ಕರ್ನಾಟಕ ಬಿಟ್ಟು ದೆಹಲಿಗೆ ಬರಲಾರೆ : ಸೋನಿಯಾ ಆಹ್ವಾನ ತಿರಸ್ಕರಿಸಿದ ಸಿದ್ದರಾಮಯ್ಯ

ನವದೆಹಲಿ : ರಾಜ್ಯದಲ್ಲಿ ಕಾಂಗ್ರೆಸ ಪಕ್ಷವನ್ನು ಅಧಿಕಾರದ ಗದ್ದುಗೆಗೆ ಏರಿಸಿದ್ದ ಸಿದ್ದರಾಮಯ್ಯ ರಾಷ್ಟ್ರ ರಾಜಕಾರಣಕ್ಕೆ ತೆರಳುತ್ತಾರೆ ಅನ್ನೋ ಮಾತು ಕೇಳಿಬಂದಿತ್ತು. ಆದ್ರೀಗ ಕಾಂಗ್ರೆಸ್‌ ಅಧಿನಾಯಕಿ ಸೋನಿಯಾ ಗಾಂಧಿ ನೀಡಿದ್ದ ಆಹ್ವಾನವನ್ನು ಸಿದ್ದರಾಮಯ್ಯ ನಯವಾಗಿಯೇ ತಿರಸ್ಕರಿಸಿದ್ದಾರೆ. ತಾನು ಕರ್ನಾಟಕ ಬಿಟ್ಟು ದೆಹಲಿಗೆ ಬರಲಾರೆ ಎಂದಿದ್ದಾರಂತೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ.

ರಾಜ್ಯ ಕಾಂಗ್ರೆಸ್‌ನಲ್ಲಿ ಮನೆಯೊಂದು ಮೂರು ಬಾಗಿಲು ಅನ್ನುವಂತಾಗಿದೆ. ಮುಂದಿನ ಬಾರಿ ಕಾಂಗ್ರೆಸ್‌ ಅಧಿಕಾರಕ್ಕೆ ಬಂದ್ರೆ ಸಿಎಂ ಆಗಬೇಕು ಅಂತಾ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಮಾಜಿ ಅಧ್ಯಕ್ಷ ಜಿ. ಪರಮೇಶ್ವರ್‌ ತುದಿಗಾಲಲ್ಲಿ ನಿಂತಿದ್ದಾರೆ. ಸಿದ್ದರಾಮಯ್ಯ ಕುರುಬ ಸಮುದಾಯ ದ ನಾಯಕರಾಗಿದ್ರ, ಡಿಕೆಶಿ ಒಕ್ಕಲಿಕ ನಾಯಕರಾಗಿ ಗುರುತಿಸಿಕೊಂಡಿದ್ದಾರೆ. ಇನ್ನೊಂದೆಡೆಯಲ್ಲಿ ಜಿ.ಪರಮೇಶ್ವರ್‌ ದಲಿತ ಸಮುದಾಯಕ್ಕೆ ಪ್ರಾತಿನಿದ್ಯ ನೀಡುವಂತೆ ಒತ್ತಾಯಿಸುತ್ತಿದ್ದಾರೆ.

ರಾಜ್ಯದಲ್ಲಿ ಚುನಾವಣೆಗೆ ಇನ್ನು ಒಂದೂವರೆ ವರ್ಷ ಬಾಕಿ ಉಳಿದಿದೆ. ಈ ಹೊತ್ತಲ್ಲೇ ರಾಜ್ಯದಲ್ಲಿ ಸಿಎಂ ಅಭ್ಯರ್ಥಿಯನ್ನು ಘೋಷಣೆ ಮಾಡೋದಕ್ಕೂ ಎಐಸಿಸಿ ಸಿದ್ದವಿಲ್ಲ. ಈಗಾಗಲೇ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್‌ ಬಣದ ನಡುವೆ ತಿಕ್ಕಾಟ ಶುರುವಾಗಿದೆ. ಇದೇ ಕಾರಣಕ್ಕೆ ಸಿದ್ದರಾಮಯ್ಯ ಅವರನ್ನು ರಾಷ್ಟ್ರ ರಾಜಕಾರಣಕ್ಕೆ ಫಿಸ್‌ ಮಾಡೋದು ಸೋನಿಯಾ ಗಾಂಧಿ ಲೆಕ್ಕಾಚಾರ.

ಇದೇ ಕಾರಣಕ್ಕಾಗಿಯೇ ಸಿದ್ದರಾಮಯ್ಯ ಅವರನ್ನು ದೆಹಲಿಗೆ ಕರೆಯಿಸಿಕೊಂಡಿದ್ದ ಸೋನಿಯಾ ಗಾಂಧಿ ಅವರು ಸಿದ್ದರಾಮಯ್ಯ ಬಳಿಯಲ್ಲಿ ರಾಷ್ಟ್ರ ರಾಜಕಾರಣಕ್ಕೆ ಬರುವಂತೆ ತಿಳಿಸಿದ್ದಾರೆ. ಎಐಸಿಸಿಯಲ್ಲಿ ಪ್ರಮುಖ ಹುದ್ದೆಯನ್ನು ನೀಡುವ ಭರವಸೆಯನ್ನು ನೀಡಿದ್ದಾರೆ. ಆದರೆ ಸಿದ್ದರಾಮಯ್ಯ ತನಗೆ ದೆಹಲಿ ರಾಜಕಾರಣ ಇಷ್ಟವಿಲ್ಲ. ಏನಿದ್ರೂ ಕರ್ನಾಟಕದಲ್ಲಿ ಇದ್ದುಕೊಂಡೇ ರಾಜಕಾರಣ ಮಾಡುತ್ತಿದ್ದೇನೆ. ಕರ್ನಾಟಕದಲ್ಲಿಯೇ ಮತ್ತೆ ಕಾಂಗ್ರೆಸ್‌ ಪಕ್ಷವನ್ನು ಅಧಿಕಾರಕ್ಕೆ ತರುತ್ತೇನೆ ಎಂದಿದ್ದಾರೆ.

