K. Jayaprakash Hegde met Halady Srinivas Shetty : ಕುಂದಾಪುರ : ಲೋಕಸಭಾ ಚುನಾವಣೆ (Lok Sabha Election 2024) ಘೋಷಣೆಯ ಬೆನ್ನಲ್ಲೇ ಕರಾವಳಿಯಲ್ಲಿ ರಾಜಕೀಯ ಚಟುವಟಿಕೆ ಗರಿಗೆದರಿದೆ. ಈ ನಡುವಲ್ಲೇ ಬಿಜೆಪಿ ಮಾಜಿ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ(Halady Srinivas Shetty ) ಅವರನ್ನು ಉಡುಪಿ – ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆ.ಜಯಪ್ರಕಾಶ್ ಹೆಗ್ಡೆ (K Jaya Prakash Hegde) ಅವರು ಭೇಟಿ ಮಾಡಿದ್ದಾರೆ. ಕರಾವಳಿಯ ಇಬ್ಬರು ಪ್ರಭಾವಿ ನಾಯಕರ ಭೇಟಿ ಇದೀಗ ಕುತೂಹಲಕ್ಕೆ ಕಾರಣವಾಗಿದೆ.

ಕುಂದಾಪುರ ವಿಧಾನಸಭಾ ಕ್ಷೇತ್ರದಲ್ಲಿ ಸೋಲಿಲ್ಲದ ಸರದಾರರಾಗಿ ಮೆರೆದವರು ಹಾಲಾಡಿ ಶ್ರೀನಿವಾಸ ಶೆಟ್ಟಿ. ಮೂರು ಬಾರಿ ಬಿಜೆಪಿ ಹಾಗೂ ಒಂದು ಬಾರಿ ಪಕ್ಷೇತರರಾಗಿ ಸ್ಪರ್ಧಿಸಿ ಭರ್ಜರಿ ಗೆಲುವು ದಾಖಲಿಸುವ ಮೂಲಕ ಶಾಸಕರಾಗಿ ಆಯ್ಕೆಯಾಗಿದ್ದರು. ಆದರೆ ಸದ್ಯ ಸಕ್ರೀಯ ರಾಜಕಾರಣದಿಂದ ಅವರು ದೂರ ಉಳಿದಿದ್ದಾರೆ. ಇನ್ನು ಕಾಂಗ್ರೆಸ್ ಅಭ್ಯರ್ಥಿ ಆಗಿರುವ ಕೆ.ಜಯಪ್ರಕಾಧ್ ಹೆಗ್ಡೆ ಅವರು ಬಿಜೆಪಿ ತೊರೆದು ಇತ್ತೀಚಿಗಷ್ಟೆ ಕಾಂಗ್ರೆಸ್ ಸೇರ್ಪಡೆ ಆಗಿದ್ದರು.
ಬಂಟ ಸಮುದಾಯದ ಪ್ರಮುಖ ನಾಯಕರೆನಿಸಿಕೊಂಡಿರುವ ಇಬ್ಬರು ರಾಜಕೀಯ ನಾಯಕರ ಭೇಟಿ ಇದೀಗ ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದೆ. ಅಷ್ಟೇ ಅಲ್ಲದೇ ಕೆ.ಜಯಪ್ರಕಾಶ್ ಹೆಗ್ಡೆ ಹಾಗೂ ಹಾಲಾಡಿ ಶ್ರೀನಿವಾಸ ಶೆಟ್ಟಿ ಅವರು ಸಂಬಂಧಿಗಳು ಆಗಿದ್ದಾರೆ. ಮಾಜಿ ಶಾಸಕರನ್ನು ಭೇಟಿಯಾಗಿರುವುದು ಸೌಜನ್ಯದ ಭೇಟಿಯಷ್ಟೇ ಎಂದು ತಿಳಿದು ಬಂದಿದೆ.
ಇದನ್ನೂ ಓದಿ : ಹೊಸ ರೂಲ್ಸ್ ! ಗೃಹಲಕ್ಷ್ಮೀ, ಅನ್ನಭಾಗ್ಯ ಯೋಜನೆಗೆ ಮಾರ್ಚ್ 25 ಡೆಡ್‌ಲೈನ್ : ತಪ್ಪದೇ ಈ ಕೆಲಸ ಮಾಡಿ ಮುಗಿಸಿ
ಈ ಹಿಂದೆ ಕಾಂಗ್ರೆಸ್ ಪಕ್ಷದಲ್ಲಿದ್ದ ಕೆ.ಜಯಪ್ರಕಾಶ್ ಹೆಗ್ಡೆ ಅವರು ಕಾಂಗ್ರೆಸ್ ತೊರೆದು ಬಿಜೆಪ ಸೇರ್ಪಡೆ ಆಗಿದ್ದರು. ಅಲ್ಲದೇ ಬಿಜೆಪಿ ಸರಕಾರದ ಅವಧಿಯಲ್ಲಿ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಲೋಕಸಭಾ ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಕೆ.ಜಯಪ್ರಕಾಶ್ ಹೆಗ್ಡೆ ಅವರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಆಗಿದ್ದರು. ಅಲ್ಲದೇ ಕಾಂಗ್ರೆಸ್ ಪಕ್ಷ ಕೆ.ಜಯಪ್ರಕಾಶ್ ಹೆಗ್ಡೆ ಅವರನ್ನು ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಅಭ್ಯರ್ಥಿಯನ್ನಾಗಿ ಘೋಷಣೆ ಮಾಡಿದೆ.

ಈ ಹಿಂದೆ ಕೆ.ಜಯಪ್ರಕಾಶ್ ಹೆಗ್ಡೆ ಅವರು ಇದೇ ಕ್ಷೇತ್ರದಿಂದಲೇ ಸಂಸದರಾಗಿ ಆಯ್ಕೆಯಾಗಿದ್ದರು. ಇದೀಗ ಮತ್ತೊಂದು ಬಾರಿಗೆ ಜಯಪ್ರಕಾಶ್ ಹೆಗ್ಡೆ ಅವರು ಅದೃಷ್ಟ ಪರೀಕ್ಷೆಗೆ ಮುಂದಾಗಿದೆ. ಇನೊಂದೆಡೆಯಲ್ಲಿ ಬಿಜೆಪಿ ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಟಿಕೆಟ್ ನೀಡಿದ್ದು, ಈಗಾಗಲೇ ಪ್ರಚಾರ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ.
ಇದನ್ನೂ ಓದಿ : ಉತ್ತರದಲ್ಲಿ ಬಿಜೆಪಿ ದಿಗ್ವಿಜಯ : ಟ್ರೆಂಡ್ ಆಗ್ತಿದೆ ಮೋದಿ ಗ್ಯಾರಂಟಿ #ModiKiGuarantee
lok Sabha Election 2024 Udupi – Chikkamgalore Congress candidate K. Jayaprakash Hegde met former BJP EX MLA Halady Srinivas Shetty: Meeting of the leaders made interesting