ನವದೆಹಲಿ : ಕರ್ನಾಟಕದ ನೂತನ ರಾಜ್ಯಪಾಲರಾಗಿ ತಾವರ್ ಚಂದ್ ಗೆಹ್ಲೋಟ್ ಅವರನ್ನು ನೇಮಕ ಮಾಡಲಾಗಿದೆ. ಮಾತ್ರವಲ್ಲ 8 ರಾಜ್ಯಗಳಿಗೆ ನೂತನ ರಾಜ್ಯಪಾಲರನ್ನು ನೇಮಕ ಮಾಡಲಾಗಿದೆ.
ಮಧ್ಯಪ್ರದೇಶದ ದಲಿತ ಕುಟುಂಬದಲ್ಲಿ ಹುಟ್ಟಿದಲ್ಲಿ ಜನಿಸಿದ್ದ ಗೆಹ್ಲೋಟ್ ಅವರು ಕೇಂದ್ರ ಸಚಿವರಾಗಿ, ರಾಜ್ಯಸಭಾ ಸದಸ್ಯರಾಗಿ ಸೇವೆ ಸಲ್ಲಿಸಿದ್ದಾರೆ. ಈ ಹಿಂದೆ ಕರ್ನಾಟಕದ ಉಸ್ತುವಾರಿಯಾಗಿದ್ದರು. ಇದೀಗ ರಾಜ್ಯಪಾಲರಾಗಿದ್ದ ವಿ.ಆರ್. ವಾಲಾ ಅವರ ಅವಧಿ ಮುಕ್ತಾಯವಾದ ಹಿನ್ನೆಲೆಯಲ್ಲಿ ಗೆಹ್ಲೋಟ್ ಅವರನ್ನು ನೇಮಕ ಮಾಡಲಾಗಿದೆ.
ಕರ್ನಾಟಕ ಮಾತ್ರವಲ್ಲದೇ ದೇಶದ ೮ ರಾಜ್ಯಗಳ ರಾಜ್ಯಪಾಲರನ್ನು ನೇಮಕ ಮಾಡಲಾಗಿದೆ. ತ್ರಿಪುರ ರಾಜ್ಯಪಾಲರಾಗಿ ಸತ್ಯದೇವ್ ನಾರಾಯಣ್ ಆರ್ಯ, ಜಾರ್ಖಂಡ್ ರಮೇಶ್ ಬೈಸ್, ಮಿಜೋರಾಂ ರಾಜ್ಯಪಾಲರಾಗಿ ಹರಿ ಬಾಬು ಕಂಭಂಪತಿ, ಮಧ್ಯಪ್ರದೇಶ ಮಂಗುಭಾಯ್ ಚಗನ್ಭಾಯ್ ಪಟೇಲ್, ಹಿಮಾಚಲ ಪ್ರದೇಶ ರಾಜೇಂದ್ರನ್ ವಿಶ್ವನಾಥ್ ಅರ್ಲೆಕರ್, ಗೋವಾ ಪಿ.ಎಸ್.ಶ್ರೀಧರನ್ ಪಿಳ್ಳೈ ಹಾಗೂ ಹರಿಯಾಣ ರಾಜ್ಯಪಾಲರಾಗಿ ಬಂದಾರು ದತ್ತಾತ್ರೇಯ ಅವರನ್ನು ನೇಮಕ ಮಾಡಲಾಗಿದೆ.