ಇದನ್ನೂ ಓದಿ : ಸುಳ್ಯ ಕೋರ್ಟ್‌ಗೆ ಡಿ.ಕೆ.ಶಿವಕುಮಾರ್‌ ಹಾಜರ್‌ : ಕಲಾಪದ ವೇಳೆ ಹೊಯ್ತು ಕರೆಂಟ್‌ !

ಸೋನಿಯಾ ಗಾಂಧಿ ಹಾಗೂ ಸಿದ್ದರಾಮಯ್ಯ ಜೊತೆಯಲ್ಲಿ ಸುಮಾರು ಮೂವತ್ತು ನಿಮಿಷಗಳ ಕಾಲ ಮಾತುಕತೆ ನಡೆಸಿದ್ದಾರೆ. ದೆಹಲಿ ರಾಜಕಾರಣಕ್ಕೆ ಬರಲು ತನಗೆ ವಯಸ್ಸು ಅಡ್ಡಿಯಾಗಲಿದೆ, ಜೊತೆಗೆ ಈ ವಯಸ್ಸಲ್ಲಿ ದೇಶ ಸುತ್ತೋದಕ್ಕೆ ನನ್ನಿಂದ ಸಾಧ್ಯವಿಲ್ಲ. ಹೀಗಾಗಿ ಯುವಕರಿಗೆ ಆಧ್ಯತೆಯನ್ನು ನೀಡಿ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಪಕ್ಷಕ್ಕೆ ಬೇಕಾದ ಎಲ್ಲಾ ರೀತಿಯ ಮಾರ್ಗದರ್ಶನವನ್ನೂ ತಾನು ಮಾಡುವುದಾಗಿಯೂ ಕಾಂಗ್ರೆಸ್‌ ಅಧಿನಾಯಕಿಗೆ ಭರವಸೆಯನ್ನು ನೀಡಿದ್ದಾರೆ ಎನ್ನಲಾಗುತ್ತಿದೆ.

ಸೋನಿಯಾ ಗಾಂಧಿ ಹಾಗೂ ಸಿದ್ದರಾಮಯ್ಯ ಮಾತುಕತೆಯ ಬೆನ್ನಲ್ಲೇ ಸಿದ್ದರಾಮಯ್ಯ ರಾಷ್ಟ್ರ ರಾಜಕಾರಣಕ್ಕೆ ಫಿಕ್ಸ್‌ ಆಗ್ತಾರೆ ಅಂದುಕೊಂಡಿದ್ದವರ ಲೆಕ್ಕಾಚಾರವೆಲ್ಲಾ ಇದೀಗ ಬುಡಮೇಲಾಗಿದೆ. ಇನ್ನು ಖುದ್ದು ಸಿದ್ದರಾಮಯ್ಯನವರೇ ತಾನು ದೆಹಲಿ ರಾಜಾರಣಕ್ಕೆ ಬರಲಾರೆ. ಈ ಹಿಂದೆಯೇ ರಾಹುಲ್‌ ಗಾಂಧಿ ಅವರು ಎಐಸಿಸಿ ಕಾರ್ಯದರ್ಶಿ ಹುದ್ದೆಯನ್ನು ಅಲಂಕರಿಸುವಂತೆ ಕೇಳಿಕೊಂಡಿದ್ದರು. ಆದರೂ ತಾನು ಬರಲಾರೆ ಎಂದಿದ್ದೆ. ಆದರೆ ಸೋನಿಯಾ ಗಾಂಧಿ ಅವರು ರಾಜ್ಯ ರಾಜಕಾರಣದ ಬಗ್ಗೆ ಚರ್ಚೆ ನಡೆಸಿದ್ದಾರೆ. ಪಕ್ಷ ಸಂಘಟನೆಯ ಬಗ್ಗೆ ಮಾತುಕತೆ ನಡೆಸಿದ್ದೇವೆ. ಆದರೆ ರಾಷ್ಟ್ರ ರಾಜಕಾರಣದ ಬಗ್ಗೆ ಮಾತನಾಡಿಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆಯನ್ನು ನೀಡಿದ್ದಾರೆ.

ಇದನ್ನೂ ಓದಿ : ಬಿಜೆಪಿಯ 40 ಶಾಸಕರು ಕಾಂಗ್ರೆಸ್‌ ಸೇರ್ಪಡೆ !

(Siddaramaiah refuses Sonia’s invitation to leave Karnataka )

Comments are closed.