ರಾಜ್ಯದಲ್ಲಿ ವಾರಪೂರ್ತಿ ಕರ್ಪ್ಯೂ : ನಾಳೆ ಮಹತ್ವದ ಸಭೆ : ಸಚಿವ ಜಗದೀಶ್ ಶೆಟ್ಟರ್

ಬೆಂಗಳೂರು : ರಾಜ್ಯದಲ್ಲಿ ಮೇ 4 ರವರೆಗೆ ಕಠಿಣ ನಿಯಮ ಮುಂದುವರೆಯಲಿದೆ. ನೈಟ್ ಕರ್ಫ್ಯೂ ಮತ್ತು ವೀಕೆಂಡ್ ಕರ್ಫ್ಯೂ ಕೂಡ  ಮುಂದುವರೆಯಲಿದ್ದು,  ಸಂಪೂರ್ಣ ಕರ್ಫ್ಯೂ ಅಥವಾ ಲಾಕ್ಡೌನ್ ಜಾರಿಯ ಕುರಿತು ನಾಳೆ ನಡೆಯಲಿರುವ ಕ್ಯಾಬಿನೆಟ್ ಸಭೆಯಲ್ಲಿ ಚರ್ಚಿಸಲಾಗುವುದು ಎಂದು ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಹೇಳಿದ್ದಾರೆ.

ನಾಳೆ ಬೆಳಗ್ಗೆ 11 ಗಂಟೆಗೆ ಸಿಎಂ ಅಧ್ಯಕ್ಷತೆಯಲ್ಲಿ ಸಚಿವ ಸಂಪುಟ ಸಭೆ ನಡೆಯಲಿದ್ದು, ಸಭೆಯಲ್ಲಿ ಚರ್ಚೆ ನಡೆಸಿ ಮುಂದಿನ ತೀರ್ಮಾನ ಕೈಗೊಳ್ಳಲಾಗುತ್ತದೆ. ನಾಳೆಯಿಂದ ವಾರಪೂರ್ತಿ ಕರ್ಫ್ಯೂ ಅಥವಾ ಲಾಕ್ಡೌನ್ ಜಾರಿ ಮಾಡುವ ಕುರಿತು ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಅವರು ಹೇಳಿದ್ದಾರೆ.

ಕೊರೊನಾ ಸೋಂಕು ತೀವ್ರವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕಂಪ್ಲೀಟ್ ಕರ್ಫ್ಯೂ ಅಥವಾ ಲಾಕ್ಡೌನ್ ಜಾರಿ ಮಾಡುವ ತಜ್ಞರ ಸಮಿತಿ ಸರಕಾರಕ್ಕೆ ಸಲಹೆಯನ್ನು ನೀಡಿದೆ. ಅಲ್ಲದೇ ಸರಕಾರ ಕೂಡ ಈ ಕುರಿತು ಚಿಂತನೆ ನಡೆಸಿದೆ ಎನ್ನಲಾಗುತ್ತಿದೆ.

Comments are closed.