Nalin Kumar Kateel : ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ನಾಯಕತ್ವ ಬದಲಾವಣೆ ಇಲ್ಲ : ಕಟೀಲ್​

ವಿಜಯಪುರ :Nalin Kumar Kateel: ಮುಂದಿನ ವರ್ಷದ ವಿಧಾನಸಭಾ ಚುನಾವಣೆಗೆ ರಾಜ್ಯದ ಬಿಜೆಪಿ ಪಡೆಯನ್ನು ಸಿದ್ಧಗೊಳಿಸಲು ಕೇಂದ್ರ ಗೃಹ ಸಚಿವ ಅಮಿತ್​ ಶಾ ರಾಜ್ಯಕ್ಕೆ ಎಂಟ್ರಿ ನೀಡಿದ್ದಾರೆ. ನಿನ್ನೆ ತಡರಾತ್ರಿ ಬೆಂಗಳೂರಿಗೆ ಬಂದಿಳಿದ ಅಮಿತ್​ ಶಾ ಒಂದು ದಿನಗಳ ಕಾಲ ರಾಜ್ಯ ಪ್ರವಾಸದಲ್ಲಿ ಇರಲಿದ್ದಾರೆ. ಇಂದು ತಾಜ್​ ವೆಸ್ಟ್​ ಎಂಡ್​ನಲ್ಲಿ ಅಮಿತ್​ ಶಾ ನೇತೃತ್ವದಲ್ಲಿ ಸಭೆ ನಡೆಯಲಿದ್ದು ಈ ಸಭೆಯಲ್ಲಿ ವಿಧಾನಸಭಾ ಚುನಾವಣಾ ತಯಾರಿಯ ನೀಲ ನಕ್ಷೆ ಸಿದ್ಧಗೊಳ್ಳಲಿದೆ ಎಂದು ಮೂಲಗಳು ತಿಳಿಸಿವೆ. ಈ ಎಲ್ಲದರ ನಡುವೆ ರಾಜ್ಯದಲ್ಲಿ ಇನ್ನು ಕೆಲವೇ ದಿನಗಳಲ್ಲಿ ಸಿಎಂ ಬದಲಾವಣೆಯಾಗಲಿದೆ ಎಂಬ ಮಾತುಗಳೂ ಸಹ ಅಲ್ಲಲ್ಲಿ ಕೇಳಿ ಬರುತ್ತಿವೆ. ಈ ವಿಚಾರವಾಗಿ ವಿಜಯಪುರದಲ್ಲಿ ಪ್ರತಿಕ್ರಿಯಿಸಿದ್ದ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್​ ಕುಮಾರ್​ ಕಟೀಲ್​ ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ನಾಯಕತ್ವ ಬದಲಾವಣೆ ಇಲ್ಲ ಎಂದು ಹೇಳಿದರು.


ವಿಜಯಪುರದಲ್ಲಿ ಈ ವಿಚಾರವಾಗಿ ಮಾತನಾಡಿದ ನಳೀನ್​ ಕುಮಾರ್​ ಕಟೀಲ್​, ರಾಜ್ಯ ಬಿಜೆಪಿಯು ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿಯೇ ಎದುರಿಸಲಿದೆ. ಕೇಂದ್ರ ಗೃಹ ಸಚಿವ ಅಮಿತ್​​ ಶಾ ರಾಜ್ಯದಲ್ಲಿ ನಾಯಕತ್ವ ಬದಲಾವಣೆಗೆಂದು ಆಗಮಿಸತ್ತಿಲ್ಲ. ನಾಯಕತ್ವ ಬದಲಾವಣೆ ಕುರಿತಂತೆ ಯಾವ ಚರ್ಚೆ ಕೂಡ ನಡೆಯೋದಿಲ್ಲ ಎಂದು ಹೇಳಿದರು.


ಇದೇ ವೇಳೆ ರಾಜ್ಯದಲ್ಲಿ ಸಂಪುಟ ವಿಸ್ತರಣೆ ಅಥವಾ ಪುನಾರಚನೆ ಆಗುತ್ತಾ ಎಂಬ ಮಾಧ್ಯಮಗಳ ಪ್ರಶ್ನೆಗಳಿಗೂ ಉತ್ತರಿಸಿದ ಅವರು, ಸಂಪುಟ ವಿಸ್ತರಣೆ ಅಥವಾ ಪುನಾರಚನೆ ಮುಖ್ಯಮಂತ್ರಿಗಳ ಪರಮಾಧಿಕಾರಕ್ಕೆ ಸೇರಿದ್ದಾಗಿದೆ. ಈ ಬಗ್ಗೆ ಅವರೆ ಸೂಕ್ತ ನಿರ್ಧಾರವನ್ನು ಕೈಗೊಳ್ಳಲಿದ್ದಾರೆ. ಇದರಲ್ಲಿ ಪಕ್ಷದ ಇತರೆ ನಾಯಕರು ಮೂಗು ತೂರಿಸುವುದಿಲ್ಲ ಎಂದು ಹೇಳಿದರು.


ಪ್ರಧಾನಿ ಮೋದಿ ಅಧಿಕಾರಾವಧಿಯಲ್ಲಿ ದೇಶದಲ್ಲಿ ನಕ್ಸಲ್​ ಚಟುವಟಿಕೆ, ಕೋಮಗಲಭೆಗಳಂತಹ ಸಮಾಜ ಘಾತುಕ ಕಾರ್ಯಗಳು ಬಹುತೇಕ ತಹಬಧಿಗೆ ಬಂದಿದೆ. ಬಿಜೆಪಿಯು ಎಂದಿಗೂ ಸಬ್​ ಕಾ ಸಾಥ್​​ , ಸಬ್​ ಕಾ ವಿಕಾಸ್​ ಎಂಬ ತತ್ವದ ಅಡಿಯಲ್ಲಿ ಕೆಲಸ ಮಾಡುತ್ತದೆ. ಸಮಾಜದಲ್ಲಿ ನಡೆಯುತ್ತಿರುವ ಧರ್ಮ ಸಂಘರ್ಷಕ್ಕೂ ಬಿಜೆಪಿಗೂ ಯಾವುದೇ ರೀತಿಯ ಸಂಬಂಧವಿಲ್ಲ ಎಂದು ಹೇಳಿದರು.

ಇದನ್ನು ಓದಿ : Amit Shah ಆಗಮನದ ಹೊತ್ತಲ್ಲೇ ಅಶ್ವತ್ಥ ನಾರಾಯಣ್ ಗೆ ಶಾಕ್ : ಭ್ರಷ್ಟಾಚಾರದ ಆರೋಪ ಕೆಂಡಾಮಂಡಲ

ಇದನ್ನೂ ಓದಿ : BJP Secret Meeting : ಸಿಎಂ ಬೊಮ್ಮಾಯಿ ಬದಲಾವಣೆ ? ಕುತೂಹಲ ಮೂಡಿಸಿದೆ ಬಿಜೆಪಿ ತ್ರಿಮೂರ್ತಿಗಳ ಸಭೆ

leadership Does Not Change In The Karnataka State: Nalin Kumar Kateel

Comments are closed.