Karnataka Oath Ceremony : ಕರ್ನಾಟಕ : ಸಿದ್ದರಾಮಯ್ಯ ಸಂಪುಟ ಸೇರಿದ 24 ಸಚಿವರು

ಬೆಂಗಳೂರು : ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರಕಾರಕ್ಕೆ (Karnataka Oath Ceremony) ಇದೀಗ ಹೊಸದಾಗಿ 24 ಸಚಿವರು ಸೇರ್ಪಡೆಗೊಂಡಿದ್ದಾರೆ. ರಾಜಭವನದಲ್ಲಿ ನಡೆದ ಸಮಾರಂಭದಲ್ಲಿ ನೂತನ ಸಚಿವರಿಗೆ ರಾಜ್ಯಪಾಲ ಥಾವರ್‌ಚಂದ್‌ ಗೆಹಲೋತ್‌ ಅವರು ಪ್ರಮಾಣ ವಚನ ಭೋದಿಸಿದರು. ಜಾತಿವಾರು ಲೆಕ್ಕಾಚಾರದಲ್ಲಿ ಕಾಂಗ್ರೆಸ್‌ ನೂತನ ಸಚಿವರನ್ನು ಸಂಪುಕ್ಕೆ ಸೇರ್ಪಡೆಗೊಳಿಸಿದೆ. ಕಾಂಗ್ರೆಸ್‌ ಹಿರಿಯ ಮುಖಂಡ ಎಚ್‌ಕೆ ಪಾಟೀಲ್, ಕೃಷ್ಣ ಬೈರೇಗೌಡ, ಎನ್ ಚೆಲುವರಾಯಸ್ವಾಮಿ, ಕೆ ವೆಂಕಟೇಶ್, ಡಾ ಎಚ್ ಸಿ ಮಹದೇವಪ್ಪ, ಕಾಂಗ್ರೆಸ್ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ, ಕಾಂಗ್ರೆಸ್ ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಸಂಪುಟ ಸೇರ್ಪಡೆಯಾಗಿದ್ದಾರೆ.

ಉಳಿದಂತೆ ಕ್ಯಾತಸಂದ್ರ ಎನ್ ರಾಜಣ್ಣ, ಶರಣಬಸಪ್ಪ ದರ್ಶನಾಪುರ, ಶಿವಾನಂದ್ ಪಾಟೀಲ್, ರಾಮಪ್ಪ ಬಾಳಪ್ಪ ತಿಮ್ಮಾಪುರ, ಎಸ್ ಎಸ್ ಮಲ್ಲಿಕಾರ್ಜುನ್, ಶಿವರಾಜ್ ಸಂಗಪ್ಪ ತಂಗಡಗಿ, ಡಾ.ಶರಣಪ್ರಕಾಶ ರುದ್ರಪ್ಪ ಪಾಟೀಲ್, ಮಂಕಾಳ್ ವೈದ್ಯ, ಲಕ್ಷ್ಮೀ ಹೆಬ್ಬಾಳ್ಕರ್, ರಹೀಮ್ ಖಾನ್, ಸಂತೋ ಖಾನ್, ಸಂತೋ ಖಾಂದ್, ಎನ್ ಎಸ್ ಬೋಸರಾಜು, ಸುರೇಶ ಬಿಎಸ್, ಮಾಜಿ ಸಿಎಂ ಎಸ್ ಬಂಗಾರಪ್ಪ ಅವರ ಪುತ್ರ ಮಧು ಬಂಗಾರಪ್ಪ, ಡಾ ಎಂ ಸಿ ಸುಧಾಕರ್ ಮತ್ತು ಬಿ ನಾಗೇಂದ್ರ ಅವರನ್ನು ಒಳಗೊಂಡ ಕರ್ನಾಟಕದಲ್ಲಿ ಕಾಂಗ್ರೆಸ್ ಸಚಿವ ಸಂಪುಟಕ್ಕೆ ಸೇರ್ಪಡೆಗೊಂಡಿದ್ದಾರೆ.

