Bommai CM : ನೂತನ ಮುಖ್ಯಮಂತ್ರಿಯಾಗಿ ಬಸವರಾಜ್‌ ಬೊಮ್ಮಾಯಿ ನೇಮಕ : ನಾಳೆ ಪ್ರಮಾಣವಚನ

ಬೆಂಗಳೂರು : ರಾಜ್ಯದ ಮುಖ್ಯಮಂತ್ರಿಯಾಗಿದ್ದ ಬಿ.ಎಸ್.ಯಡಿಯೂರಪ್ಪ ಅವರು ಸಿಎಂ ಹುದ್ದೆಗೆ ರಾಜೀನಾಮೆ ನೀಡಿದ ಬೆನ್ನಲ್ಲೇ ಕರ್ನಾಟಕ ನೂತನ ಮುಖ್ಯಮಂತ್ರಿಯಾಗಿ ಶಿಗ್ಗಾವಿ ವಿಧಾನಸಭಾ ಕ್ಷೇತ್ರದ ಶಾಸಕ ಬಸವರಾಜ್‌ ಬೊಮ್ಮಾಯಿ ಅವರು ನೇಮಕವಾಗಿದ್ದಾರೆ. ಈ ಕುರಿತು ಬಿ.ಎಸ್.ಯಡಿಯೂರಪ್ಪ ಅವರು ಅಧಿಕೃತವಾಗಿ ಘೋಷಣೆಯನ್ನು ಮಾಡಿದ್ದಾರೆ. ಮೂಲಕ ನಾಳೆಯಿಂದ ಬೊಮ್ಮಾಯಿ ಸರಕಾರ ಜಾರಿಗೆ ಬರಲಿದೆ.

ಹಾವೇರಿ ಜಿಲ್ಲೆಯ ಶಿಗ್ಗಾವಿ ವಿಧಾನಸಭಾ ಕ್ಷೇತ್ರದ ಶಾಸಕರಾಗಿರುವ ಬಸವರಾಜ್‌ ಬೊಮ್ಮಾಯಿ ಅವರು ಮಾಜಿ ಮುಖ್ಯಮಂತ್ರಿ ಎಸ್.ಆರ್.‌ ಬೊಮ್ಮಾಯಿ ಅವರ ಪುತ್ರ. ಇಂದು ನಡೆದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಮುಖ್ಯಮಂತ್ರಿಯಾಗಿ ಬಸವರಾಜ್‌ ಬೊಮ್ಮಾಯಿ ಅವರು ಆಯ್ಕೆಯಾಗಿದ್ದಾರೆ. ಅಲ್ಲದೇ ಬಿಜೆಪಿ ಕೋರ್‌ ಕಮಿಟಿಯಿಂದಲೂ ನೇಮಕ ಮಾಡಲಾಗಿದೆ. ಅಲ್ಲದೇ ಬಿಜೆಪಿ ಕೋರ್‌ ಕಮಿಟಿಯಿಂದಲೂ ಒಪ್ಪಿಗೆಯನ್ನು ಪಡೆಯಲಾಗಿದೆ. ಈ ಕುರಿತು ಚುನಾವಣಾ ವೀಕ್ಷಕರು ಅಧಿಕೃತವಾಗಿ ಘೋಷಣೆಯನ್ನು ಮಾಡಿದ್ದಾರೆ.

ಸಿಎಂ ಯಡಿಯೂರಪ್ಪ ರಾಜೀನಾಮೆಯ ಬೆನ್ನಲ್ಲೇ ರಾಜ್ಯದಲ್ಲಿ ನೂತನ ಮುಖ್ಯಮಂತ್ರಿಯಾರಾಗುತ್ತಾರೆ ಅನ್ನೋ ಕುತೂಹಲ ವ್ಯಕ್ತವಾಗಿತ್ತು. ಮಾತ್ರವಲ್ಲಹಲವು ಹೆಸರಗಳು ಕೂಡ ಕೇಳಿಬಂದಿತ್ತು. ಆದರೆ ಯಡಿಯೂರಪ್ಪ ಅವರು ಬಸವರಾಜ್‌ ಬೊಮ್ಮಾಯಿ ಅವರ ಹೆಸರನ್ನು ಸೂಚನೆಯನ್ನು ಮಾಡಿದ್ದರು. ತಮಗೆ ಆಪ್ತರಾಗಿದ್ದ ಬೊಮ್ಮಾಯಿ ಅವರನ್ನೇ ರಾಜ್ಯದ ಮುಂದಿನ ಮುಖ್ಯಮಂತ್ರಿಯನ್ನಾಗಿ ನೇಮಕ ಮಾಡುವಲ್ಲಿ ಯಡಿಯೂರಪ್ಪ ಯಶಸ್ವಿಯಾಗಿದ್ದಾರೆ.

ನೂತನ ಮುಖ್ಯಮಂತ್ರಿಯ ಆಯ್ಕೆಯ ಕುರಿತು ಬೆಂಗಳೂರಿನ ಕ್ಯಾಪಿಟಲ್‌ ಹೋಟೆಲ್‌ನಲ್ಲಿ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಡೆಯಿತು. ಹಂಗಾಮಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್‌ ಸಿಂಗ್‌, ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲು, ಚುನಾವಣಾ ವೀಕ್ಷಕರಾದ ರಾಕೇಶ್‌ ರೆಡ್ಡಿ, ಧರ್ಮೇಂದ್ರ ಪ್ರಧಾನ್‌ ಸೇರಿದಂತೆ ಹಲವು ನಾಯಕರು ಪಾಲ್ಗೊಂಡಿದ್ದಾರೆ. ನಾಳೆ ಬಸವರಾಜ್‌ ಬೊಮ್ಮಾಯಿ ಅವರು ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕಾರ ಮಾಡಲಿದ್ದಾರೆ.

ಇದನ್ನೂ ಓದಿ : CM Bommai first Reaction : ಮೋದಿ, ಶಾ, ಯಡಿಯೂರಪ್ಪಗೆ ಧನ್ಯವಾದ ಹೇಳಿದ ನೂತನ ಸಿಎಂ ಬೊಮ್ಮಾಯಿ

ಎಸ್.ಆರ್.‌ ಬೊಮ್ಮಾಯಿ ಅವರು ಸಿಎಂ ಹುದ್ದೆಯಿಂದ ಇಳಿದ 33 ವರ್ಷದ ಬಳಿಕ ಅವರ ಪುತ್ರ ಬಸವರಾಜ್‌ ಬೊಮ್ಮಾಯಿ ಅವರು ರಾಜ್ಯದ 30ನೇ ಮುಖ್ಯಮಂತ್ರಿಯಾಗಿ ಅಧಿಕಾರ ವನ್ನು ಸ್ವೀಕಾರ ಮಾಡುತ್ತಿದ್ದಾರೆ.

Comments are closed.