Karnataka new CM: ಡಿಕೆ ಶಿವಕುಮಾರ್ ಯಾವಾಗ ಸಿಎಂ ? ಉತ್ತರ ಕೊಟ್ಟ ಸಿಎಂ ಸಿದ್ದರಾಮಯ್ಯ
ಬೆಂಗಳೂರು: Karnataka new CM: ಕರ್ನಾಟಕದಲ್ಲಿ ರಾಜಕೀಯ ಚಟುವಟಿಕೆ ಗರಿಗೆದರಿದೆ. ಈ ನಡುವಲ್ಲೇ ಡಿಸಿಎಂ ಡಿಕೆ ಶಿವಕುಮಾರ್ ಅವರ ನಿವಾಸದಲ್ಲಿ ಸಿಎಂ ಸಿದ್ದರಾಮಯ್ಯ ನಾಟಿಕೋಳಿಯ ಜೊತೆಗೆ ಬ್ರೇಕ್ ಫಾಸ್ಟ್ ಮುಗಿಸಿದ್ದಾರೆ. ಜೊತೆಗೆ ಡಿಕೆಶಿ ಯಾವಾಗ ಸಿಎಂ ಆಗ್ತಾರೆ ಅನ್ನೋ ಪ್ರಶ್ನೆಗೂ ಉತ್ತರ ಕೊಟ್ಟಿದ್ದಾರೆ.
ಡಿಸಿಎಂ ಡಿಕೆ ಶಿವಕುಮಾರ್(DK Shivakumar) ಸಿಎಂ ಆಗ್ತಾರೆ ಅನ್ನೋ ಚರ್ಚೆ ಹಲವು ಸಮಯಗಳಿಂದಲೂ ಕೇಳಿಬರ್ತಿದೆ. ಆದರೆ ಸಿದ್ದರಾಮಯ್ಯ ಅವರು ಸಿಎಂ ಹುದ್ದೆಯಿಂದ ಕೆಳಗೆ ಇಳಿಯುವ ಸೂಚನೆ ಸಿಗ್ತಾ ಇರಲಿಲ್ಲ. ಆದರೆ ಇಂದು ಖುದ್ದು ಸಿಎಂ ಸಿದ್ದರಾಮಯ್ಯ ಡಿಕೆ ಶಿವಕುಮಾರ್ ಸಿಎಂ ಆಗೋ ಕುರಿತು ಅಪ್ಡೇಟ್ಸ್ ಕೊಟ್ಟಿದ್ದಾರೆ.
ಡಿಕೆ ಶಿವಕುಮಾರ್ ಅವರ ನಿವಾಸದಲ್ಲಿ ಬ್ರೇಕ್ ಫಾಸ್ಟ್ ಮುಗಿಸಿದ ಬೆನ್ನಲ್ಲೇ ಮಾಧ್ಯಮದವರ ಜೊತೆಗೆ ಮಾತನಾಡಿದ್ರು. ಡಿಕೆ ಶಿವಕುಮಾರ್ ಅವರು ಯಾವಾಗ ಸಿಂ ಆಗ್ತಾರೆ ಅನ್ನೋ ಮಾಧ್ಯಮದವರ ಪ್ರಶ್ನೆಗೆ ಸಿದ್ದರಾಮಯ್ಯ ಅವರು ಸಿಡುಕಿನಿಂದಲೇ ಉತ್ತರಿಸಿದ್ದಾರೆ.
” ಹೈಕಮಾಂಡ್ ಹೇಳಿದಾಗ ಸಿಎಂ ಆಗ್ತಾರೆ ಅನ್ನುತ್ತಾ ಕೈ ಮೇಲೆತ್ತಿ ತೋರಿಸುತ್ತಾ ನಡೆದಿದ್ದಾರೆ. ಈ ಮೂಲಕ ಸಿಎಂ ಸಿದ್ದರಾಮಯ್ಯ ಅವರು ಹೈಕಮಾಂಡ್ ನಿರ್ಧಾರಕ್ಕೆ ತಾವು ಬದ್ದ ಅನ್ನೋ ಸಂದೇಶವನ್ನು ರವಾನಿಸಿದ್ದಾರೆ.
ಸಿಎಂ ಸಿದ್ದರಾಮಯ್ಯ ಅವರ ನಿಲುವು ಸ್ಪಷ್ಟ ಪಡಿಸಿದ್ದು, ನಾಯಕತ್ವ ಬದಲಾವಣೆಯ ಜವಾಬ್ದಾರಿಯನ್ನು ದೆಹಲಿಯ ವರಿಷ್ಠರ ಹೆಗಲಿಗೆ ವರ್ಗಾಯಿಸಿದ್ದಾರೆ.
ಡಿಸೆಂಬರ್ 8ಕ್ಕೆ ಸಿಎಂ ದೆಹಲಿ ಪ್ರವಾಸ
ಕರ್ನಾಟಕದಲ್ಲಿ ರಾಜಕೀಯ ಬೆಳವಣಿಗೆಯ ನಡುವಲ್ಲೇ ಸಿದ್ದರಾಮಯ್ಯ ಅವರು ಡಿಸೆಂಬರ್ 8ಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ಅವರ ಜೊತೆಗೆ ದೆಹಲಿಗೆ ತೆರಳುವುದಾಗಿ ಸಿದ್ದರಾಮಯ್ಯ ಅವರು ಘೋಷಿಸಿದ್ದಾರೆ.
ವರಿಷ್ಠರು ಸಮಯಾವಕಾಶವನ್ನು ನೀಡಿದ್ರೆ ಅವರನ್ನು ಭೇಟಿಯಾಗ್ತೇನೆ. ನಾಳೆ ಮಂಗಳೂರಿನಲ್ಲಿ ನಡೆಯುವ ಖಾಸಗಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುತ್ತಿದ್ದು, ಕೆಸಿ ವೇಣುಗೋಪಾಲ್ ಅವರನ್ನು ಭೇಟಿ ಮಾಡುತ್ತೇನೆ ಎಂದಿದ್ದಾರೆ.



