ಯಾದಗಿರಿ: ಕೊರೋನಾ ನಿಯಮಗಳನ್ನು ಗಾಳಿಗೆ ತೂರಿದ ಬಿಜೆಪಿ ನಾಯಕರು ಹಾಗೂ ಕಾರ್ಯಕರ್ತರು ಕೇಂದ್ರ ಸಚಿವರ ಸ್ವಾಗತಕ್ಕೆ ಮುಗಿಬಿದ್ದಿದ್ದಲ್ಲದೇ ಬಂದೂಕಿನಿಂದ ಗುಂಡು ಹಾರಿಸಿ ಅತಿರೇಕದ ವರ್ತನೆ ತೋರಿದ್ದಾರೆ.

ಯಾದಗಿರಿ ಜಿಲ್ಲೆಯ ಯರಗೋಳ ಗ್ರಾಮಕ್ಕೆ ಕೇಂದ್ರ ಸಚಿವ ಭಗವಂತ ಖೂಬಾ ಆಗಮಿಸಿದ್ದರು. ಈ ವೇಳೆ ಅವರ ಸ್ವಾಗತಕ್ಕೆ ಅಪಾರ ಪ್ರಮಾಣದ ಬಿಜೆಪಿ ಕಾರ್ಯಕರ್ತರು ಸೇರಿದ್ದರು. ಸಚಿವರ ಸ್ವಾಗತಕ್ಕೆ ನಾಡಬಂದೂಕಿನ ಜೊತೆ ಆಗಮಿಸಿದ್ದ ಕೆಲವರು ಗುಂಡು ಹಾರಿಸಿ ಸಂಭ್ರಮಿಸಿದ್ದಾರೆ.

ಸಾಮಾಜಿಕ ಅಂತರವಿಲ್ಲದೇ, ಮಾಸ್ಕ್ ಧರಿಸದೇ ಜನಜಾತ್ರೆಯೇ ನೆರೆದಿದ್ದ ಈ ಸ್ವಾಗತ ಸಭೆಯಲ್ಲಿ ಮಾಜಿ ಸಚಿವ ಬಾಬುರಾವ್ ಚಿಂಚಸನೂರು, ಶಾಸಕರಾದ ರಾಜೂಗೌಡ, ವೆಂಕಟರೆಡ್ಡಿ ಮುದ್ನಾಳ ಕೂಡ ಸ್ಥಳದಲ್ಲೇ ಇದ್ದರು ಎನ್ನಲಾಗಿದೆ.ಭಗವಂತ ಖೂಬಾಗೆ ಹೂವಿನ ಸುರಿಮಳೆ ಸುರಿಸಿ, ಬಂದೂಕಿನಿಂದ ಗುಂಡು ಹಾರಿಸಿ ಸ್ವಾಗತಿಸಿದ ಪೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಜನರ ಟೀಕೆಗೆ ಗುರಿಯಾಗಿದೆ.