್ಲಾ ಅಂಶಗಳನ್ನು ಗಮನಿಸಿ ಆಯೋಗ ಅಂತಿಮ ತೀರ್ಮಾನ ತೆಗೆದುಕೊಂಡಿದೆ. ಮತದಾನ ಹೆಚ್ಚಿಸಲು ಈ ಬಾರಿ ಉತ್ತೇಜನ ನೀಡಲಾಗಿದ್ದು, ಚುನಾವಣಾ ಅಕ್ರಮ ತಡೆಯಲು ವಿಶೇಷ ತಂಡಗಳನ್ನು ರಚಿಸಲಾಗಿದೆ. 171 ಅಂತರಾಜ್ಯ ಚೆಕ್‌ ಪೋಸ್ಟ್‌ ಗಳನ್ನು ಸ್ಥಾಪಿಸಲಾಗಿದ್ದು, ಚುನಾವಣೆ ಅಕ್ರಮ ತಡೆಯಲು 2,400 ವಿಶೇಷ ತಂಡಗಳನ್ನು ಕೂಡ ರಚಿಸಲಾಗಿದೆ.

ಇದನ್ನೂ ಓದಿ : Dharmasthala New police station: ಧರ್ಮಸ್ಥಳ ಪೊಲೀಸ್‌ ಠಾಣೆಯ ನೂತನ ಕಟ್ಟಡದ ಉದ್ಘಾಟನೆ

Karnataka MLA Election : Karnataka Legislative Assembly Election Date Announced: May Election

Comments are closed.