ಬಿ.ಎಸ್.ಯಡಿಯೂರಪ್ಪ ಲಕ್ಷ್ಮೀ ಹೆಬ್ಬಾಳ್ಕರ್ ಭೇಟಿ : ಕುತೂಹಲ ಮೂಡಿಸಿದೆ ಕಾಂಗ್ರೆಸ್ ಶಾಸಕಿ ನಡೆ

ಬೆಂಗಳೂರು : ರಾಜಕೀಯದಲ್ಲಿ ಯಾರು ಶಾಶ್ವತ ಶತ್ರುಗಳು ಅಲ್ಲಾ ಮಿತ್ರರೂ ಅಲ್ಲಾ ಅನ್ನೋ‌ಮಾತಿದೆ. ಅಂತಹುದೇ ವಿದ್ಯಮಾನವೊಂದಕ್ಕೆ ಕರ್ನಾಟಕ ರಾಜಕೀಯ ಇಂದು ಸಾಕ್ಷಿಯಾಗಿದೆ. ಕಾಂಗ್ರೆಸ್ ನ ಪ್ರಭಾವಿ ನಾಯಕಿ ಹಾಗೂ ಬೆಳಗಾವಿ ಗ್ರಾಮಾಂತರ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಅಚ್ಚರಿಯ ಬೆಳವಣಿಗೆಯಲ್ಲಿ ಮಾಜಿ ಸಿಎಂ ಹಾಗೂ ಬಿಜೆಪಿಯ ಹಿರಿಯ ನಾಯಕ ಬಿ.ಎಸ್.ಯಡಿಯೂರಪ್ಪ (Lakshmi Hebbalkar met BS Yeddyurappa) ಅವರನ್ನು ಭೇಟಿ ಮಾಡಿದ್ದಾರೆ. ಈ ಭೇಟಿ ರಾಜಕೀಯ ವಲಯದಲ್ಲಿ ಹೊಸ ಚರ್ಚೆ ಹುಟ್ಟುಹಾಕಿದೆ.

ಬೆಳಗಾವಿ ಗ್ರಾಮಾಂತರ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್, ಮಾಜಿ ಸಿಎಂಬಿ.ಎಸ್.ಯಡಿಯೂರಪ್ಪಅವರನ್ನು ಬೆಂಗಳೂರಿನ ಕಾವೇರಿ ನಿವಾಸದಲ್ಲಿ ಬುಧವಾರ ಭೇಟಿ ಮಾಡಿದ್ದು ಮಾತುಕತೆ ನಡೆಸಿದ್ದಾರೆ. ಲಕ್ಷ್ಮೀ ಹೆಬ್ಬಾಳ್ಕರ್ ಬಿಎಸ್ವೈಯವರನ್ನು ಭೇಟಿಯಾದ ವೇಳೆ ಲಕ್ಷ್ಮೀ ಹೆಬ್ಬಾಳ್ಕರ್ ಜೊತೆ ಅವರ ಕಿರಿಯ ಸಹೋದರ ಹಾಗೂ ವಿಧಾನಪರಿಷತ್ ಸದಸ್ಯ ಚನ್ನರಾಜ್ ಹಟ್ಟಿಹೊಳಿ ಕೂಡ ಸಾಥ್ ನೀಡಿದ್ದರು. ಈ ಭೇಟಿ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್, ಬಿ.ಎಸ್.ಯಡಿಯೂರಪ್ಪನವರು ನಮ್ಮ ಸಮಾಜದ ಹಿರಿಯರು.‌ಹೀಗಾಗಿ ಅವರನ್ನು ಭೇಟಿ ಮಾಡಿ ಅಶೀರ್ವಾದ ಪಡೆದಿದ್ದೇನೆ.‌ಮಾತ್ರವಲ್ಲ ಸಮಾಜದ ಬಗ್ಗೆಯೂ ಅವರ ಜೊತೆ ಚರ್ಚೆ ನಡೆಸಿದ್ದೇನೆ ಎಂದಿದ್ದಾರೆ.

