Kota Srinivas Poojari : ವಿಧಾನ ಪರಿಷತ್‌ ಸಭಾನಾಯಕರಾಗಿ ಕೋಟ ಶ್ರೀನಿವಾಸ ಪೂಜಾರಿ ನೇಮಕ

ಬೆಂಗಳೂರು : ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರನ್ನು ವಿಧಾನ ಪರಿಷತ್‌ ಸಭಾನಾಯಕರನ್ನಾಗಿ ಮುಖ್ಯಮಂತ್ರಿ ಬಸವರಾಜ್‌ ಬೊಮ್ಮಾಯಿ ಅವರು ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.

ಕೋಟ ಶ್ರೀನಿವಾಸ ಪೂಜಾರಿ ಅವರು ಈ ಹಿಂದೆ ವಿಧಾನಪರಿಷತ್‌ ವಿರೋಧ ಪಕ್ಷದ ನಾಯಕರಾಗಿ ಕಾರ್ಯನಿರ್ವಹಿಸಿದ್ದಾರೆ. ಬಂದರು, ಮೀನುಗಾರಿ ಹಾಗೂ ಮುಜರಾಯಿ ಖಾತೆ ಸಚಿವರಾಗಿದ್ದ ಶ್ರೀನಿವಾಸ ಪೂಜಾರಿ ಸದ್ಯ ಸಮಾಜ ಕಲ್ಯಾಣ ಸಚಿವರಾಗಿ ಸೇವೆಯನ್ನು ಸಲ್ಲಿಸುತ್ತಿದ್ದಾರೆ.

ವಿಧಾನ ಪರಿಷತ್‌ನಲ್ಲಿ ಹಿರಿತನ ಹಾಗೂ ಅನುಭವದ ಆಧಾರದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳು ವಿಧಾನ ಪರಿಷತ್‌ ಪ್ರತಿಪಕ್ಷ ನಾಯಕರನ್ನಾಗಿ ಕೋಟ ಶ್ರೀನಿವಾಸ ಪೂಜಾರಿ ಅವರನ್ನು ನಾಮನಿರ್ದೇಶನ ಮಾಡಿದ್ದಾರೆ. ಈ ಕುರಿತು ಸಭಾಪತಿ ಬಸವರಾಜ್‌ ಹೊರಟ್ಟಿ ಅವರು ಅಧಿಕೃತ ಮಾಹಿತಿ ನೀಡಿದ್ದಾರೆ.

( Kota Srinivas Poojary Nominated As Karnataka Legislative Council Leader )

Comments are closed.