ಬೆಂಗಳೂರು : ಕೊಳ್ಳೇಗಾಲದ ಬಿಎಸ್‌ಪಿ ಶಾಸಕ ಎನ್. ಮಹೇಶ್ ಅವರು ಬಿಜೆಪಿ ಸೇರ್ಪಡೆಯಾಗಿದ್ದಾರೆ. ಮಲ್ಲೇಶ್ವರದ ರಾಜ್ಯ ಬಿಜೆಪಿ ಕಾರ್ಯಾಲಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಾಸಕ ಮಹೇಶ್ ಅವರನ್ನು ಪಕ್ಷ ಧ್ವಜ ನೀಡಿ ಬರಮಾಡಿಕೊಳ್ಳಲಾಯಿತು.

ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರದಿಂದ ಬಿಎಸ್‌ಪಿ ಪಕ್ಷದ ಶಾಸಕರಾಗಿ ಆಯ್ಕೆಯಾಗಿದ್ದಎನ್. ಮಹೇಶ್ ಅವರು ಜೆಡಿಎಸ್ ಹಾಗೂ ಕಾಂಗ್ರೆಸ್ ಸಮ್ಮಿಶ್ರ ಸರಕಾರದ ಅವಧಿಯಲ್ಲಿ ಬೆಂಬಲ ಸೂಚಿಸಿದ್ದರು. ಅಲ್ಲದೇ ಶಿಕ್ಷಣ ಸಚಿವರಾಗಿ ಕಾರ್ಯನಿರ್ವಹಿಸಿದ್ದಾರೆ. ಆದರೆ ನಂತರದಲ್ಲಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಅಲ್ಲದೇ ನಂತರದ ಜಾರಿಗೆ ಬಂದ ಬಿಜೆಪಿ ಸರಕಾರಕ್ಕೆ ಬಾಹ್ಯ ಬೆಂಬಲ ಸೂಚಿಸಿದ್ದರು.
ಈ ನಡುವಲ್ಲೇ ಎನ್. ಮಹೇಶ್ ಅವರನ್ನು ಬಿಎಸ್‌ಪಿ ಪಕ್ಷ ಉಚ್ಚಾಟನೆಯನ್ನು ಮಾಡಿತ್ತು. ಇದೀಗ ಮಹೇಶ್ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು,ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಎನ್ ರವಿಕುಮಾರ್, ಸಿದ್ದರಾಜು, ಪಕ್ಷದ ರಾಜ್ಯ ಉಪಾಧ್ಯಕ್ಷರಾದ ವಿಜಯೇಂದ್ರ, ರಾಜ್ಯದ ಸಚಿವರಾದ ಗೋವಿಂದ ಕಾರಜೋಳ, ಆರ್ ಅಶೋಕ್, ಸಿ.ಸಿ. ಪಾಟೀಲ್, ಎಸ್.ಟಿ. ಸೋಮಶೇಖರ್, ಶಿವರಾಮ ಹೆಬ್ಬಾರ್, ಎಸ್‍ಸಿ ಮೋರ್ಚಾ ರಾಜ್ಯಾಧ್ಯಕ್ಷರಾದ ಛಲವಾದಿ ನಾರಾಯಣಸ್ವಾಮಿ ಸೇರಿದಂತೆ ಬಿಜೆಪಿ ಕಾರ್ಯಕರ್ತರು ಪಾಲ್ಗೊಂಡಿದ್ದರು.