ಹಾಸನ : ಕಲಬುರಗಿ ಮಹಾನಗರ ಪಾಲಿಕೆ ಅಧಿಕಾರದ ಗದ್ದುಗೆ ಹಿಡಿಯುವಲ್ಲಿ ಜೆಡಿಎಸ್ ನಿರ್ಣಾಯಕ ಪಾತ್ರ ವಹಿಸಲಿದೆ. ಹೀಗಾಗಿ ಜೆಡಿಎಸ್ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಳ್ಳುವ ಪ್ರಸ್ತಾಪಕ್ಕೆ ಮಾಜಿ ಸಚಿವ ರೇವಣ್ಣ ವಿರೋಧ ವ್ಯಕ್ತಪಡಿಸಿದ್ದಾರೆ.
ಜೆಡಿಎಸ್ ಮುಳುಗುವ ಹಡಗು ಎಂದ ಮೇಲೆ ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡ್ರೇ ರಾಜ್ಯದ ಸಿಎಂ ಬಸವರಾಜ್ ಬೊಮ್ಮಾಯಿ ಅಧಿಕಾರಕ್ಕೆ ಕುತ್ತು ಬಂದರೂ ಬರಬಹುದು ಎಂದಿದ್ದಾರೆ.
ಕಲಬುರಗಿ ಮಹಾನಗರ ಪಾಲಿಕೆ ಅಧಿಕಾರ ಗದ್ದುಗೆ ಹಿಡಿಯುವ ವಿಚಾರದಲ್ಲಿ ಬಿಜೆಪಿ ಯಾರಿಗೆ ಬೆಂಬಲ ನೀಡಲಿದೆ ಎಂಬ ಪ್ರಶ್ನೆಗೆ ಉತ್ತರಿಸಿದ ರೇವಣ್ಣ, ಜೆಡಿಎಸ್ ಯಾರಿಗೆ ಬೆಂಬಲ ನೀಡುತ್ತೆ ಎಂಬುದನ್ನು ಜೆಡಿಎಸ್ ವರಿಷ್ಠರಾದ ದೇವೇಗೌಡರು ಹಾಗೂ ಎಚ್.ಡಿ.ಕುಮಾರಸ್ವಾಮಿಯವರು ಪಕ್ಷದ ಕಾರ್ಯಕರ್ತರೊಂದಿಗೆ ಚರ್ಚಿಸಿ ನಿರ್ಧರಿಸಲಿದ್ದಾರೆ ಎಂದರು.
ಇತ್ತೀಚಿಗಷ್ಟೇ ರಾಜ್ಯಕ್ಕೆ ಭೇಟಿ ನೀಡಿದ್ದ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ ಸಿಂಗ್, ಜೆಡಿಎಸ್ ಮುಳುಗುವ ಹಡಗು ಎಂದಿದ್ದರು. ಈ ಬಗ್ಗೆ ಮಾತನಾಡಿದ ರೇವಣ್ಣ, ಅರುಣ ಸಿಂಗ್ ಹೇಳಿದ್ದನ್ನು ಸಿಎಂ ಪಾಲಿಸಲಿ.ಹಡಗು ಮುಳುಗಿದರೇ ನಮ್ಮ ಬಳಿ ಪಕ್ಷ ಉಳಿಸುವ ಸಬ್ ಮೆರಿನ್ ಇದೆ ಎಂದಿದ್ದಾರೆ.
ಒಟ್ಟಿನಲ್ಲಿ ಜೆಡಿಎಸ್ ಹಾಗೂ ಬಿಜೆಪಿ ಮೈತ್ರಿಗೆ ಜೆಡಿಎಸ್ ನಾಯಕರಲ್ಲೇ ವಿರೋಧ ವ್ಯಕ್ತವಾಗಿದ್ದು, ಬಿಜೆಪಿ ಜೊತೆ ಕೈಜೋಡಿಸಬಾರದು ಅಂತ ರೇವಣ್ಣ ಬಲವಾಗಿ ಒತ್ತಾಯಿಸಿದ್ದಾರೆ.
ಇದನ್ನೂ ಓದಿ : ಕರ್ನಾಟಕದಲ್ಲಿ ಆನ್‌ಲೈನ್ ಗ್ಯಾಂಬ್ಲಿಂಗ್ ಗೇಮ್ ನಿಷೇಧ
ಇದನ್ನೂ ಓದಿ : ಗಡಿ ಜಿಲ್ಲೆಗಳ ಜಿಲ್ಲಾಡಳಿತಕ್ಕೆ ಖಡಕ್ ಸೂಚನೆ ಕೊಟ್ಟ ಸಿಎಂ ಬೊಮ್ಮಾಯಿ
(Jds Leader HD Revanna Reaction About Kalburgi municipal corporation Election )