ಮಹತ್ವದ ಕ್ಯಾಬಿನೇಟ್ ಸಭೆಯಲ್ಲಿ ಸಂಪುಟ ಸರ್ಜರಿ ಚರ್ಚೆ : ಮಂಗಳೂರಿನ ಅಲ್ಪಸಂಖ್ಯಾತರಿಗೆ ಸಿಹಿಸುದ್ದಿ
ಬೆಂಗಳೂರು: ರಾಜ್ಯದಲ್ಲಿ ಈ ಬಾರಿ ಮಹತ್ವದ್ದು ಎನಿಸಿದ್ದ ಸಚಿವ ಸಂಪುಟ ಸಭೆ ನಿನ್ನೆ ಮುಕ್ತಾಯಗೊಂಡಿದೆ. ಸಿಎಂ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ವಿಧಾನಸೌಧದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಹಲವು ಮಹತ್ವದ ವಿಚಾರಗಳನ್ನು ಚರ್ಚಿಸಲಾಗಿದೆ.
ಸಚಿವ ಸಂಪುಟ ಸಭೆಯಲ್ಲಿ ಮಂಗಳೂರಿನ ಬಜ್ಪೆ ಗ್ರಾಮದಲ್ಲಿ 1.56 ಎಕರೆ ವಿಸ್ತೀರ್ಣದ ಜಮೀನಿನಲ್ಲಿ 20 ಕೋಟಿ ರೂಪಾಯಿ ಮೌಲ್ಯದಲ್ಲಿ ಹಜ್ ಭವನ ನಿರ್ಮಾಣ, 94.50 ಕೋಟಿ ರೂಪಾಯಿ ಮೊತ್ತದಲ್ಲಿ ಮೈಸೂರಿನಲ್ಲಿ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆ ಅಧೀನದಲ್ಲಿ ಪೆರಿಫೆರಲ್ ಕ್ಯಾನ್ಸರ್ ಕೇಂದ್ರ, ಬೆಂಗಳೂರಿನಲ್ಲಿ ತ್ಯಾಜ್ಯ ನೀರಿನ ಯಂತ್ರಾಗಾರ, ತ್ಯಾಜ್ಯ ನೀರು ಶುದ್ಧೀಕರಣ ಘಟಕ ನಿರ್ಮಾಣ ಸೇರಿದಂತೆ ಹಲವು ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ ಎನ್ನಲಾಗಿದೆ.
ಇದನ್ನೂ ಓದಿ: ಶಿಷ್ಯನನ್ನೇ ಸಿಎಂ ಮಾಡಿ….ಡಿಕೆಶಿಯನ್ನು ಕೆಪಿಸಿಸಿಯಲ್ಲೇ ಬಿಡಿ: ಹೈಕಮಾಂಡ್ ಮುಂದೇ ಸಿದ್ದು ಬೇಡಿಕೆ!!
ಇನ್ನು ಇದೆಲ್ಲದರ ಜೊತೆಯಲ್ಲಿ ಸಂಪುಟ ಪುನರ್ರಚನೆ ಕುರಿತಂತೆಯೂ ಕೆಲ ಮಹತ್ವದ ಚರ್ಚೆಗಳನ್ನು ಸಂಪುಟ ಸಭೆಯಲ್ಲಿ ನಡೆಸಲಾಗಿದೆ ಎನ್ನಲಾಗಿದೆ. ಡಿಸಿಎಂ ಡಿ.ಕೆ ಶಿವಕುಮಾರ್ ಗೈರಿನ ನಡುವೆಯೂ ರಾಜ್ಯದಲ್ಲಿ ಸಂಪುಟ ವಿಸ್ತರಣೆ ಅಥವಾ ಪುನರ್ ರಚನೆ ಕುರಿತಂತೆ ಮಂತ್ರಿಗಳಿಗೆ ಸಿಎಂ ಸಿದ್ದರಾಮಯ್ಯ ಸುಳಿವು ಬಿಟ್ಟುಕೊಟ್ಟಿದ್ದಾರೆ ಎನ್ನಲಾಗಿದೆ.
ಇದನ್ನೂ ಓದಿ: ನವೆಂಬರ್ ಕ್ರಾಂತಿ : ಯೂ ಟರ್ನ್ ಹೊಡೆದ್ರಾ ಡಿಸಿಎಂ ಡಿಕೆ ಶಿವಕುಮಾರ್ ?