ರಾಜ್ಯದಲ್ಲಿ ಕಾಂಗ್ರೆಸ್‌ ಸರಕಾರ ಅಧಿಕಾರಕ್ಕೆ ಬರುತ್ತಿದ್ದಂತೆಯೇ ಸಿಎಂ ಸಿದ್ದರಾಮಯ್ಯ, ಡಿಸಿಎಂ ಶಿವಕುಮಾರ್‌ ಸೇರಿದಂತೆ ಒಟ್ಟು 10 ಮಂದಿ ಸಚಿವರು ಪ್ರಮಾಣ ವಚನ ಸ್ವೀಕರಿಸಿದ್ದರು. ಇದೀಗ ಒಂದು ವಾರದ ಒಳಗೆ ಸಂಪುಟವನ್ನು ಭರ್ತಿ ಮಾಡಿಕೊಳ್ಳಲಾಗಿದೆ. 2024 ರ ಲೋಕಸಭೆ ಚುನಾವಣೆಗೆ ಮುಂಚಿತವಾಗಿ ಒಗ್ಗಟ್ಟು ಪ್ರದರ್ಶಿಸಲು ಕಾಂಗ್ರೆಸ್‌ ಗೆ ವೇದಿಕೆಯಾಗಿದೆ.ಸಿದ್ದರಾಮಯ್ಯ, ಶಿವಕುಮಾರ್ ಮತ್ತು ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಕೆಸಿ ವೇಣುಗೋಪಾಲ್ ಮತ್ತು ರಣದೀಪ್ ಸುರ್ಜೆವಾಲಾ ನಡುವೆ ಎರಡು ದಿನಗಳ ತೀವ್ರ ಚರ್ಚೆಯ ನಂತರ ಕಾಂಗ್ರೆಸ್ ಪಟ್ಟಿಯನ್ನು ಅಂತಿಮಗೊಳಿಸಿದೆ. ಕರ್ನಾಟಕದ ಇಬ್ಬರು ನಾಯಕರು ಕಳೆದ ಮೂರು ದಿನಗಳಿಂದ ರಾಷ್ಟ್ರ ರಾಜಧಾನಿಯಲ್ಲಿ ಮೊಕ್ಕಾಂ ಹೂಡಿದ್ದು, ಸಚಿವರ ಪಟ್ಟಿಯನ್ನು ಪ್ರಕಟಿಸುವ ಮುನ್ನ ಹಲವು ಸುತ್ತಿನ ಚರ್ಚೆ ನಡೆಸಿದ್ದಾರೆ. ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಪಕ್ಷದ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಹೆಸರುಗಳ ಪಟ್ಟಿಗೆ ಅಂತಿಮ ಒಪ್ಪಿಗೆ ನೀಡಿದರು.

ಇದನ್ನೂ ಓದಿ : Dk Shivakumar vs Siddaramaiah : ಸಿಎಂ ಮಾತ್ರವಲ್ಲ ಸಚಿವ ಸ್ಥಾನಕ್ಕೂ ಪಟ್ಟು: ಸಂಪುಟದಲ್ಲಿ ಸಿದ್ಧು ಆಪ್ತ ರಿಗೆ ಮಣೆ, ಡಿಕೆಶಿಗೆ ಹಿನ್ನಡೆ

ಸಂಭಾವ್ಯ ಸಚಿವರ ಹೆಸರುಗಳ ಬಗ್ಗೆ ಸಿದ್ದರಾಮಯ್ಯ ಮತ್ತು ಶಿವಕುಮಾರ್ ನಡುವೆ ಭಿನ್ನಾಭಿಪ್ರಾಯ ಸ್ಫೋಟಗೊಂಡಿದ್ದರೂ ಕೂಡ ಅಂತಿಮವಾಗಿ ಸಂಪುಟ ಭರ್ತಿ ಮಾಡಲಾಗಿದೆ. ಸಚಿವ ಸಂಪುಟದಲ್ಲಿ ಸಿದ್ದರಾಮಯ್ಯ ಬಣದ ಶಾಸಕರಿಗೆ ಹೆಚ್ಚಿನ ಪ್ರಾಶಸ್ತ್ಯವನ್ನು ನೀಡಲಾಗಿದೆ. ಸಂಪುಟ ರಚನೆಗೆ ಸಂಬಂಧಿಸಿದಂತೆ ಡಿಕೆ ಶಿವಕುಮಾರ್‌ ಹಾಗೂ ಸಿದ್ದರಾಮಯ್ಯ ಅವರು ದೆಹಲಿಗೆ ತೆರಳಿ ಸೋನಿಯಾ ಗಾಂಧಿ ಅವರನ್ನು ಭೇಟಿಯಾಗಿ ಬಂದಿದ್ದರು. ಇನ್ನು ಹಲವರು ಶಾಸಕರಿಗೆ ಸಂಪುಟದಲ್ಲಿ ಸ್ಥಾನ ಸಿಗದ ಹಿನ್ನೆಲೆಯಲ್ಲಿ ನಿರಾಸೆಯಾಗಿದ್ದು, ಕಾಂಗ್ರೆಸ್‌ ಹಿರಿಯ ಮುಖಂಡ ವಿಧಾನ ಪರಿಷತ್‌ ಸದಸ್ಯ ಬಿ.ಕೆ.ಹರಿಪ್ರಸಾದ್‌ ಅವರು ವಿಧಾನ ಪರಿಷತ್‌ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಘೋಷಣೆ ಮಾಡಿದ್ದಾರೆ.

Karnataka Oath Ceremony: Karnataka: 24 ministers joined the Siddaramaiah cabinet

Comments are closed.