ಬೆಂಗಳೂರು : ಸಚಿವ ಮುರುಗೇಶ್ ಆರ್ ನಿರಾಣಿ ಅವರ ಟ್ವಿಟ್ಟರ್ ಖಾತೆಯನ್ನು ಕಿಡಿಗೇಡಿಗಳು ಹ್ಯಾಕ್ ಮಾಡಿದ್ದಾರೆ. ಈ ಕುರಿತು ಸೈಬರ್ ಪೊಲೀಸರಿಗೆ ದೂರು ನೀಡಲು ನಿರಾಣಿ ಅವರು ಮುಂದಾಗಿದ್ದಾರೆ. ಅಲ್ಲದೇ ಮೋಸದ ಸಂದೇಶಗಳಿಗೆ ಬಲಿಯಾಗಬೇಡಿ ಎಂದಿದ್ದಾರೆ.
ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಅವರ, @NiraniMurugesh ಟ್ವಿಟ್ಟರ್ ಖಾತೆಯನ್ನು ದುಷ್ಕರ್ಮಿಗಳು ಹ್ಯಾಕ್ ಮಾಡಿದ್ದಾರೆ. ಟ್ವೀಟರ್‌ಗೆ ಈಗಾಗಲೇ ದೂರು ನೀಡಿದ್ದೇನೆ. ನನ್ನ ಖಾತೆಯಲ್ಲಿರುವ ಯಾವುದೇ ಅವಹೇಳನಕಾರಿ ಮತ್ತು ಅಸಂಸದೀಯ ಸಂದೇಶಗಳನ್ನು ನಿರ್ಲಕ್ಷಿಸಿ ಎಂದು ನಾನು ಎಲ್ಲರಿಗೂ ಮನವಿ ಮಾಡುತ್ತೇನೆ. ಯಾರೊಬ್ಬರೂ ಯಾವುದೇ ರೀತಿಯ ಪ್ರತಿಕ್ರಿಯೆಗಳನ್ನು ನೀಡಬಾರದೆಂದು ಅವರು ಮನವಿ ಮಾಡಿಕೊಂಡಿದ್ದಾರೆ.
ಈ ಹಿಂದೆಯೂ ಮುರುಗೇಶ್ ನಿರಾಣಿ ಅವರು ಟ್ವೀಟರ್ ಖಾತೆಯನ್ನು ಹ್ಯಾಕ್ ಮಾಡಿದ್ದರು. ಇದೀಗ ಮತ್ತೆ ಹ್ಯಾಕ್ ಮಾಡಲಾಗಿದೆ. ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣ ಗಳನ್ನು ಹ್ಯಾಕ್ ಮಾಡುವ ಕಾರ್ಯವನ್ನು ದುಷ್ಕರ್ಮಿಗಳು ನಡೆಸುತ್ತಿದ್ದಾರೆ.
ಇದನ್ನೂ ಓದಿ : ಸಲಾರ್ ಎಂಟ್ರಿಕೊಟ್ಟ ಕಿರುತೆರೆ ಬ್ಯೂಟಿ: ಸ್ಪೆಶಲ್ ಪಾತ್ರದಲ್ಲಿ ಬಿಗ್ ಬಾಸ್ ಒಟಿಟಿ ವಿನ್ನರ್
ಇದನ್ನೂ ಓದಿ : ಬಿಜೆಪಿ ಶಾಸಕಾಂಗ ಸಭೆ : ಶಾಸಕರಿಗೆ ಖಡಕ್ ವಾರ್ನಿಂಗ್ ಕೊಟ್ಟ ಸಿಎಂ ಬೊಮ್ಮಾಯಿ
(Karnataka BJP Minister Mugugesh Nirani Twitter Account Hack )