ಬೆಳಗಾವಿ : ರಾಜ್ಯದಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ನಾಯಕರ ನಡುವೆ ವಾಕ್ಸಮರ ನಡೆಯುತ್ತಿದೆ. ಒಂದೆಡೆ ಬಿಜೆಪಿ ನಾಯಕರು, ಕಾಂಗ್ರೆಸ್‌ಗೆ. ಕಾಂಗ್ರೆಸ್ ನಾಯಕರು ಬಿಜೆಪಿಗೆ ಸೇರ್ಪಡೆಯಾಗುತ್ತಾರೆ ಅನ್ನೋ ಮಾತು ಕೇಳಿಬರುತ್ತಿದೆ. ಈ ನಡುವಲ್ಲೇ ಬಿಜೆಪಿ ಪಕ್ಷದಿಂದ ೪೦ ಶಾಸಕರು ಕಾಂಗ್ರೆಸ್‌ಗೆ ಸೇರ್ಪಡೆಯಾಗುತ್ತಾರೆ ಎಂದು ಹೇಳುವ ಮೂಲಕ ಕಾಂಗ್ರೆಸ್ ಮಾಜಿ ಶಾಸಕ ರಾಜು ಕಾಗೆ ಹೊಸ ಬಾಂಬ್ ಸಿಡಿಸಿದ್ದಾರೆ.
ಬೆಳಗಾವಿ ಜಿಲ್ಲೆ ಅತಣಿಯ ಮದಭಾವಿ ಗ್ರಾಮದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬೆಲೆ ಏರಿಕೆಯಿಂದಾಗಿ ನರೇಂದ್ರ ಮೋದಿ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ರಾಜ್ಯದ ಜನತೆ ಹಿಡಿಶಾಪ ಹಾಕುತ್ತಿದ್ದಾರೆ. ದಿನೇ ದಿನೇ ನರೇಂದ್ರ ಮೋದಿ ಅವರ ವರ್ಚಸ್ಸು ಕಡಿಮೆಯಾಗುತ್ತಿದೆ. ಜನರಿಗೆ ಬಿಜೆಪಿ ಪಕ್ಷದ ಮೇಲಿನ ನಂಬಿಕೆ ಕಡಿಮೆಯಾಗುತ್ತಿದೆ ಎಂದಿದ್ದಾರೆ.
ಬೆಳಗಾವಿ ಜಿಲ್ಲೆಯ ಮೂವರು ಪ್ರಭಾವಿ ಶಾಸಕರಿಗೆ ಸಚಿವ ಸ್ಥಾನ ಕೈತಪ್ಪಿದೆ. ಇದರಿಂದಾಗಿಯೇ ಬಿಜೆಪಿಯಲ್ಲಿ ಆಂತರಿಕ ಕಚ್ಚಾಟ ಹೆಚ್ಚಾಗಿದ್ದು, ಜಿಲ್ಲೆಯ ಮೂವರು ಶಾಸಕರ ಜೊತೆಗೆ ಬಿಜೆಪಿಯಿಂದ ಇನ್ನೂ ನಲವತ್ತು ಶಾಸಕರು ಕಾಂಗ್ರೆಸ್ ಪಕ್ಷವನ್ನು ಸೇರ್ಪಡೆಯಾಗಲಿದ್ದಾರೆ ಎಂದು ಅವರು ಹೇಳಿದ್ದಾರೆ.
ರಾಜ್ಯದಲ್ಲಿ ಕಳೆದ ಕೆಲವು ದಿನಗಳಿಂದಲೂ ಸಾಕಷ್ಟು ಬದಲಾವಣೆಗಳು ನಡೆಯುತ್ತಿವೆ. ಕೆಲ ದಿನಗಳ ಹಿಂದೆಯಷ್ಟೇ ಸಚಿವ ಕುರುಗೇಶ್ ನಿರಾಣಿ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಒಂದೇ ಕಾರಿನಲ್ಲಿ ಸಂಚಿಸಿದ್ದರು. ಅಲ್ಲದೇ ಪ್ರತ್ಯೇಕವಾಗಿ ಸಭೆ ನಡೆಸಿದ್ದರು. ಇದೀಗ ಕಾಂಗ್ರೆಸ್ ನಾಯಕ ಸಿಡಿಸಿರುವ ಹೊಸ ಬಾಂಬ್ ರಾಜ್ಯ ರಾಜಕೀಯದಲ್ಲಿ ಸಂಚಲನಕ್ಕೆ ಕಾರಣವಾಗಿದೆ.
ಇದನ್ನೂ ಓದಿ : ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ಕೊಟ್ಟ ರಾಜ್ಯ ಸರಕಾರ
ಇದನ್ನೂ ಓದಿ : ಸುಳ್ಳು ಹೇಳುವುದಕ್ಕೂ ಇತಿಮಿತಿ ಇರಬೇಕು : ಸಿದ್ದು ವಿರುದ್ದ ಕುಮಾರಸ್ವಾಮಿ ವಾಗ್ದಾಳಿ
(karnataka politics : 40 bjp mla’s will join congress says says former mla Raju kaage )