ಇದೊಂದು ಸೌಹಾರ್ದಯುತ ಭೇಟಿ ಹಾಗೂ ಚರ್ಚೆ‌ ಎಂದಿರೋ ಲಕ್ಷ್ಮೀ ಹೆಬ್ಬಾಳ್ಕರ್ ಯಾವುದೇ ರಾಜಕೀಯ ವಿಚಾರಗಳ ಬಗ್ಗೆ ಚರ್ಚೆ ನಡೆದಿಲ್ಲ ಎಂದಿದ್ದಾರೆ. ರಾಜಕಾರಣದ ಬಗ್ಗೆ ನಾವು ಯಾವುದೇ ಮಾತುಕತೆ ನಡೆಸಿಲ್ಲ. ಹಿರಿಯರಾದ ಅವರಿಂದ ಕೆಲವೊಂದು ಸಲಹೆ ಪಡೆಯಲು ಬಂದಿದ್ದೇ ಅಷ್ಟೇ ಎಂದು ಸಮಜಾಯಿಸಿ ನೀಡಿದ್ದಾರೆ. ಮಾತ್ರವಲ್ಲ ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ಕುರಿತು ಕೂಡ ಬಿ.ಎಸ್.ಯಡಿಯೂರಪ್ಪ ಜೊತೆ ಚರ್ಚೆ ನಡೆಸಿದ್ದೇನೆ. ತಾಂತ್ರಿಕ ಕಾರಣಕ್ಕೆ ಮೀಸಲಾತಿ ವಿಳಂಬವಾಗಿದೆ. ಸಿಎಂ ಬಸವರಾಜ್‌ ಬೊಮ್ಮಾಯಿ ಅವರು ಸಮರ್ಥರಿದ್ದಾರೆ. ಅವರು ಬೇರೆ ಸಮುದಾಯಗಳಿಗೆ ತೊಂದರೆಯಾಗದಂತೆ ಮೀಸಲಾತಿ ಕೊಡುವ ಭರವಸೆ ನೀಡಿದ್ದಾರೆ. ಈ ಅವಧಿಯಲ್ಲೇ ಮೀಸಲಾತಿ ಸಿಗುವ ನೀರಿಕ್ಷೆ ಇದೆ ಎಂದು ಬಿ.ಎಸ್.ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ ಎಂದು ಲಕ್ಷ್ಮೀ ಹೆಬ್ಬಾಳ್ಕರ್ ಮಾಹಿತಿ ನೀಡಿದ್ದಾರೆ.

Lakshmi Hebbalkar met BS Yeddyurappa, Congress MLA's move raised curiosity

ಆದರೆ ಲಕ್ಷ್ಮೀ ಹೆಬ್ಬಾಳ್ಕರ್ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿ ಮಾಡಿರುವ ಸಂಗತಿ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದ್ದು, ಡಿಕೆಶಿ ಅಪ್ತವಲಯದಲ್ಲಿ ಗುರುತಿಸಿಕೊಂಡಿರೋ ಲಕ್ಷ್ಮೀ ಹೆಬ್ಬಾಳ್ಕರ್ ದಿಢೀರ್ ಬೆಳವಣಿಗೆಯಲ್ಲಿ ಬಿಎಸ್ವೈ ರನ್ನು ಭೇಟಿ ಮಾಡಿರೋದರಿಂದ ಮುಂಬರುವ ಚುನಾವಣೆಯಲ್ಲಿ ಲಕ್ಷ್ಮೀ ಹೆಬ್ಬಾಳ್ಕರ್ ಬಿಜೆಪಿಯಿಂದ ಕಣಕ್ಕಿಳಿಬಹುದೇ ಎಂಬ ಚರ್ಚೆಯನ್ನು ಹುಟ್ಟುಹಾಕಿದೆ. ಅಲ್ಲದೇ ಬಿಜೆಪಿಯ ರಮೇಸ್ ಜಾರಕಿಹೊಳಿ ವಿರೋಧಿ ಬಣದಲ್ಲಿರೋ ಲಕ್ಷ್ಮೀ ಹೆಬ್ಬಾಳ್ಕರ್ ಬಿಎಸ್ವೈ ರನ್ನು ಭೇಟಿ ಮಾಡಿರೋದು ಕೂಡ ನೊರೆಂಟು ಲೆಕ್ಕಾಚಾರಕ್ಕೆ ಮುನ್ನುಡಿ ಬರೆದಿದೆ.

ಇದನ್ನೂ ಓದಿ : BJP MLA : ನನ್ನ ಕಾರ್ಯಕರ್ತನ ವಾಹನಕ್ಕೆ ಅಡ್ಡಿಪಡಿಸಬೇಡಿ : ವಿವಾದಕ್ಕೆ ಕಾರಣವಾದ ಬಿಜೆಪಿ ಶಾಸಕನ ಶಿಫಾರಸ್ಸು ಪತ್ರ

ಇದನ್ನೂ ಓದಿ : cm asavaraj bommai : ನಿಗಮ ಮಂಡಳಿ ಅಧ್ಯಕ್ಷರ ಬದಲಾವಣೆಗೆ ಸಿಎಂ ಅಸ್ತು : ಬಿಎಸ್​ವೈ ಆಪ್ತ ಬಣದವರಿಗೆ ಕೊಕ್​​

Lakshmi Hebbalkar met BS Yeddyurappa, Congress MLA’s move raised curiosity

Comments are closed.